Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ರಾಮನಗರದಲ್ಲಿ ಸಾರ್ವಜನಿಕ ಸಭೆ...

ಸಿಎಂ ರಾಮನಗರದಲ್ಲಿ ಸಾರ್ವಜನಿಕ ಸಭೆ ಮಾಡುವಾಗ ಕೊರೋನ ಎಲ್ಲಿ ಹೋಗಿತ್ತು?: ಸಿದ್ದರಾಮಯ್ಯ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ5 Jan 2022 9:25 PM IST
share
ಸಿಎಂ ರಾಮನಗರದಲ್ಲಿ ಸಾರ್ವಜನಿಕ ಸಭೆ ಮಾಡುವಾಗ ಕೊರೋನ ಎಲ್ಲಿ ಹೋಗಿತ್ತು?: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು, ಜ. 5: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೊನ್ನೆ ರಾಮನಗರದಲ್ಲಿ ಸಾರ್ವಜನಿಕ ಸಭೆ ಮಾಡುವ ವೇಳೆ ಕೊರೋನ ರೋಗ ಇರಲಿಲ್ವ? ಇಂದು ನಾಗಮಂಗಲದಲ್ಲಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಒಬ್ಬ ಮುಖ್ಯಮಂತ್ರಿ ತಮ್ಮ ಸರಕಾರದ ನಿಬಂಧನೆಗಳನ್ನು ತಾನೇ ಗೌರವಿಸಲ್ಲ ಎಂದರೆ ಇತರರು ಅದನ್ನು ಪಾಲನೆ ಮಾಡಿ ಎಂದು ಹೇಳುವುದರಲ್ಲಿ ಅರ್ಥ ಇಲ್ಲ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊರೋನ ಸೋಂಕು ತಡೆಯುವುದೇ ಸರಕಾರದ ನಿಜವಾದ ಉದ್ದೇಶ ಆಗಿದ್ದರೆ ಮುಖ್ಯಮಂತ್ರಿಗಳು ಹೀಗೆ ಸಮಾರಂಭದಲ್ಲಿ ಭಾಗವಹಿಸುತ್ತಿದ್ದರೆ? ಈ ನಿಬಂಧನೆಗಳನ್ನು ಹೇರಿರೋದು ನಮ್ಮ ಪಾದಯಾತ್ರೆಯನ್ನು ತಡೆಯಬೇಕೆಂಬ ಉದ್ದೇಶದಿಂದಲೇ ಎಂದು ಇದರಿಂದಲೇ ಗೊತ್ತಾಗುತ್ತದೆ ಎಂದು ಟೀಕಿಸಿದರು.

ನಾವು ಸರಕಾರದ ಕೊವಿಡ್ ಮಾರ್ಗಸೂಚಿ ನಿಯಮಗಳನ್ನು ಅನುಸರಿಸುತ್ತಾ, ಜನರ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡಿ ಬಿಜೆಪಿಯವರ ಷಡ್ಯಂತ್ರವನ್ನು ಬಯಲು ಮಾಡುತ್ತೇವೆ ಎಂದ ಅವರು, ನಿನ್ನೆ ರಾಜ್ಯ ಸರಕಾರ ಕೆಲವು ನಿರ್ಬಂಧಗಳನ್ನು ರಾಜ್ಯಾದ್ಯಂತ ಹೇರಿದೆ.

ವಾರಾಂತ್ಯದಲ್ಲಿ ಕರ್ಫ್ಯೂ ಜಾರಿ ಇನ್ನಿತರ ನಿರ್ಬಂಧಗಳನ್ನು ಮುಂದಿನ 15 ದಿನಗಳ ವರೆಗೆ ಹೇರಲಾಗಿದೆ. ಪಕ್ಷವು ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ‘ನೀರಿಗಾಗಿ ನಡಿಗೆ' ಪಾದಯಾತ್ರೆಯನ್ನು ಹಮ್ಮಿಕೊಂಡಿತ್ತು. ನಮ್ಮ ಪಾದಯಾತ್ರೆ ಕೂಡ ಜ.19ರಂದು ಕೊನೆಗೊಳ್ಳಲಿದೆ. ಸರಕಾರದ ಕೋವಿಡ್ ನಿಬಂಧನೆಗಳು ಅದೇ ದಿನ ಬೆಳಗ್ಗೆ ಐದು ಗಂಟೆಗೆ ಕೊನೆಗೊಳ್ಳಲಿದೆ ಎಂದು ಟೀಕಿಸಿದರು.

