Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾರಾಂತ್ಯ ಕರ್ಫ್ಯೂ ಹಿನ್ನೆಲೆ; ಪೂರ್ವ...

ವಾರಾಂತ್ಯ ಕರ್ಫ್ಯೂ ಹಿನ್ನೆಲೆ; ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಈ ವಾರ ಅವಕಾಶ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

► ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಪ್ರವೇಶ ನಿರ್ಬಂಧ ► ಶಾಲಾ ಕಾಲೇಜುಗಳು ಬಂದ್, ಪರೀಕ್ಷೆಗಳಿದ್ದಲ್ಲಿ ಅವಕಾಶ

ವಾರ್ತಾಭಾರತಿವಾರ್ತಾಭಾರತಿ5 Jan 2022 6:27 PM IST
share
ವಾರಾಂತ್ಯ ಕರ್ಫ್ಯೂ ಹಿನ್ನೆಲೆ; ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಈ ವಾರ ಅವಕಾಶ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು, ಜ.5: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿದರು.

ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಸಾರ್ವಜನಿಕ ಕಾರ್ಯಕ್ರಮಗಳಿಗೆ ಈ ವಾರ ಅವಕಾಶ ಕಲ್ಪಿಸಲಾಗುತ್ತಿದೆ. ಮುಂದಿನ ವಾರದಿಂದ ಕರ್ಫ್ಯೂ ಮುಂದುವರಿದರೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗುವುದು. ಸುಬ್ರಹ್ಮಣ್ಯ, ಕಟೀಲು, ಧರ್ಮಸ್ಥಳ ಕ್ಷೇತ್ರ ಸೇರಿದಂತೆ ಎಲ್ಲಾ ದೇವಾಲಯ, ಚರ್ಚ್, ಮಸೀದಿಗಳಲ್ಲಿ ವೀಕೆಂಡ್ ಕರ್ಫ್ಯೂನಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕಂಬಳ, ಧರ್ಮನೇಮ, ಬ್ರಹ್ಮಕಲಶೋತ್ಸವ ಸೇರಿದಂತೆ ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ಕೂಡಾ ಮುಂದೂಡುವಂತೆ ಸೂಚಿಸಲಾಗಿದೆ. ನಿಗದಿತ ಸಮಯದಲ್ಲೇ ಮಾಡಬೇಕಾದ ಕೆಲವೊಂದು ಸಾಂಪ್ರದಾಯಿಕ ಕಾರ್ಯಕ್ರಮಗಳಿದ್ದಲ್ಲಿ ಅವುಗಳನ್ನು 200 ಮಂದಿಗೆ ಸೀಮಿತಗೊಳಿಸಿ ನಡೆಸಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಸೇರುವಿಕೆಯನ್ನು ನಿಯಂತ್ರಿಸುವ ಮೂಲಕ ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರ ಜತೆಯಲ್ಲೇ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ವೈದ್ಯಕೀಯ ಪರಿಣಿತರು, ಮಾಲ್, ಬಸ್ಸು, ಹೊಟೇಲ್- ರೆಸ್ಟೋರೆಂಟ್ ಮಾಲಕರ ಜತೆ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಈ ಹಿಂದೆ ಸಕ್ರಿಯವಾಗಿದ್ದ ಕೋವಿಡ್ ಕೇರ್ ಸೆಂಟರ್, ಕೋವಿಡ್ ಕಂಟ್ರೋಲ್ ರೂಂಗಳನ್ನು ಹಾಗೂ ಕೋವಿಡ್ ಸಂದರ್ಭ ರಚಿಸಲಾದ ಸುರಕ್ಷಾ ತಂಡಗಳನ್ನು ಸಕ್ರಿಯಗೊಳಿಸಲಾಗುತ್ತಿದೆ. ಗಡಿ ಭಾಗಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಪಾಸಣಾ ಸಂಖ್ಯೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ. ದಿನವೊಂದಕ್ಕೆ ಜಿಲ್ಲೆಯಲ್ಲಿ 15,000 ಕೋವಿಡ್ ತಪಾಸಣೆಗೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಹೇಳಿದರು.

ಗೋಷ್ಠಿಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ವೈದ್ಯಕೀಯ ತಜ್ಞ ಡಾ. ಶಾಂತಾರಾಮ ಬಾಳಿಗ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

'ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ ಇಲ್ಲ'

ಕಳೆದ ವಾರದವರೆಗೂ ನಿಯಂತ್ರಣದಲ್ಲಿದ್ದ ಕೋವಿಡ್ ಪಾಸಿಟಿವಿಟಿ ದರ ಈ ವಾರದಲ್ಲಿ ಸ್ವಲ್ಪ ಮಟ್ಟದಲ್ಲಿ ಏರಿಕೆಯಾಗಿದ್ದರೂ, ಸೂಕ್ತ ಕ್ರಮಗಳನ್ನು ವಹಿಸಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ 341 ಸಕ್ರಿಯ ಪ್ರಕರಣಗಳಿದ್ದು, 38 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಪತ್ತೆಯಾಗಿದ್ದ ಏಳು ಒಮೈಕ್ರಾನ್ ಸೋಂಕಿತರು ಮತ್ತೆ ತಪಾಸಣೆಯ ವೇಳೆ ನೆಗೆಟಿವ್ ಆಗಿದ್ದು, ಕೋವಿಡ್ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಏರಿಕೆಯಾದಲ್ಲಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಕೋವಿಡೇತರ ಚಿಕಿತ್ಸೆಯನ್ನು ಬೇರೆ ಆಸ್ಪತ್ರೆಗಳಿಗೆ ವರ್ಗಾಯಿಸುವ ಆಲೋಚನೆ ಇದೆ. ಆದರೆ ಸದ್ಯ ಯಾವುದೇ ರೀತಿಯ ಆತಂಕದ ಪರಿಸ್ಥಿತಿ ಇಲ್ಲ. ಆದರೆ ಕೋವಿಡ್ ನಿಯಂತ್ರಣದಲ್ಲಿ ಜನರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಹೇಳಿದರು.

ವೀಕೆಂಡ್ ಕರ್ಫ್ಯೂ ಸಂದರ್ಭ ಶಾಲೆ, ಕಾಲೇಜುಗಳು  ಬಂದ್ ಆಗಿರಲಿವೆ. ಆದರೆ ಪೂರ್ವನಿಗದಿತ ಪರೀಕ್ಷೆಗಳಿದ್ದಲ್ಲಿ ನಡೆಸಬಹುದಾಗಿದೆ. ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ನೊಂದಿಗೆ ಪ್ರಯಾಣ ಬೆಳೆಸಬಹುದು. ದೂರದ ಊರುಗಳಿಗೆ ಹೋಗುವವರು ತಮ್ಮ ಬಸ್ಸು, ರೈಲು ಅಥವಾ ವಿಮಾನ ಯಾನದ ಟಿಕೆಟ್‌ನೊಂದಿಗೆ ವೀಕೆಂಡ್ ಕರ್ಫ್ಯೂ ಸಂದರ್ಭ ಸಂಚರಿಸಲು ಅವಕಾಶವಿದೆ. ದಿನಸಿ, ಹಾಲು, ಔಷಧಿ ಅಂಗಡಿಗಳು ವೀಕೆಂಡ್ ಕರ್ಫ್ಯೂ ಸಂದರ್ಭ ತೆರೆದಿರುತ್ತವೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X