Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಕೋವಿಡ್-ಒಮೈಕ್ರಾನ್ ವೈರಾಣು...

ರಾಜ್ಯದಲ್ಲಿ ಕೋವಿಡ್-ಒಮೈಕ್ರಾನ್ ವೈರಾಣು ಹರಡುವಿಕೆ ನಿಯಂತ್ರಣಕ್ಕೆ ಕಾರ್ಯತಂಡಗಳನ್ನು ರಚಿಸಿ ಮುಖ್ಯ ಕಾರ್ಯದರ್ಶಿ ಆದೇಶ

ವಾರ್ತಾಭಾರತಿವಾರ್ತಾಭಾರತಿ4 Jan 2022 8:29 PM IST
share
ರಾಜ್ಯದಲ್ಲಿ ಕೋವಿಡ್-ಒಮೈಕ್ರಾನ್ ವೈರಾಣು ಹರಡುವಿಕೆ ನಿಯಂತ್ರಣಕ್ಕೆ ಕಾರ್ಯತಂಡಗಳನ್ನು ರಚಿಸಿ ಮುಖ್ಯ ಕಾರ್ಯದರ್ಶಿ ಆದೇಶ

ಬೆಂಗಳೂರು, ಜ.4: ರಾಜ್ಯದಲ್ಲಿ ಕೋವಿಡ್-19 ಸೋಂಕು ಹಾಗೂ ಒಮೈಕ್ರಾನ್ ವೈರಾಣು ಹರಡುವಿಕೆಯನ್ನು ನಿಯಂತ್ರಿಸಲು ಅವಶ್ಯವಿರುವ ನಿರ್ವಹಣಾ ಕ್ರಮಗಳ ಮೇಲ್ವಿಚಾರಣೆ ಹಾಗೂ ತಕ್ಷಣಕ್ಕೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಕಾರ್ಯೋನ್ಮುಖರಾಗಲು ಅನುವಾಗುವಂತೆ ಕಾರ್ಯ ತಂಡಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಚಿಸಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಹಾಗೂ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ಸೇರಿದಂತೆ ಇಡೀ ರಾಜ್ಯ ಒಳಗೊಂಡೊಂತೆ ಕೋವಿಡ್-19 ವಾರ್ ರೂಮ್‍ಗೆ ಹಿರಿಯ ಐಎಎಸ್ ಅಧಿಕಾರಿ ಮುನಿಶ್ ಮೌದ್ಗಿಲ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಐಎಲ್‍ಐ ಮತ್ತು ಎಸ್‍ಎಆರ್‍ಐ ಪ್ರಕರಣಗಳನ್ನು 108 ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಗಾಗಿ ಕಳುಹಿಸುವ ವ್ಯವಸ್ಥೆ ಮಾಡುವ ತಂಡಕ್ಕೆ ಐಎಎಸ್ ಅಧಿಕಾರಿ ಆರ್.ವಿನೂತ್ ಪ್ರಿಯಾ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗಿದೆ.

ರಾಜ್ಯಮಟ್ಟದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸ್ಯಾಂಪಲ್ ಕಲೆಕ್ಷನ್, ಟೆಸ್ಟಿಂಗ್, ಲ್ಯಾಬ್ ಬಳಕೆ ಮಾಡುವ ತಂಡದ ನೇತೃತ್ವವನ್ನು ಐಎಎಸ್ ಅಧಿಕಾರಿ ಡಾ.ಶಾಲಿನಿ ರಜನೀಶ್ ಅವರಿಗೆ ವಹಿಸಲಾಗಿದೆ. ಹೋಮ್ ಐಸೋಲೇಷನ್ ಮತ್ತು ಕಂಟೋನ್ಮೆಂಟ್ ಝೋನ್ ಗುರುತಿಸುವ ತಂಡಕ್ಕೆ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಮುಖ್ಯಸ್ಥರಾಗಿದ್ದಾರೆ.

ರಾಜ್ಯಮಟ್ಟದಲ್ಲಿ ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್‍ಗಳ ಚಲನೆಯನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಐಎಎಸ್ ಅಧಿಕಾರಿಗಳಾದ ಪ್ರತಾಪ್ ರೆಡ್ಡಿ ಹಾಗೂ ಡಾ.ಎನ್.ಶಿವಶಂಕರ್‍ಗೆ ವಹಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್‍ಗಳ ಚಲನೆಯನ್ನು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಐಎಎಸ್ ಅಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರಿಗೆ ವಹಿಸಲಾಗಿದೆ.

ರಾಜ್ಯಮಟ್ಟದಲ್ಲಿ ಟೆಲಿ ಕೌನ್ಸಿಲಿಂಗ್, ಟೆಲಿ ಟ್ರಾಯಾಜಿಂಗ್, ಸಹಾಯವಾಣಿ-1912 ನಿರ್ವಹಣೆಯ ಜವಾಬ್ದಾರಿಯನ್ನು ಐಎಎಸ್ ಆಧಿಕಾರಿ ವಿಪಿನ್ ಸಿಂಗ್ ಹಾಗೂ ಬಿಸ್ವಜಿತ್ ಮಿಶ್ರ ಅವರಿಗೆ ವಹಿಸಲಾಗಿದೆ. ಖಾಸಗಿ, ಎನ್‍ಜಿಒ, ಕಾರ್ಪೋರೇಟ್ ವಲಯಗಳೊಂದಿಗೆ ಸಮನ್ವಯ ಸಾಧಿಸಲು ಐಎಎಸ್ ಅಧಿಕಾರಿ ಉಮಾ ಮಹಾದೇವನ್ ಅವರಿಗೆ ಹೊಣೆಗಾರಿಕೆ ನೀಡಲಾಗಿದೆ.

ಕೋವಿಡ್-19ರ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸರಕಾರದಿಂದ ಅತ್ಯಾವಶ್ಯಕ ಸೌಕರ್ಯಗಳನ್ನು ಒದಗಿಸುವ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಐಎಎಸ್ ಅಧಿಕಾರಿ ಪಲ್ಲವಿ ಆಕೃತಿ, ಅಂತರ್‍ರಾಷ್ಟ್ರೀಯ ಸಂಸ್ಥೆ ಮತ್ತು ಸಮುದಾಯಗಳೊಂದಿಗೆ ಸಮನ್ವಯ ಸಾಧಿಸಿ ಸಹಕಾರ ಪಡೆಯುವ ಹೊಣೆಗಾರಿಕೆಯನ್ನು ಐಎಎಸ್ ಅಧಿಕಾರಿ ಡಾ.ಪೊನ್ನುರಾಜ್ ಹಾಗೂ ಕೋವಿಡ್ ಸಂಬಂಧಿತ ಪರಿಕರಣಗಳನ್ನು ಆಮದು ಮಾಡಿಕೊಳ್ಳುವ ನೋಡಲ್ ಪ್ರಾಧಿಕಾರದ ಜವಾಬ್ದಾರಿಯನ್ನು ಐಎಎಸ್ ಅಧಿಕಾರಿಗಳಾದ ಉಮಾ ಮಹಾದೇವನ್ ಹಾಗೂ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಗೆ ವಹಿಸಿ ಆದೇಶ ಹೊರಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X