‘ನಾವು ಕೇಂದ್ರ ಮತ್ತು ರಾಜ್ಯದಲ್ಲಿ ದೀರ್ಘಕಾಲ ಆಡಳಿತ ನಡೆಸಿದ್ದೇವೆ. ನಮಗೂ ನಮ್ಮದೆ ಆದ ಜವಾಬ್ದಾರಿ ಇದೆ. ಸರಕಾರ ರೂಪಿಸಿರುವ ನಿಯಮಗಳನ್ನು ಮೀರುವುದು, ಕಾನೂನು ಕೈಗೆತ್ತಿಕೊಳ್ಳುವುದು ನಮ್ಮ ಉದ್ದೇಶವಲ್ಲ. ಹೀಗಾಗಿ ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು, ಗ್ಲೌಸ್, ಸ್ಯಾನಿಟೈಸರ್ ಬಳಕೆ ಹೀಗೆ ಎಲ್ಲ್ಲ ರೀತಿಯ ಸುರಕ್ಷತಾ ಕ್ರಮಗಳೊಂದಿಗೆ ಪಾದಯಾತ್ರೆ ಮಾಡುತ್ತೇವೆ. ನಾವು ಪಾದಯಾತ್ರೆ ಮಾಡಿದರೆ ಈ ಸರಕಾರ ಜನರೆದುರು ಬೆತ್ತಲಾಗಲಿದೆ. ಹೀಗಾಗಿಯೇ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮಾಡಬಾರದು ಎಂದು ಸರಕಾರ ಷಡ್ಯಂತ್ರ ರೂಪಿಸಿದೆ ಎಂದು ಸಿದ್ದರಾಮಯ್ಯ ದೂರಿದರು.

ರಾಜ್ಯದಿಂದ 25 ಜನ ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ, ಇವರಲ್ಲಿ ಯಾರೊಬ್ಬರು ಎರಡೂವರೆ ವರ್ಷಗಳಲ್ಲಿ ಒಮ್ಮೆಯೂ ಪ್ರಧಾನಿ ಮೋದಿ ಅವರನ್ನು ಅಥವಾ ಕೇಂದ್ರದ ಜಲ ಸಂಪನ್ಮೂಲ ಸಚಿವರನ್ನು ಭೇಟಿಮಾಡಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯ ಮಾಡಿಲ್ಲ. ಕೇಂದ್ರ ಸರಕಾರ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು ಯೋಜನೆಗಳನ್ನು ಒಳಗೊಂಡಂತೆ ಒಟ್ಟಾರೆ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಕೃಷ್ಣ ಮೇಲ್ದಂಡೆ ಯೋಜನೆಗೆ ನ್ಯಾಯಾಲಯದ ಆದೇಶ ಆಗಿ ಹಲವು ವರ್ಷ ಕಳೆದರೂ ನೋಟಿಫಿಕೇಷನ್ ಮಾಡಿಲ್ಲ. ಮಹದಾಯಿ ಯೋಜನೆ ನೋಟಿಫಿಕೇಷನ್ ಆಗಿದೆ, ಆದರೆ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥ ಮಾಡುವ ಕೆಲಸವನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಮಾಡಿಲ್ಲ. ನಮ್ಮ ಸರಕಾರ ಮೇಕೆದಾಟು ಯೋಜನೆ ಜಾರಿ ಮಾಡಬೇಕೆಂದು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರದ ಅನುಮೋದನೆಗೆ ಕಳಿಸಿತ್ತು, ಆ ನಂತರ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಪರಿಷ್ಕೃತ ಯೋಜನಾ ವರದಿ ಸಿದ್ಧಪಡಿಸಿ ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಿದ್ದರು. ಯಡಿಯೂರಪ್ಪ ಒಮ್ಮೆ ಮೇಕೆದಾಟು ವಿಚಾರ ಪ್ರಸ್ತಾಪ ಮಾಡಿದ್ದು ಬಿಟ್ಟರೆ ಬಿಜೆಪಿಯವರು ಎಲ್ಲಿಯೂ ಮೇಕೆದಾಟು ಬಗ್ಗೆ ಮಾತನಾಡಿಲ್ಲ, ಯೋಜನೆ ಅನುಷ್ಠಾನಕ್ಕೆ ಆಸಕ್ತಿ ತೋರಿಸಿಲ್ಲ ಎಂದು ಅವರು ಟೀಕಿಸಿದರು.

