Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದುಳಿದ ವರ್ಗಗಳ ಏಳಿಗೆಯನ್ನು...

ಹಿಂದುಳಿದ ವರ್ಗಗಳ ಏಳಿಗೆಯನ್ನು ಕಾಂಗ್ರೆಸ್ ಎಂದೂ ಬಯಸಲಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ವಾರ್ತಾಭಾರತಿವಾರ್ತಾಭಾರತಿ5 Jan 2022 5:27 PM IST
share
ಹಿಂದುಳಿದ ವರ್ಗಗಳ ಏಳಿಗೆಯನ್ನು ಕಾಂಗ್ರೆಸ್ ಎಂದೂ ಬಯಸಲಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಹಿಂದುಳಿದ ವರ್ಗಗಳ ಏಳಿಗೆಯನ್ನು ಕಾಂಗ್ರೆಸ್ ಎಂದೂ ಬಯಸಲಿಲ್ಲ. ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಂಡರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯದ ನಂತರ ಈ ದೇಶ ಆಳಿದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳು ಸೇರಿದಂತೆ ಯಾವುದೇ ಕೆಳ ಸಮುದಾಯದ ಕಲ್ಯಾಣಕ್ಕಾಗಿ ಏನೂ ಮಾಡಲಿಲ್ಲ. ಅವರನ್ನು ವೋಟ್ ಹಾಕಲು ಮಾತ್ರ ಬಳಸಿಕೊಂಡು ತಾವು ಸಿಂಹಾಸನದಲ್ಲಿ ಕೂತು ಮತ್ತಷ್ಟು ಶೋಷಿತರನ್ನಾಗಿ ಮಾಡಿದರು ಎಂದು ದೂರಿದರು.

ಬಿಜೆಪಿ ಈಗ ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಮೋದಿ ಅವರೂ ಹಿಂದುಳಿದವರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ರಾಜ್ಯ ಸರ್ಕಾರವಂತೂ ಒಂದು ರೀತಿಯಲ್ಲಿ ಶೋಷಿತರೇ ಆಗಿದ್ದ ಹಿಂದುಳಿದ ವರ್ಗದವರಿಗೆ ಶಿಕ್ಷಣ, ಆರೋಗ್ಯ, ವಿವಿಧ ಯೋಜನೆಗಳನ್ನು ತಲುಪಿಸುವ ಮೂಲಕ ಅವರನ್ನು ನಿಜವಾಗಿ ಮುಖ್ಯವಾಹಿನಿಗೆ ತರುತ್ತಿದೆ. ಬಿಜೆಪಿ ಈಗಾಗಲೇ ಒಬಿಸಿ ಸಮುದಾಯವನ್ನು ತಲುಪಿದೆ ಎಂದರು.

ಮತಾಂತರ ಎಂಬುದು ದೊಡ್ಡ ಪಿಡುಗಾಗಿದೆ. ಇದು ಕೇವಲ ದಲಿತರನ್ನು ಮಾತ್ರ ಸುತ್ತಿಕೊಂಡಿಲ್ಲ. ಹಿಂದುಳಿದ ವರ್ಗಗಳ ಬಳಿಯೂ ಬಂದು ನಿಂತಿದೆ. ಹಾಗಾಗಿ, ಮತಾಂತರ ನಿಷೇಧ ಕಾಯ್ದೆಯನ್ನು ನಾವು ಜಾರಿಗೆ ತಂದೇ ತರುತ್ತೇವೆ. ಬಲವಂತದ ಮತಾಂತರ ಮಾಡಿದರೆ ಶಿಕ್ಷೆ ಖಚಿತ ಎಂದು ಕಾಯ್ದೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಮತಾಂತರವಾಗಿಯೂ ಸೌಲಭ್ಯಗಳನ್ನು ಬಳಸಿಕೊಳ್ಳುತ್ತಿರುವ ಜಾತಿಗಳ ಜನರನ್ನು ನಾವು ನೋಡುತ್ತಿದ್ದೇವೆ. ಇನ್ನುಮುಂದೆ ಅವರಿಗೆ ಮೂಲ ಜಾತಿಯ ಸೌಲಭ್ಯ ಪಡೆಯಲು ಯಾವುದೇ ಅವಕಾಶ ಇರುವುದಿಲ್ಲ. ಆಮಿಷವೊಡ್ಡಿ ಮತಾಂತರ ಮಾಡಿದವರಿಗೆ ಇಲ್ಲಿಯವರೆಗೂ ಶಿಕ್ಷೆ ಎಂಬುದು ಇರಲಿಲ್ಲ. ಆದರೆ, ಈಗ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಅಳವಡಿಸಲಾಗಿದೆ ಎಂದರು.

