Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಎರಡು ವಾರ...

ಬೆಂಗಳೂರಿನಲ್ಲಿ ಎರಡು ವಾರ ಶಾಲಾ-ಕಾಲೇಜುಗಳು ಬಂದ್: ರಾಜ್ಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿ

ನೈಟ್ ಕರ್ಫ್ಯೂ ವಿಸ್ತರಣೆ; ಪ್ರತಿಭಟನೆಗಳು, ರ್‍ಯಾಲಿಗಳಿಗೆ ಅವಕಾಶವಿಲ್ಲ

ವಾರ್ತಾಭಾರತಿವಾರ್ತಾಭಾರತಿ4 Jan 2022 10:15 PM IST
share
ಬೆಂಗಳೂರಿನಲ್ಲಿ ಎರಡು ವಾರ ಶಾಲಾ-ಕಾಲೇಜುಗಳು ಬಂದ್: ರಾಜ್ಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿ

ಬೆಂಗಳೂರು, ಜ.4: ರಾಜ್ಯದಲ್ಲಿ ಕೋವಿಡ್-19 ಸೋಂಕು ಹಾಗೂ ಒಮೈಕ್ರಾನ್ ವೈರಾಣು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ರಾಜಧಾನಿ ಬೆಂಗಳೂರಿನಲ್ಲಿ 10 ಮತ್ತು 12ನೆ ತರಗತಿ ಹೊರತುಪಡಿಸಿ ಉಳಿದ ಎಲ್ಲ ಶಾಲಾ, ಕಾಲೇಜುಗಳ ಆಫ್‍ಲೈನ್ ತರಗತಿಗಳನ್ನು ರದ್ದುಗೊಳಿಸಲು ಸರಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಜ್ಞರು, ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಉನ್ನತಮಟ್ಟದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರಿನಲ್ಲಿ ಇವತ್ತು 3048 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಒಮೈಕ್ರಾನ್ 147 ಪ್ರಕರಣಗಳು ಪತ್ತೆಯಾಗಿವೆ. ಕಳೆದ ಮೂರು ದಿನಗಳಿಂದ ಕೋವಿಡ್ ಎರಡು ಅಥವಾ ಮೂರು ದಿನಗಳಲ್ಲಿ ದ್ವಿಗುಣ ಆಗುತ್ತಿದೆ. ಐದಾರು ದಿನಗಳಲ್ಲಿ 10 ಸಾವಿರ ಪ್ರಕರಣ ಆಗಬಹುದು. ಈಗಾಗಲೆ ಮಹಾರಾಷ್ಟ್ರದಲ್ಲಿ 10 ಸಾವಿರ ಗಡಿ ದಾಟಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ 10, 11 ಮತ್ತು 12ನೆ ತರಗತಿ ಹೊರತುಪಡಿಸಿ, ಪದವಿ ಕಾಲೇಜುಗಳು ಸೇರಿದಂತೆ ಎಲ್ಲ ಆಫ್‍ಲೈನ್ ತರಗತಿಗಳು ಮುಚ್ಚಲು ನಿರ್ಧರಿಸಲಾಗಿದೆ. ನಾಳೆ(ಗುರುವಾರ) ರಾತ್ರಿ 10 ಗಂಟೆಗೆ ಈ ಹೊಸ ನಿಯಮ ಜಾರಿಗೆ ಬರುತ್ತದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಆಹಾರ, ಹಾಲು, ತರಕಾರಿ, ಔಷಧ, ಹೊಟೇಲ್‍ಗಳಲ್ಲಿ ಪಾರ್ಸೆಲ್ ಪಡೆಯಲು ಅವಕಾಶ ಇರುತ್ತದೆ. ರಾತ್ರಿ ಕರ್ಫ್ಯೂವನ್ನು ಎರಡು ವಾರಗಳ ಕಾಲ ಮುಂದುವರೆಸಲಾಗಿದೆ ಎಂದು ಅಶೋಕ್ ತಿಳಿಸಿದರು.

ಸರಕಾರಿ ಕಚೇರಿಗಳಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಚಿತ್ರಮಂದಿರ, ಮಾಲ್, ಬಾರ್, ಪಬ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಶೇ.50ರಷ್ಟು ಸಾಮಥ್ರ್ಯದಷ್ಟೆ ಅನುಮತಿ ನೀಡಲಾಗಿದೆ. ಇಲ್ಲಿಗೆ ಭೇಟಿ ನೀಡುವವರು ಕೋವಿಡ್ ಎರಡು ಲಸಿಕೆಗಳನ್ನು ಪಡೆದಿರಬೇಕು. ಮದುವೆಗಳು ಹೊರಾಂಗಣದಲ್ಲಿ ಇದ್ದರೆ 200, ಒಳಾಂಗಣದಲ್ಲಿ 100 ಜನರಿಗೆ ಸೀಮಿತಗೊಳಿಸಲಾಗಿದೆ. ಅಲ್ಲಿಯೂ ಕೋವಿಡ್ ಎರಡು ಡೋಸ್ ಪಡೆದಿರುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದರು.

ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಮಹಾರಾಷ್ಟ್ರ, ತಮಿಳುನಾಡು, ದಿಲ್ಲಿ, ತೆಲಂಗಾಣದಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದನ್ನು ಅವಲೋಕಿಸಿದ್ದೇವೆ ಜೊತೆಗೆ, ಬೇರೆ ದೇಶಗಳಲ್ಲಿನ ಕ್ರಮಗಳ ಕುರಿತು ಚರ್ಚೆ ಮಾಡಿದ್ದೇವೆ. ಡಿಸೆಂಬರ್‍ನಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1.16ರಷ್ಟಿತ್ತು. ಕೇವಲ ನಾಲ್ಕು ದಿನಗಳಲ್ಲಿ ಇದು ಶೇ.3ರ ಗಡಿ ದಾಟಿದೆ ಎಂದರು.

ವಿದೇಶದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಪರೀಕ್ಷೆ ಮಾಡಿದ ನಂತರ ಕೇಂದ್ರ ಸರಕಾರ ಯಾವ ದೇಶಗಳು ಹೈ ರಿಸ್ಕ್ ಎಂದು ತಿಳಿಸಿದೆಯೋ ಆ ದೇಶಗಳಿಂದ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಿ ಪಾಸಿಟಿವ್ ಬಂದರೆ, ಟ್ರಯಾಜ್ ಮಾಡಿ ಕೋವಿಡ್ ಕೇರ್ ಸೆಂಟರ್‍ಗೆ ಕಳುಹಿಸಿಕೊಡುತ್ತೇವೆ. ಮನೆಗಳಿಗೆ ಕಳುಹಿಸುವುದಿಲ್ಲ. ಬಜೆಟ್ ಹೊಟೇಲ್, ಟು, ತ್ರಿ, ಫೈವ್ ಸ್ಟಾರ್ ಹೊಟೇಲ್‍ಗಳಿಗೆ ಕಳುಹಿಸುತ್ತೇವೆ. ಬಜೆಟ್ ಹೊಟೇಲ್‍ಗಳ ದರ ಸರಕಾರ ಭರಿಸುತ್ತದೆ. ಉಳಿದ ಹೊಟೇಲ್‍ಗಳ ದರ ಪ್ರಯಾಣಿಕರೆ ಭರಿಸಬೇಕು ಎಂದು ಅವರು ಹೇಳಿದರು.

ಹಾಸಿಗೆಗಳು, ಆಕ್ಸಿಜನ್, ಐಸಿಯು, ಅಗತ್ಯವಾಗಿ ಬೇಕಿರುವ ಔಷಧಿಗಳ ಸರಬರಾಜು, ಖರೀದಿ, ಸಿದ್ಧತೆಗಳ ಬಗ್ಗೆಯೂ ಸಂಪೂರ್ಣವಾಗಿ ಚರ್ಚೆ ಮಾಡಿದ್ದೇವೆ. ಬೆಂಗಳೂರಿನಲ್ಲಿ 8 ವಲಯಗಳಾಗಿ ವಿಂಗಡಿಸಿ, ಹಾಸಿಗೆಗಳ ಸಿದ್ಧತೆ, ಟ್ರಯಾಜ್, ಆ್ಯಂಬುಲೆನ್ಸ್, ಆಕ್ಸಿಜನ್ ಸಿದ್ಧತೆಗಳ ಕುರಿತು ಮೈಕ್ರೋ ಮ್ಯಾನೇಜ್‍ಮೆಂಟ್ ಮಾಡಲು ಐಎಎಸ್, ಐಪಿಎಸ್ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ ಎಂದು ಅವರು ಹೇಳಿದರು.

