Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶಕ್ಕೆ ಯುವಶಕ್ತಿಯೇ ದೊಡ್ಡ ಆಸ್ತಿ:...

ದೇಶಕ್ಕೆ ಯುವಶಕ್ತಿಯೇ ದೊಡ್ಡ ಆಸ್ತಿ: ಸಿಎಂ ಬಸವರಾಜ ಬೊಮ್ಮಾಯಿ

ಆದಿಚುಂಚನಗಿರಿಯ ಎರಡು ದಿನಗಳ ರಾಜ್ಯ ಯುವಜನೋತ್ಸವಕ್ಕೆ ತೆರೆ

ವಾರ್ತಾಭಾರತಿವಾರ್ತಾಭಾರತಿ5 Jan 2022 10:48 PM IST
share
ದೇಶಕ್ಕೆ ಯುವಶಕ್ತಿಯೇ ದೊಡ್ಡ ಆಸ್ತಿ: ಸಿಎಂ ಬಸವರಾಜ ಬೊಮ್ಮಾಯಿ

ಮಂಡ್ಯ/ನಾಗಮಂಗಲ, ಜ.5: ದೇಶಕ್ಕೆ ಯುವಶಕ್ತಿಯೇ ದೊಡ್ಡ ಆಸ್ತಿಯಾಗಿದ್ದು, ಎಲ್ಲವನ್ನೂ ಚುನಾವಣಾ ದೃಷ್ಠಿಯಿಂದ ನೋಡುವ ರಾಜಕಾರಣಿಗಳಿಂದ ಯುವ ಸಮುದಾಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಬುಧವಾರ ನಡೆದ ರಾಜ್ಯ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಜನಾಂಗದ ಚಿಂತನೆ ಮಾಡುವ ಮುತ್ಸದ್ದಿತನದ ಆಡಳಿತಗಾರನ ಅಗತ್ಯವಿದೆ ಎಂದರು.

ಯುವಕರ ಬದುಕಿಗೆ ಒಂದು ಗುರಿ, ಶಿಸ್ತು ಇರಬೇಕು. ಮಾನವ ಶಕ್ತಿಯ ಭಾಗವೇ ಆದ ಯುವಶಕ್ತಿ ಹೆಚ್ಚಾದಷ್ಟು ದೇಶಕ್ಕೆ ಉತ್ತಮ ಭವಿಷ್ಯ ಇರುತ್ತದೆ. ದೇಶ ಕಟ್ಟುವ ಕೆಲಸಕ್ಕೆ ಯುವ ಶಕ್ತಿ ಸದ್ಬಳಕೆಗೆ ಆಗಬೇಕಿದೆ ಎಂದು ಅವರು ಪ್ರತಿಪಾದಿಸಿದರು.

ರಾಜ್ಯದ ಯುವಜನ ಮತ್ತು ಕ್ರೀಡಾ ಇಲಾಖೆಯನ್ನು ಕ್ರಿಯಾಶೀಲಗೊಳಿಸಲಾಗಿರುವುದಕ್ಕೆ ಸಚಿವರು, ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ಮುಂದಿನ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು ಚಿನ್ನವನ್ನೆ ಗೆದ್ದು ತರುತ್ತಾರೆಂಬ ವಿಶ್ವಾಸವಿದೆ ಎಂದು ಅವರು ಶ್ಲಾಘಿಸಿದರು.

ಯುವಕರ ಪ್ರತಿಭೆಯನ್ನು ಹೊರತೆಗೆಯುವಂತಹ ಕಾರ್ಯವೇ ಯುವಜನೊತ್ಸವ. ಯುವಕರನ್ನು ಎಲ್ಲ ರಂಗದಲ್ಲೂ ಪ್ರೋತ್ಸಾಹಿಸುವುದು ಬಹಳ ಮುಖ್ಯ. ಆದಿಚುಂಚನಗಿರಿ ಮಹಾಸಂಸ್ಥಾನಮಠ ಪ್ರೋತ್ಸಾಹಿಸುತ್ತಿದೆ ಎಂದು ಅವರು ಕೃತಜ್ಞತೆ ಸಲ್ಲಿಸಿದರು.

ಇದೇ ವೇಳೆ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿಗಳು, ಅಮೃತ ಕ್ರೀಡಾ ಯೋಜನೆಯಡಿ 6 ಕ್ರೀಡಾಪಟುಗಳಿಗೆ 5 ಲಕ್ಷ ರೂ. ಚೆಕ್ ವಿತರಣೆ ಮಾಡಿದರು. ಯುವಜನೋತ್ಸವದಲ್ಲಿ ಜಾನಪದ ಗೀತೆಯಲ್ಲಿ ಪ್ರಥಮ ಬಹುಮಾನ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಮು ಮತ್ತು ತಂಡ, ದ್ವಿತೀಯ ಬಹುಮಾನ ಪಡೆದ ಚಾಮರಾಜನಗರ ಜಿಲ್ಲೆಯ ಸಿದ್ದು ಮತ್ತು ತಂಡ ಹಾಗು ತೃತೀಯ ಸ್ಥಾನ ಪಡೆದ ಚಿಕ್ಕಮಂಗಳೂರು ