Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ...

ಉಡುಪಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮರಳು ಲಭ್ಯ: ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ5 Jan 2022 9:28 PM IST
share
ಉಡುಪಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮರಳು ಲಭ್ಯ: ಡಿಸಿ ಕೂರ್ಮಾರಾವ್

ಉಡುಪಿ, ಜ.5: ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯ ವಿರುವ ಮರಳಿನ ದಾಸ್ತಾನಿದ್ದು, ಸಾರ್ವಜನಿಕರು ಸ್ಯಾಂಡ್ ಆ್ಯಪ್ ಮೂಲಕ ಬೇಡಿಕೆಗಳನ್ನು ಸಲ್ಲಿಸುವುದರೊಂದಿಗೆ ಅಗತ್ಯವಿರುವ ಮರಳನ್ನು ಪಡೆಯ ಬಹುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಬುಧವಾರ ಜಿಲ್ಲೆಯಲ್ಲಿ ಮರಳು ವಿತರಣೆ ಕುರಿತು ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ವಿತರಿಸಲು ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯು ಸ್ಯಾಂಡ್ ಆ್ಯಪ್‌ಗಳ ಮೂಲಕ ಬೇಡಿಕೆಗನುಗುಣವಾಗಿ ವಿತರಿಸಲು ಮುಂದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕ ಕ್ರಮಗಳನ್ನು ವಹಿಸಬೇಕು. ಮರಳು ಸಾಗಾಣಿಕೆ ವಾಹನ ಹಾಗೂ ದೋಣಿಗಳಲ್ಲಿ ಅಳವಡಿಸಿರುವ ಜಿಪಿಎಸ್‌ನ್ನು ಪರಿಶೀಲಿಸುವುದರೊಂದಿಗೆ ಅವುಗಳ ಚಲನವಲನಗಳ ಬಗ್ಗೆ ನಿಗಾ ವಹಿಸಬೇಕು. ಒಂದೊಮ್ಮೆ ನಿಯಮಗಳನ್ನು ಉಲ್ಲಂಘಿಸಿದ್ದು ಕಂಡುಬಂದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಂಡು ದಂಡ ವಸೂಲಿ ಮಾಡಬೇಕು. ಮರಳು ತೆಗೆಯುವ ಧಕ್ಕೆ ಹಾಗೂ ದಾಸ್ತಾನು ಪ್ರದೇಶಗಳಲ್ಲಿ ಸಿಸಿಟಿ ಅಳವಡಿಸುವಂತೆ ಅವರು ಸೂಚನೆ ನೀಡಿದರು.

ಕುಂದಾಪುರ ವ್ಯಾಪ್ತಿಯಲ್ಲಿ ದೋಣಿಗಳ ಜಿಪಿಎಸ್ ಉಲ್ಲಂಘನೆ ಮಾಡಿದ ಮರಳು ಪರವಾನಗಿದಾರರ ವಿರುದ್ದ 16 ಪ್ರಕರಣ ದಾಖಲಿಸಿ 8 ಲಕ್ಷ ರೂ. ದಂಡ ವಿಧಿಸಲಾಗಿದೆ. ಉಡುಪಿ ಮತ್ತು ಬ್ರಹ್ಮಾವರದಲ್ಲಿ 3 ಪ್ರಕರಣ ದಾಖಲಿಸಿ 50,000 ದಂಡ ವಿಧಿಸುವುದರ ಜೊತೆಗೆ ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸಿ ಮರಳು ದಾಸ್ತಾನು ಮಾಡಿದವರ ವಿರುದ್ದ 34 ಪ್ರಕರಣ ದಾಖಲಿಸಿ 13 ಲಕ್ಷಕ್ಕೂ ಹೆಚ್ಚು ದಂಡ ವಿಧಿಸಲಾಗಿದೆ. ವಾಹನ ಜಿಪಿಎಸ್ ಉಲ್ಲಂಸಿದ 76 ಪ್ರಕರಣ ದಾಖಲಿಸಿ 5 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದರು.

ನವೆಂಬರ್ 24ರಿಂದ ಡಿಸೆಂಬರ್ 31ರವರೆಗೆ ಕಂಟ್ರೋಲ್ ರೂಂನಲ್ಲಿ 125 ದೂರುಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 123ನ್ನು ವಿಲೇವಾರಿ ಮಾಡಲಾಗಿದೆ ಎಂದ ಅವರು, ಲಿಖಿತ ಅಥವಾ ದೂರವಾಣಿ ಮೂಲಕ ಬರುವ ದೂರುಗಳನ್ನು ನಿರ್ಲಕ್ಷಿಸದೇ ಅವುಗಳ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರು ಎಂದು ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಲ್ಲು ಗಣಿಗಾರಿಕೆ ಹಾಗೂ ಕಲ್ಲು ಪುಡಿ ಮಾಡುವ ಘಟಕಗಳಿಗೆ ಪರವಾನಗಿ ನೀಡುವ ಸಂದರ್ಭದಲ್ಲಿ ಸರಕಾರ ಸೂಚಿಸಿರುವ ನಿಯವಗಳು ಸರಿಯಾಗಿ ಪಾಲನೆಯಾಗಿದೆಯೇ ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸುವುದರೊಂದಿಗೆ ಕಾನೂನಿನ ಅಡಿಯಲ್ಲಿ ಅವರುಗಳಿಗೆ ಲೈಸೆನ್ಸ್ ನೀಡುವಂತೆ ತಿಳಿಸಿದರು.

ಸರಕಾರಿ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡುವವರ ವಿರುದ್ದ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ. ಆದರೂ ಅವರುಗಳು ಗಣಿಗಾರಿಕೆಯನ್ನು ಪುನಃ ಪುನಃ ಮಾಡುತ್ತಿರುವುದು ಕಂಡುಬರುತ್ತಿದೆ. ಅಂತಹವರ ವಿರುದ್ದ ಕಂದಾಯ ಇಲಾಖೆ ಅಧಿಕಾರಿಗಳು ಭೂಕಬಳಿಕೆ ಅಧಿ ನಿಯಮದಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸರಕಾರಿ ಜಾಗದಲ್ಲಿ ಸಿಗುವ ಎಲ್ಲಾ ರೀತಿಯ ಖನಿಜಗಳ ಬ್ಲಾಕ್‌ಗಳನ್ನು ಗುರುತಿಸುವುದರೊಂದಿಗೆ ಗಣಿಗಾರಿಕೆ ಕೈಗೊಳ್ಳಲು ಬ್ಲಾಕ್‌ಗಳ ಹರಾಜು ಪ್ರಕ್ರಿಯೆ ಕೈಗೊಳ್ಳಲು ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಕುಂದಾಪುರ ಡಿಎಫ್‌ಓ ಆಶೀಶ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಸಿಆರ್‌ಝಡ್ ಪ್ರಾದೇಶಿಕ ನಿರ್ದೇಶಕ ಶ್ರೀಪತಿ, ಹಿರಿಯ ಭೂವಿಜ್ಞಾನಿ ಸಂದೀಪ್ ಹಾಗೂ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X