ಪಾದಯಾತ್ರೆ ಖಚಿತ, ಯಾವುದೇ ಬದಲಾವಣೆಯಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನ ಆಗ್ರಹಿಸಿ ಜ.9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಬಗ್ಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ಪಾದಯಾತ್ರೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಜನರ ಪ್ರಾಣ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು.
ಪಾದಯಾತ್ರೆ ತಡೆಯಲು ಸರ್ಕಾರ ಕಠಿಣ ನಿರ್ಬಂಧಗಳನ್ನು ವಿಧಿಸಿದೆಯೇ ಎಂಬ ಪ್ರಶ್ನೆಗೆ, ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Next Story