ಬೆಂಗಳೂರು ನಗರದ ಶೇ.30ರಷ್ಟು ಜನರಿಗೆ ಈಗಲೂ ಕಾವೇರಿ ನೀರು ಸಿಗುತ್ತಿಲ್ಲ, ಜೊತೆಗೆ ಅಕ್ಕಪಕ್ಕದ ಜಿಲ್ಲೆಗಳಿಗೂ ಕಾವೇರಿ ನೀರು ಒದಗಿಸಬೇಕು ಎಂದು ಕಾಂಗ್ರೆಸ್ ಪಕ್ಷ ಯೋಜನೆಗೆ ಮುಂದಡಿ ಇಟ್ಟಿತ್ತು. ಸುಮಾರು ಎರಡೂವರೆ ಕೋಟಿ ಜನರಿಗೆ ಅನುಕೂಲವಾಗುವಂತ ಇಂತಹ ಮಹತ್ವದ ಯೋಜನೆ ಜಾರಿ ಮಾಡದೆ ಸರಕಾರ ಕಾಲಾಹರಣ ಮಾಡುತ್ತಿದೆ. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೇಕೆದಾಟು ಯೋಜನೆ ಜಾರಿ ಮಾಡಬಾರದೆಂದು ಧರಣಿ ಕೂತಿದ್ದಾರೆ. ಬಿಜೆಪಿಯವರಿಗೆ ನಿಜವಾಗಿ ರಾಜ್ಯದ ಬಗ್ಗೆ ಕಾಳಜಿ ಇದ್ದಿದ್ದರೆ ಪ್ರತಿಭಟನೆ ಕೈಬಿಡುವಂತೆ ಅಣ್ಣಾಮಲೈ ಮನವೊಲಿಕೆ ಮಾಡುತ್ತಿದ್ದರು. ಅಣ್ಣಾಮಲೈ ಪ್ರತಿಭಟನೆಗೆ ರಾಜ್ಯ ಸರಕಾರದ ಬೆಂಬಲವೂ ಇದೆ ಎಂಬುದು ಇದರಿಂದ ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನ ಮೂರನೇ ಅಲೆ ಜನವರಿ-ಫೆಬ್ರವರಿ ಅಲ್ಲಿ ಬರುತ್ತದೆ ಎಂದು ತಜ್ಞರು ಮೂರ್ನಾಲ್ಕು ತಿಂಗಳ ಹಿಂದೆಯೇ ಎಚ್ಚರಿಕೆ ಕೊಟ್ಟಿದ್ದರೂ ಸರಿಯಾದ ತಪಾಸಣೆ ಮಾಡದೆ, ಅಂತರರಾಷ್ಟ್ರೀಯ ವಿಮಾನ ಸಂಚಾರ ತಡೆಯದೆ, ಮಾಸ್ಕ್ ಬಳಕೆ ಕಟ್ಟುನಿಟ್ಟು ಮಾಡದೆ ಈಗ ವಿಪಕ್ಷವೊಂದು ತನ್ನ ಜವಾಬ್ದಾರಿ ನಿರ್ವಹಿಸಲು ಹೊರಟಾಗ ದುರುದ್ದೇಶದಿಂದ ನಿರ್ಬಂಧಗಳನ್ನು ಹೇರುವುದು ಖಂಡನೀಯ ಎಂದು ಅವರು ಟೀಕಿಸಿದರು. 

