Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೈಕೋರ್ಟ್ ನಲ್ಲಿ ಜ.14ರವರೆಗೆ ವಿಡಿಯೋ...

ಹೈಕೋರ್ಟ್ ನಲ್ಲಿ ಜ.14ರವರೆಗೆ ವಿಡಿಯೋ ಕಾನ್ಫರೆನ್ಸ್ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ5 Jan 2022 9:21 PM IST
share
ಹೈಕೋರ್ಟ್ ನಲ್ಲಿ ಜ.14ರವರೆಗೆ ವಿಡಿಯೋ ಕಾನ್ಫರೆನ್ಸ್ ವಿಚಾರಣೆ

ಬೆಂಗಳೂರು, ಜ.5: ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಮೂರನೆ ಅಲೆ ಆತಂಕ ಹುಟ್ಟಿಸುತ್ತಿದ್ದು, ನ್ಯಾಯಾಲಯಗಳು ವಿಡಿಯೋ ಕಾನ್ಫರೆನ್ಸ್ ವಿಚಾರಣೆಗೆ ಮತ್ತೆ ಮರಳಿವೆ. ಬೆಂಗಳೂರಿನ ಹೈಕೋರ್ಟ್ನಲ್ಲಿ ಜ.14ರವರೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪಗಳು ನಡೆಯಲಿವೆ. 

ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅಧಿಸೂಚನೆ ಹೊರಡಿಸಿದ್ದಾರೆ. ಹೊಸ ಮಾರ್ಗಸೂಚಿ ಅನ್ವಯ ಬೆಂಗಳೂರಿನ ಪ್ರಧಾನ ಪೀಠದ ಕಲಾಪಗಳು ಸಂಪೂರ್ಣವಾಗಿ ವರ್ಚುಯಲ್ ವ್ಯವಸ್ಥೆ ಮೂಲಕವೇ ನಡೆಯಲಿವೆ. 

ಕಲಬುರಗಿ ಹಾಗೂ ಧಾರವಾಡ ಪೀಠಗಳು ಆನ್‌ಲೈನ್ ಮತ್ತು ಫಿಸಿಕಲ್ ಎರಡೂ ಮಾದರಿಯಲ್ಲಿ ನಡೆಯಲಿವೆ. ಆದರೆ, ಇಲ್ಲಿ ಕೂಡ ಪಾರ್ಟಿ-ಇನ್-ಪರ್ಸನ್‌ಗಳು ಆನ್‌ಲೈನ್ ಮೂಲಕವೇ ಭಾಗಿಯಾಗುವಂತೆ ಸೂಚಿಸಲಾಗಿದೆ.

ಎಸ್‌ಒಪಿಯ ಪ್ರಮುಖ ಅಂಶಗಳು: ನ್ಯಾಯಾಲಯದ ಆದೇಶವಿಲ್ಲದೇ ಪಾರ್ಟಿ-ಇನ್-ಪರ್ಸನ್ ಹಾಗೂ ಕಕ್ಷಿದಾರರಿಗೆ ಕೋರ್ಟ್ ಪ್ರವೇಶ ಇರುವುದಿಲ್ಲ. ವಕೀಲರು, ನ್ಯಾಯಾಲಯದ ಸಿಬ್ಬಂದಿ, ಪೊಲೀಸರು, ಭದ್ರತಾ ಸಿಬ್ಬಂದಿ ಸೇರಿ ಕೋರ್ಟ್ ಆವರಣ ಪ್ರವೇಶಿಸುವ ಪ್ರತಿಯೊಬ್ಬರೂ ಎನ್-95 ಸೇರಿ ಡಬಲ್ ಮಾಸ್ಕ್ ಧರಿಸಬೇಕು. 

ನ್ಯಾಯಾಲಯದ ಸಿಬ್ಬಂದಿಗೆ ಗ್ಲೌಸ್ ಕಡ್ಡಾಯ ಹಾಗೂ ನ್ಯಾಯಾಲಯ ಪ್ರವೇಶಿಸುವ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿರುತ್ತದೆ. ತಾಪಮಾನ ಏರಿಕೆ ಇದ್ದಲ್ಲಿ ಅಥವಾ ಕೋವಿಡ್ ಲಕ್ಷಣಗಳಿದ್ದಲ್ಲಿ ಪ್ರವೇಶ ನಿಷಿದ್ಧ. ನ್ಯಾಯಾಲಯದ ಆವರಣದಲ್ಲಿ ಸಾಮಾಜಿಕ ಅಂತರ ಕಡ್ಡಾಯವಾಗಿರುತ್ತದೆ. 

ಇ-ಫೈಲಿಂಗ್ ಅಥವಾ ಫಿಸಿಕಲ್ ಫೈಲಿಂಗ್ ಮೂಲಕ ಪ್ರಕರಣಗಳನ್ನು ದಾಖಲಿಸಲು, ದಾಖಲೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇ-ಫೈಲಿಂಗ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಮತ್ತು ವಕೀಲರು ಪ್ರತಿ ಪುಟದ ಮೇಲೆ ಸಹಿ ಮಾಡಿದ ನಂತರವೇ ಸ್ಕ್ಯಾನ್ ಮಾಡಿ ಕಳುಹಿಸಬೇಕು. ಕೋರ್ಟ್ ಫೀ ಆನ್‌ಲೈನ್ ಮೂಲಕ ಸಲ್ಲಿಸುವುದು ಕಡ್ಡಾಯ. ತುರ್ತು ಪ್ರಕರಣಗಳಿದ್ದಲ್ಲಿ ಮೆಮೊ ಸಲ್ಲಿಸುವುದಿದ್ದರೂ ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ನೋಟರಿಯವರಿಗೆ ಕೋರ್ಟ್ನ ಪಾರ್ಕಿಂಗ್‌ನಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿದೆ.

ಕಚೇರಿ ಆಕ್ಷೇಪಣೆ ಸರಿಪಡಿಸಲು ಲಭ್ಯವಿದ್ದ ಅವಧಿಯಲ್ಲಿ ಕಡಿತ ಮಾಡಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ 11ರಿಂದ 1.30 ಗಂಟೆ, ಶನಿವಾರದಂದು ಬೆಳಗ್ಗೆ 11 ಗಂಟೆಯಿಂದ 12.30ರ ವೇಳೆಗೆ ವಕೀಲರು 15ರಿಂದ 30 ನಿಮಿಷಗಳಲ್ಲಿ ಫೈಲ್ ಹಿಂದಿರುಗಿಸಬೇಕು. ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಮತ್ತು ಧಾರವಾಡ ಪೀಠಗಳಲ್ಲಿರುವ ಕ್ಯಾಂಟೀನ್ ಸೇವೆ ರದ್ದುಪಡಿಸಲಾಗಿದೆ.

ವಕೀಲರ ಸಂಘಗಳ ಸಭಾಂಗಣಗಳನ್ನು ಬಳಕೆ ಮಾಡುವಂತಿಲ್ಲ. ಸರಕಾರಿ ವಕೀಲರು ಕೂಡ ಆನ್‌ಲೈನ್ ಮೂಲಕವೇ ಕಲಾಪದಲ್ಲಿ ಭಾಗಿಯಾಗಬೇಕು. ಮುಂದಿನ ಆದೇಶದವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವಿಚಾರಣಾ ನ್ಯಾಯಾಲಯಗಳಿಗೂ ಈ ಹಿಂದಿನ ಮಾರ್ಗಸೂಚಿಗಳು ಅನ್ವಯವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X