198 ವಾರ್ಡುಗಳಲ್ಲಿ ಕ್ಷೇತ್ರವಾರು ಆ್ಯಂಬುಲೆನ್ಸ್ ನೀಡಿದ್ದೇವೆ. ಗೋವಾ, ಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ರೈಲು, ರಸ್ತೆ, ವಿಮಾನ ಸೇರಿದಂತೆ ಯಾವುದೆ ಮಾರ್ಗದಲ್ಲಿ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗುವುದು, ಕಡ್ಡಾಯವಾಗಿ ಅವರು ಆರ್‍ಟಿಪಿಸಿಆರ್ ನೆಗೆಟಿವ್ ವರದಿ ತರಬೇಕು ಎಂಬ ನಿಯಮ ತಂದಿದ್ದೇವೆ ಎಂದು ಸುಧಾಕರ್ ಹೇಳಿದರು.

ಹೊಸ ವರ್ಷದ ಸಂಭ್ರಮಕ್ಕೆ ಗೋವಾಗೆ ಹೋಗಿ ಬಂದವರಲ್ಲಿ ಪಾಸಿಟಿವ್ ಪ್ರಕರಣ ಹೆಚ್ಚಿದೆ. ಮೊದಲನೆ, ಎರಡನೆ ಅಲೆಗೆ ಹೋಲಿಸಿದರೆ ಮೂರನೆ ಅಲೆ ಅಷ್ಟೊಂದು ಭೀಕರ ವ್ಯಾಧಿ ಅಲ್ಲ, ವೆಂಟಿಲೇಟರ್, ಆಕ್ಸಿಜನ್ ಅವಶ್ಯಕತೆ ಬಹಳಷ್ಟು ಕಡಿಮೆಯಾಗುತ್ತದೆ. ಅತೀ ಹೆಚ್ಚು ಸೋಂಕಿತರು ಆದಾಗ ಆಸ್ಪತ್ರೆ ಮೇಲೆ ಒತ್ತಡ ಹೆಚ್ಚುತ್ತದೆ. ಪರಿಸ್ಥಿತಿ ಕೈ ಮೀರಿ ಹೋಗದಂತೆ ಸರಕಾರ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು. 

ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಇಲ್ಲಿದ್ದರೆ ಅದಕ್ಕೆ ದಂಡ ನಿಗದಿ ಮಾಡಲಾಗಿದೆ. ಯಾವುದೆ ಧಾರ್ಮಿಕ, ಸಂಘ ಸಂಸ್ಥೆಗಳು, ಯಾವುದೆ ಹೋರಾಟದ ಕಾರ್ಯಕ್ರಮಗಳೇ ಆಗಲಿ ಅವುಗಳಿಗೆ ಅವಕಾಶವಿಲ್ಲ. ಮುಂದಿನ ಎರಡು ವಾರ ಯಾರು ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು. ಸರಕಾರದ ನಿರ್ಧಾರಕ್ಕೆ ಗೌರವ ಕೊಟ್ಟು ಜನರ ಹಿತವನ್ನು ಕಾಯುವ ಕೆಲಸ ಮಾಡಬೇಕು ಎಂದು ಸುಧಾಕರ್ ಮನವಿ ಮಾಡಿದರು.

ನಾವು ಯಾವುದೆ ವೈಯಕ್ತಿಕ ಸಂಘ ಸಂಸ್ಥೆಗಳ ವಿಚಾರ ಮುಂದಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿಲ್ಲ. ರಾಜ್ಯದ ಆರೋಗ್ಯ, ಪ್ರಾಣ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ಯಾವುದೆ ರ್ಯಾಲಿ, ಪ್ರತಿಭಟನೆಗಳು, ಜಾತ್ರೆ ಮಾಡುವಂತಿಲ್ಲ. ಜನ ಜಂಗುಳಿ ಸೇರುವಂತಿಲ್ಲ. ಇದು ಎಲ್ಲ ರಾಜಕೀಯ ಪಕ್ಷಗಳಿಗೂ ಅನ್ವಯಿಸುತ್ತದೆ. ಮೆಟ್ರೋ, ಬಿಎಂಟಿಸಿಗೆ ಸಂಬಂಧಿಸಿದಂತೆ ಅವರೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುತ್ತಾರೆ.

ಆರ್.ಅಶೋಕ್, ಕಂದಾಯ ಸಚಿವ

ಬೆಂಗಳೂರಿಗೆ ಸಂಬಂಧಿಸಿದಂತೆ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಪ್ರತಿಯೊಂದು ಕ್ಷೇತ್ರಕ್ಕೂ ತಲಾ 2 ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್‍ಗಳಲ್ಲಿ 50 ಜನರಿಗೆ ಮಾತ್ರ ಪ್ರಾರ್ಥನೆ ಮಾಡಲು ಅವಕಾಶ.

ಆರ್.ಅಶೋಕ್ ಕಂದಾಯ ಸಚಿವ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X