ಪ್ರಧಾನಿ ಮೋದಿ ಪಂಜಾಬ್‌ನಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸುವವರಿದ್ದರು, ರೈತರ ಪ್ರತಿಭಟನೆಯಿಂದ ಸಭೆ ರದ್ದಾಯಿತು. ಒಂದು ವೇಳೆ ಯಾವುದೇ ತೊಂದರೆ ಆಗದೆ ಇದ್ದರೆ ಅವರು ಸಭೆ ಮಾಡುತ್ತಿರಲಿಲ್ಲವೇ? ಬಿಜೆಪಿ ಅವರು ಪ್ರಚಾರ ಸಭೆ ಮಾಡಿದರೆ ಕೊರೋನ ಬರೋದಿಲ್ವಾ? ಮೋದಿ ಅವರಿಗೆ ಒಂದು ಕಾನೂನು ಬೇರೆ ಪಕ್ಷಗಳಿಗೆ ಒಂದು ಕಾನೂನು ಅಂತ ಇದೆಯಾ? ಮೋದಿ ಅವರ ಪ್ರಚಾರ ಸಭೆಗಳಿಗೂ ಕಲಂ 144ರ ಅನ್ವಯ ಆಗುತ್ತೋ ಇಲ್ಲವೋ? ಇದು ಬಿಜೆಪಿಯವರ ದ್ವಂದ್ವ ನೀತಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷ ಪಾದಯಾತ್ರೆಯನ್ನು ಮಾಡಬಾರದೆಂದು ಬಿಜೆಪಿ ಸರಕಾರ ಸಂಚು ರೂಪಿಸಿರುವುದರಿಂದ ನಾವು ಅಗತ್ಯ ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ. ಇದು ರಾಜ್ಯದ ಜನರ ಹಿತದೃಷ್ಟಿಯಿಂದ ಮಾಡುತ್ತಿರುವ ಹೋರಾಟ, ರಾಜಕೀಯ ಉದ್ದೇಶದ ಪ್ರತಿಭಟನೆ ಅಲ್ಲ. ನಮ್ಮ ಪಾದಯಾತ್ರೆ ಘೋಷಣೆಯಾಗಿ ತಿಂಗಳಾಗುತ್ತಾ ಬಂತು, ಸರಕಾರ ಕೊವಿಡ್ ನಿರ್ಬಂಧಗಳನ್ನು ಹೇರಿದ್ದು ನಿನ್ನೆ. ಹಾಗಾಗಿ ನಮ್ಮ ಕೆಲಸವನ್ನು ನಾವು ಮಾಡುತ್ತೇವೆ ಎಂದು ಅವರು ಎಚ್ಚರಿಸಿದರು.

