ಉಡುಪಿ ಜಿಲ್ಲೆಯಲ್ಲಿ 88 ಮಂದಿಗೆ ಕೋವಿಡ್ ಸೋಂಕು

ಉಡುಪಿ, ಜ.5: ಜಿಲ್ಲೆಯಲ್ಲಿ ಕೋವಿಡ್-19ಕ್ಕೆ ಸೋಂಕಿತರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತಿದ್ದು, ಬುಧವಾರ ಒಂದೇ ದಿನ 88 ಕೊರೋನ ಪಾಸಿಟಿವ್ ಪತ್ತೆಯಾಗಿದೆ.
ದಿನದಲ್ಲಿ 18 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು 352ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಪಾಸಿಟಿವ್ ಬಂದ 88 ಮಂದಿಯಲ್ಲಿ 42 ಮಂದಿ ಪುರುಷರಾದರೆ 46 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 80 ಮಂದಿ ಉಡುಪಿ ತಾಲೂಕಿಗೆ ಸೇರಿದವರು. ಉಳಿದವರಲ್ಲಿ ಒಬ್ಬರು ಕುಂದಾಪುರ, ಏಳು ಮಂದಿ ಕಾರ್ಕಳ ತಾಲೂಕಿಗೆ ಸೇರಿದ್ದಾರೆ. ಪಾಸಿಟಿವ್ ಬಂದ ಮೂವರಿಗೆ ಆಸ್ಪತ್ರೆಯಲ್ಲಿ ಹಾಗೂ ಉಳಿದ 85 ಮಂದಿಗೆ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ 18 ಮಂದಿ ರೋಗದಿಂದ ಗುಣಮುಖರಾಗುವ ಮೂಲಕ ಕೊರೋನದಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 76,577ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4092 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 77,408ಕ್ಕೇರಿದೆ ಎಂದು ತಿಳಿಸಿದ್ದಾರೆ.





