Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ;...

ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ; ಸರ್ಕಾರದ ನಿರ್ಧಾರಕ್ಕೆ ಸಚಿವ ಈಶ್ವರಪ್ಪ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ5 Jan 2022 3:03 PM IST
share
ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ; ಸರ್ಕಾರದ ನಿರ್ಧಾರಕ್ಕೆ ಸಚಿವ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ : ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೋನ ಜಾಸ್ತಿ ಇರುವುದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ. ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ. ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಅಷ್ಟಿಲ್ಲ. ಕೆಲವೆಡೆ ಬೆರಳೆಣಿಕೆಯ ಸಂಖ್ಯೆಯಲ್ಲಿ ಇದ್ದು, ಜಾಸ್ತಿ ಅಂದರೆ 10 ರವರೆಗೆ ಇದೆ. ಬೆಂಗಳೂರಿನಲ್ಲಿ ಜಾಸ್ತಿ ಇದೆ ಎಂದು ಇಡೀ ರಾಜ್ಯಕ್ಕೆ ರೂಲ್ಸ್ ತರುವುದು ಸರಿಯೇ ಎಂದು ಅನೇಕರು ನನಗೆ ಪ್ರಶ್ನೆ ಮಾಡುತ್ತಿದ್ದಾರೆ ಎಂದರು.

ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಎಲ್ಲಾ ಕಡೆಯಿಂದ ನನಗೆ ಕರೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಜಾಗೃತಿ ವಹಿಸಬೇಕು, ನಾವು ಸಹಕಾರ ಕೊಡುತ್ತೇವೆ. ನಾವು ಯಾವುದೇ ಖರೀದಿಗೂ ಬೆಂಗಳೂರಿಗೆ ಹೋಗುವುದಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ, ಶಾಲೆಗಳಿಗೆ ಹೋಗುವುದಕ್ಕೆ ಅವಕಾಶ ಮಾಡಿಕೊಡಿ ಎಂದು ಕೇಳುತ್ತಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣ ಮಾಡುವುದು ಎಲ್ಲರ ಕರ್ತವ್ಯ. ಅಷ್ಟು ಇಲ್ಲದಿರುವ ಸಂದರ್ಭದಲ್ಲಿ ನಮ್ಮ ಮೇಲೆ ಹೇರಿದರೆ ನಮ್ಮ ವ್ಯವಹಾರಕ್ಕೆ ತೊಂದರೆ ಆಗುತ್ತದೆ. ಇದಕ್ಕೆ ಮುಂಜಾಗ್ರತೆ ತೆಗೆದುಕೊಳ್ಳುತ್ತಿದ್ದೇವೆ. ಖಂಡಿತಾ ಮಾಸ್ಕ್ ಧರಿಸುತ್ತೇವೆ. ಸ್ಯಾನಿಟೈಸರ್ ಬಳಸುತ್ತೇವೆ. ಅಂತರ ಕಾಪಾಡಿಕೊಳ್ಳುತ್ತೇವೆ. ದಯವಿಟ್ಟು ನಮಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ, ಮುಖ್ಯಮಂತ್ರಿ ಗಳು ಹಾಗು ಉಳಿದವರ ಜೊತೆ ಮಾತನಾಡುತ್ತೇನೆ. ಬೆಂಗಳೂರಿನಲ್ಲಿ ಖಂಡಿತಾ ಬಿಗಿ ಮಾಡಬೇಕು. ಗಡಿಗಳಲ್ಲಿ ಬಿಗಿ ಮಾಡಲೇ ಬೇಕು. ಇಂತಹ ಸಲಹೆಯನ್ನು ನಾಳೆ ಸಚಿವ ಸಂಪುಟದಲ್ಲಿ ಕೊಡುತ್ತೇನೆ. ಸಾರ್ವಜನಿಕರ ಅಭಿಪ್ರಾಯವನ್ನು ನಾನು ಕ್ಯಾಬಿನೆಟ್ ಮುಂದೆ ಇಡುತ್ತೇನೆ. ಆಟೋ ರಿಕ್ಷಾ ಡ್ರೈವರ್, ಹಮಾಲರು ಎಲ್ಲಿ ಹೋಗಬೇಕು, ಕೂಲಿ ಕಾರ್ಮಿಕರು, ಟೈಲರ್ ಎಲ್ಲರಿಗೂ ತೊಂದರೆ ಆಗುತ್ತದೆ. ರಾಜ್ಯದ ಜನರ ಅಭಿಪ್ರಾಯ ವನ್ನು ಸಚಿವ ಸಂಪುಟದ ಮುಂದೆ, ಸಿಎಂ ಮುಂದೆ ಇಡುತ್ತೇನೆ ಎಂದರು.

ತವರು ಕ್ಷೇತ್ರದ ಜಾತ್ರೆಯನ್ನ ಸಮರ್ಥಿಸಿಕೊಂಡ ಗೃಹ ಸಚಿವ:
ಕೊರೋನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಆದ್ರೆ ತೀರ್ಥಹಳ್ಳಿಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಡೆದಿದೆ ಎನ್ನಲಾದ ರಾಮೇಶ್ವರ ದೇವಸ್ಥಾನದ ಜಾತ್ರೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥಿಸಿಕೊಂಡಿದ್ದಾರೆ. ಕಳೆದ ಮೂರು ದಿನಗಳಿಂದ ತೀರ್ಥಹಳ್ಳಿಯಲ್ಲಿ ಪ್ರಸಿದ್ಧ ರಾಮೇಶ್ವರ ದೇವಸ್ಥಾನದ ಜಾತ್ರೆ ನಡೆಯುತ್ತಿದೆ. ಸ್ಥಳೀಯರ ಒತ್ತಾಯದಂತೆ ಜಾತ್ರೆಗೆ ನಿರ್ಬಂಧ ಹೇರಿಲ್ಲ. ಜಾತ್ರೆಯಲ್ಲಿ ಕೊವಿಡ್ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಅದರ ಮುಂದೆ ಎಲ್ಲವೂ ದೇವರ ಮೇಲೆ ಬಿಟ್ಟಿದ್ದು ಎಂದು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X