ನಾವು ಹೈಕಮಾಂಡ್ ಜೊತೆ ಚರ್ಚೆ ನಡೆಸಿಯೇ ಪಾದಯಾತ್ರೆ ಮಾಡುತ್ತಿದ್ದೇವೆ. ರಾಜ್ಯದ ಜನರಿಗೆ ಕೊರೋನ ಸೋಂಕು ಬರಬಾರದು ಎಂಬುದು ನಮ್ಮ ಆಶಯವೂ ಹೌದು, ಹಾಗಾಗಿ ಎಲ್ಲ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮವನ್ನು ಅನುಸರಿಸಿ ಪಾದಯಾತ್ರೆ ಮಾಡುತ್ತೇವೆ. ಸರಕಾರದ ಷಡ್ಯಂತ್ರವನ್ನು ಸಮರ್ಥನೆ ಮಾಡಿಕೊಳ್ಳಲು ಕೊರೋನ ಸ್ಪೋಟವಾದರೆ ಅದಕ್ಕೆ ಕಾಂಗ್ರೆಸ್ ಹೊಣೆಯಾಗಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಇದೆ ಸುಧಾಕರ್ ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ 36 ಮಂದಿ ಮೃತಪಟ್ಟ ವೇಳೆ ಸತ್ತವರು ಮೂರೇ ಮೂರು ಜನ ಅಂತ ಸುಳ್ಳು ಹೇಳಿದ್ದು. ಕೊರೋನ ಒಂದು, ಎರಡನೇ ಅಲೆ ಸಮಯದಲ್ಲಿ ನಾವು ಸರಕಾರಕ್ಕೆ ಸಹಕಾರ ಕೊಟ್ಟಿದ್ವಿ, ಆಗಲೂ ಲಕ್ಷಾಂತರ ಜನ ಸತ್ತಿಲ್ಲವೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

‘ತಮಿಳುನಾಡಿನಲ್ಲಿ ಡಿಎಂಕೆ ಒಂದು ಪ್ರಾದೇಶಿಕ ಪಕ್ಷ, ಸ್ವಂತ ಬಲದಿಂದ ಅಧಿಕಾರ ನಡೆಸುತ್ತಿದೆ. ಅವರಿಗೆ ನಾವು ಬುದ್ಧಿ ಹೇಳೋಕಾಗುತ್ತಾ? ಅಲ್ಲಿನ ಮುಖ್ಯಮಂತ್ರಿ ಸ್ಟಾಲಿನ್ ನಮ್ಮ ಪಕ್ಷದವರ? ನಮ್ಮ ಮಾತು ಕೇಳ್ತಾರ? ಸಚಿವರಾದ ಡಾ.ಸುಧಾಕರ್, ಈಶ್ವರಪ್ಪ ಹೇಳಿದ್ದನ್ನೆಲ್ಲಾ ಕೇಳೋಕಲ್ಲ ನಾವಿರೋದು. ನಮ್ಮ ಕರ್ತವ್ಯ ಏನು ಎಂದು ನಮಗೆ ಗೊತ್ತು, ಅದನ್ನು ನಾವು ಮಾಡ್ತೇವೆ'
-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

ಜನವರಿ 9 ರಂದು ಬೆಳಗ್ಗೆ ಈ ಕಾರ್ಯಕ್ರಮ ಆರಂಭಿಸಿ, 19 ರಂದು ಬಹಿರಂಗ ಸಭೆ ಮೂಲಕ ಮುಕ್ತಾಯ ಮಾಡುತ್ತೇವೆ. ಹರಿಯೋ ನೀರು, ಬೀಸೋ ಗಾಳಿ, ಉದಯಿಸುವ ಸೂರ್ಯನನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇದು ಪ್ರಕೃತಿ ನಿಯಮ ಎಂದು ಬಿಜೆಪಿ ನಾಯಕರು ಗಮನದಲ್ಲಿಟ್ಟುಕೊಳ್ಳಲಿ. ಹೀಗಾಗಿ ನಾವು ಘೋಷಿಸಿರುವಂತೆ ‘ನೀರಿಗಾಗಿ ನಡಿಗೆ’ ನಮ್ಮ ಮಾತಿಗೆ ಬದ್ಧರಾಗಿದ್ದೇವೆ. ನಾವು ಕಾನೂನು ಚೌಕಟ್ಟಿನಲ್ಲಿ ನಿಯಮ ಪಾಲಿಸಿ ನಡಿಗೆ ಮಾಡುತ್ತೇವೆ. ಒಂದು ವೇಳೆ ಸರಕಾರ ಸಾರ್ವಜನಿಕರು ನಡಿಗೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡದಿದ್ದರೆ, ನಾನು ಹಾಗೂ ಸಿದ್ದರಾಮಯ್ಯ ಇಬ್ಬರೇ ನಡೆಯುತ್ತೇವೆ.
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X