ನಮ್ಮದು ದೇಶ ಕಟ್ಟುವ ಸಿದ್ಧಾಂತ. ಇಲ್ಲಿ ರಾಷ್ಟ್ರೀಯತೆಗೆ ಹೆಚ್ಚು ಒತ್ತು. ಹಿಂದೂ ಧರ್ಮವೆಂದರೆ ಕೇವಲ ಜಾತಿಯಲ್ಲ, ಅದೊಂದು ಸಂಸ್ಕೃತಿಯೇ ಆಗಿದೆ. ಎಲ್ಲಾ ಜಾತಿಗಳ ರಕ್ಷಣೆ ಇಲ್ಲಿ ಆಗುತ್ತದೆ. ರಾಜ್ಯದಲ್ಲಿ 17 ಜನ ಹಿಂದುಳಿದ ವರ್ಗಗಳಿಗೆ ಸೇರಿದ ಶಾಸಕರಿದ್ದಾರೆ. ಸಂಸದರು, ವಿಧಾನ ಪರಿಷತ್, ಗ್ರಾಪಂ, ಜಿಪಂ, ತಾಪಂ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರು ಆಯ್ಕೆಯಾಗಿದ್ದಾರೆ. ಈ ಎಲ್ಲರ ಸಹಕಾರದಲ್ಲಿ ಹಿಂದುಳಿದ ವರ್ಗಗಳನ್ನು ಮತ್ತಷ್ಟು ಗಟ್ಟಿಯಾಗಿ ಬಿಜೆಪಿ ಮಾಡುತ್ತದೆ ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಹಿಂದುಳಿದ ವರ್ಗಗಳಿಗೆ ಯಾವ ಕೀಳರಿಮೆಯೂ ಬೇಡ. ಭಾರತೀಯ ಪುರಾಣದಲ್ಲಿ, ಪುಣ್ಯ ಕತೆಗಳಲ್ಲಿ, ಇತಿಹಾಸದಲ್ಲಿ ಹಿಂದುಳಿದ ವರ್ಗಗಳ ನಾಯಕರು ರಾಷ್ಟ್ರ ಭಕ್ತಿಯ ಜೊತೆಗೆ ಬ್ರಿಟೀಷರ ವಿರುದ್ಧ ಹೋರಾಟ, ಸ್ವಾತಂತ್ರ್ಯಕ್ಕಾಗಿ ಹೋರಾಟ, ದೇವರನ್ನು ಒಲಿಸಿಕೊಳ್ಳುವ ರೀತಿ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಇವರ್ಯಾರನ್ನು ನಾವು ಹಿಂದುಳಿದ ವರ್ಗಗಳಿಂದ ಬಂದವರು ಎಂದು ಹೇಳಿಲ್ಲ ಎಂದರು.

ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಶಾಸಕರಾದ ಡಿ.ಎಸ್. ಅರುಣ್, ರುದ್ರೇಗೌಡ, ಹರತಾಳು ಹಾಲಪ್ಪ, ಭಾನುಪ್ರಕಾಶ್, ಅಶ್ವತ್ಥನಾರಾಯಣ್, ಯಶ್ ಪಾಲ್ ಸುವರ್ಣ, ಅರುಣ್ ಜೀ, ಆರ್.ಕೆ. ಸಿದ್ಧರಾಮಣ್ಣ, ಟಿ.ಡಿ. ಮೇಘರಾಜ್, ದತ್ತಾತ್ರಿ, ಸುನಿತಾ ಅಣ್ಣಪ್ಪ, ಚನ್ನಬಸಪ್ಪ, ಜ್ಯೋತಿ ಪ್ರಕಾಶ್, ಗುರುಮೂರ್ತಿ, ವಿವೇಕಾನಂದ, ಮಾಲತೇಶ್, ಮೊದಲಾದವರಿದ್ದರು. ಅಶೋಕ್ ಮೂರ್ತಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X