Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ನೀರಿಗಾಗಿ ನಡಿಗೆ, ಹಿಂದೆ ಸರಿವ...

'ನೀರಿಗಾಗಿ ನಡಿಗೆ, ಹಿಂದೆ ಸರಿವ ಪ್ರಶ್ನೆಯೇ ಇಲ್ಲ; ಡಿ.ಕೆ. ಶಿವಕುಮಾರ್

"ಇದು ಬಿಜೆಪಿ ಲಾಕ್ ಡೌನ್, ಬಿಜೆಪಿ ಕರ್ಫ್ಯೂ"

ವಾರ್ತಾಭಾರತಿವಾರ್ತಾಭಾರತಿ5 Jan 2022 1:57 PM IST
share
ನೀರಿಗಾಗಿ ನಡಿಗೆ, ಹಿಂದೆ ಸರಿವ ಪ್ರಶ್ನೆಯೇ ಇಲ್ಲ; ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.5: ಇದು ಕೋವಿಡ್ ಲಾಕ್ ಡೌನ್ ಅಲ್ಲ, ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ ಡೌನ್. ಇಲ್ಲಿ ಯಾವುದೇ ಟಫ್ ರೂಲ್ಸ್ ಇಲ್ಲ. ಬಿಜೆಪಿಯವರು ರಾಜಕಾರಣ ಮಾಡಲು ಟಫ್ ಆಗಿದೆ, ಜನ ಅವರಿಗೆ ಟಫ್ ಆಗಿ ಉತ್ತರ ನೀಡುತ್ತಿದ್ದಾರೆ. ಅದಕ್ಕಾಗಿ ಈ ನಿರ್ಬಂಧ ಹೇರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬುಧವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಒಂದೇ ದಿನ ಮೂರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಸರಕಾರ ಹೇಳುತ್ತಿದೆ. ರಾಜ್ಯದಲ್ಲಿ 6 ಕೋಟಿ ಜನ ಇದ್ದಾರೆ. ಸೋಂಕಿತರ ಸಂಖ್ಯೆ 2 ರಿಂದ 3 ಸಾವಿರಕ್ಕೆ ಏರಿದೆ ಎಂದು ಹೇಳುತ್ತಿದ್ದಾರೆ. ಆ ಸೋಂಕಿತರು ಎಲ್ಲಿದ್ದಾರೆ ಎಂದು ಪಟ್ಟಿ ಕೊಟ್ಟರೆ ನಾವು ಹೋಗಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ ಎಂದರು.

ಸರಕಾರದವರು ರ‍್ಯಾಲಿ, ಪ್ರತಿಭಟನೆ ಮಾಡಬೇಡಿ ಎಂದಿದ್ದಾರೆ. ನಮ್ಮದು ನೀರಿಗಾಗಿ ನಡಿಗೆ ('ವಾಕ್ ಫಾರ್ ದಿ ವಾಟರ್'). ನಾವು ನೀರಿಗಾಗಿ ನಡೆಯುತ್ತೇವೆ ಅಷ್ಟೇ. ಜನರ ಹಿತಕ್ಕಾಗಿ, ಕುಡಿಯುವ ನೀರಿಗಾಗಿ, ಜನರ ಭಾವನೆ, ಧ್ವನಿಗಾಗಿ, ರೈತರ ರಕ್ಷಣೆಗಾಗಿ ಬೆಂಗಳೂರಿನ ನಾಗರಿಕರಿಗಾಗಿ ನಾವು ಮನವಿ ಮಾಡುತ್ತಿದ್ದೇವೆ. ನಮ್ಮದು ಹೋರಾಟವಲ್ಲ ಮನವಿ ಎಂದು ಶಿವಕುಮಾರ್ ಹೇಳಿದರು.

ಸರಕಾರದಿಂದ ನೋಟಿಸ್: ಸರಕಾರ ನಿರ್ಬಂಧ ಎಂದು ನೋಟಿಸ್ ಜಾರಿ ಮಾಡಿದ್ದಾರೆ. ನಾವು ರ‍್ಯಾಲಿ, ಧರಣಿ ಮಾಡುವುದಿಲ್ಲ. ನೀರಿಗಾಗಿ ನಡೆಯುತ್ತೇವೆ. ರಸ್ತೆಯಲ್ಲಿ ಯಾರೂ ನಡೆಯಬಾರದಾ? ಇಡೀ ರಾಜ್ಯದಲ್ಲಿ ರಸ್ತೆಯಲ್ಲಿ ಯಾರೂ ಓಡಾಡಬಾರದಾ? ಅದನ್ನು ತಡೆಯಲು ಹೇಗೆ ಸಾಧ್ಯ? ನನಗೆ ಒಂದು ವಿಚಾರದಲ್ಲಿ ಬಹಳ ಸಂಕಟವಾಗುತ್ತಿದೆ. ಈಗಾಗಲೇ ಜನ ಸಂಕಷ್ಟಕ್ಕೆ ಸಿಕ್ಕಿದ್ದಾರೆ. ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು, ಕಾರ್ಮಿಕರು ಒದ್ದಾಡುತ್ತಿದ್ದಾರೆ. ಅವರ ಮೇಲೆ ಅನಗತ್ಯವಾಗಿ ಮತ್ತೆ ಲಾಕ್‌ಡೌನ್ ಹೇರುವುದು ಎಷ್ಟರ ಮಟ್ಟಿಗೆ ಸರಿ? ಮೊದಲು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಿ ಎಂದು ಅವರು ಹೇಳಿದರು.

ಮಾರ್ಗಸೂಚಿ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನನ್ನ ಬ್ರದರ್ ಸುಧಾಕರ್ ಮೊದಲ ಅಲೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಮಾಡಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡಿದರಲ್ಲಾ ಅದಕ್ಕೆ ಸಂಬಂಧಿಸಿದಂತೆ ಮೊದಲು ಪ್ರಕರಣ ದಾಖಲಿಸಿಕೊಳ್ಳಲಿ. ಆಗಲೂ ಮಾರ್ಗಸೂಚಿ ಇತ್ತಲ್ಲವೇ? ಅವರ ಮಕ್ಕಳ ಮೇಲೆ ಹಾಕುವುದು ಬೇಡ" ಎಂದರು.

ಮಾರ್ಗಸೂಚಿ ಉಲ್ಲಂಘಿಸಿದ ಸಚಿವ ಬಿ.ಶ್ರೀರಾಮಲು, ಮದುವೆ, ಸಭೆ, ಸಮಾರಂಭಕ್ಕೆ ಹೋಗಿದ್ದ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಮೇಲೆ ಪ್ರಕರಣ ದಾಖಲಿಸಲಿ. ಜನಾಶೀರ್ವಾದ ಯಾತ್ರೆ ಮಾಡಿದ ಕೇಂದ್ರ ಬಿಜೆಪಿ ಮಂತ್ರಿಗಳ ಮೇಲೆ ಪ್ರಕರಣ ದಾಖಲಿಸಲಿ. ಅದನ್ನು ಬಿಟ್ಟು ನನಗೆ ವಾರೆಂಟ್ ಕಳುಹಿಸಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಪಾದಯಾತ್ರೆ ಮಾಡಿಯೇ ತೀರುತ್ತೀರಾ, ಜ.9 ರಂದು ವೀಕೆಂಡ್ ಕರ್ಫ್ಯೂ ಇದೆ, ದಿನಾಂಕವೇನಾದರೂ ಬದಲಾಗುತ್ತಾ, ನಿಗದಿಯಂತೆ ಪಾದಯಾತ್ರೆ ಉದ್ಘಾಟನೆಯಾಗುತ್ತಾ ಎಂಬ ಪ್ರಶ್ನೆಗೆ, ‘ನಾವು ಪಾದಯಾತ್ರೆ ಮಾಡುತ್ತಿಲ್ಲ. ನೀರಿಗಾಗಿ ನಡೆಯುತ್ತೇವೆ, ನೀರಿಗಾಗಿ ನಡೆಯಬಾರದೇ? ನಾವು ಮನೆಯಿಂದ ಯಾರು ಹೊರಬಂದು ಓಡಾಡಬಾರದೇ? ಸರಕಾರದ ಯಾರೂ ರಸ್ತೆಯಲ್ಲಿ ಓಡಾಡುವುದಿಲ್ಲವೇ?’ ಎಂದು ಅವರು ಮರು ಪ್ರಶ್ನಿಸಿದರು.

ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಪಾದಯಾತ್ರೆ ದಿನಾಂಕ ಬದಲಾವಣೆ ಮಾಡುತ್ತೀರಾ ಎಂಬ ಪ್ರಶ್ನೆಗೆ, ‘ಯಾವ ಬದಲಾವಣೆಯೂ ಇಲ್ಲ. ಯಾರು ಹೇಳಿದ್ದು ಅದು ಪಾದಯಾತ್ರೆ ಅಂತಾ. ಅದು ನೀರಿಗಾಗಿ ನಡಿಗೆ ಅಷ್ಟೇ. ಈಗಾಗಲೇ ನಮ್ಮ ಶಾಸಕಾಂಗ ಪಕ್ಷದ ನಾಯಕರು, ಕಾರ್ಯಾಧ್ಯಕ್ಷರು, ಬೆಂಗಳೂರು ನಗರ ಪ್ರದೇಶದ ನಾಯಕರ ಜತೆ ಚರ್ಚೆ ಮಾಡುತ್ತೇನೆ. ನಾವು ಕೋವಿಡ್ ಮಾರ್ಗಸೂಚಿ ಅನುಸರಿಸುತ್ತೇವೆ. ನಿಯಮ ಪಾಲಿಸುತ್ತೇವೆ. 100 ಜನ ವೈದ್ಯರ ತಂಡ ಅದಕ್ಕೆ ಸಿದ್ಧವಿದೆ ಎಂದು ಅವರು ತಿಳಿಸಿದರು.

ಸರಕಾರ ವರ್ತಕರು, ವ್ಯಾಪಾರಸ್ಥರ ಮೇಲೆ ಗದಾಪ್ರಹಾರ ಮಾಡುತ್ತಿರುವುದನ್ನು ನೋಡಿ ಸಂಕಟವಾಗುತ್ತಿದೆ. ಅವರ ಬದುಕು ಏನಾಗಬೇಕು. ಎರಡು ವರ್ಷಗಳಿಂದ ಅವರು ಸಾಯುತ್ತಿದ್ದಾರೆ. ಇವರ ರಾಜಕೀಯಕ್ಕಾಗಿ, ನಮ್ಮ ಮೇಲಿನ ದ್ವೇಷಕ್ಕೆ, ವರ್ತಕರು, ವ್ಯಾಪಾರಸ್ಥರು, ಪ್ರವಾಸೋದ್ಯಮದವರು, ಬೀದಿ ವ್ಯಾಪಾರಿಗಳಿಗೆ ಬರೆ ಹಾಕುತ್ತಿದ್ದಾರೆ. ಸರಕಾರ ಅವರನ್ನು ಹತ್ಯೆ ಮಾಡುತ್ತಿದೆ. ಈ ಸರಕಾರಕ್ಕೆ ಜನ ಶಾಪ ಹಾಕುತ್ತಿದ್ದಾರೆ. ಅವರ ಶಾಪ ತಡೆದುಕೊಳ್ಳಲು ಇವರಿಗೆ ಸಾಧ್ಯವಿಲ್ಲ ಎಂದು ಶಿವಕುಮಾರ್ ಹೇಳಿದರು.

ನನ್ನ ಮೇಲೆ, ಶಾಸಕರ ಮೇಲೆ, ಪರಿಷತ್ ಸದಸ್ಯರ ಮೇಲೆ ವಿಪತ್ತು ನಿರ್ವಹಣೆ ಪ್ರಕರಣ ದಾಖಲಿಸಿದ್ದಾರೆ. ಇವರು ಮನುಷ್ಯರಾ? ಅವರ ಪಕ್ಷದ ನಾಯಕರು ಪ್ರತಿಭಟನೆ, ಮೆರವಣಿಗೆ ಮಾಡಿದರು. ನಿನ್ನೆ ಪ್ರಧಾನಿ ದೊಡ್ಡ ದೊಡ್ಡ ಸಮಾವೇಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಡಿ.ಕೆ. ಸುರೇಶ್ ಈಗ ನನ್ನನ್ನು ಭೇಟಿ ಮಾಡಿ, ರಾಮನಗರಕ್ಕೆ ನಡಿಗೆ ಮಾರ್ಗ ನೋಡಲು ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ಜನರ ಪ್ರಾಣ ಮುಖ್ಯ ಎಂಬ ಸಚಿವ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಅವರಿಗೆ ಜನರ ಪ್ರಾಣ ಮುಖ್ಯವಲ್ಲ. ಅವರ ಪಕ್ಷ ಮುಖ್ಯ. ಅವರು ಜನರ ಪ್ರಾಣ ತೆಗೆಯುತ್ತಿದ್ದಾರೆ’ ಎಂದರು. ಪಾದಯಾತ್ರೆ ಹೆಸರು ಬದಲಾಗುತ್ತದೇಯೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದನ್ನು ಯಾತ್ರೆ ಎಂದು ಯಾಕೆ ಕರೆಯುತ್ತೀದ್ದೀರಿ? ಇದು ನೀರಿಗೋಸ್ಕರ ನಡಿಗೆ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X