ಕಡಬ: ರಸ್ತೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ

ಕಡಬ : ಬೈಕ್ ಹಾಗೂ ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬದ ಕಾಲೇಜ್ ಕ್ರಾಸ್ ನಲ್ಲಿ ಬುಧವಾರ ಸಂಭವಿಸಿದೆ.
ಗಾಯಾಳು ಬೈಕ್ ಸವಾರನನ್ನು ಮರ್ಧಾಳ ನಿವಾಸಿ ಜೀವನ್ ಎಂದು ತಿಳಿದುಬಂದಿದೆ.
ಕಾಲೇಜ್ ಕ್ರಾಸ್ ನಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಗೂಡ್ಸ್ ವಾಹನವು ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ಕಾರ್ಯಕ್ರಮ ನಿಮಿತ್ತ ಅದೇ ದಾರಿಯಿಂದ ತೆರಳುತ್ತಿದ್ದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿಯವರು ಗಾಯಾಳುವನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿದ್ದಾರೆ. ಗಾಯಾಳುವಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.








.jpeg)

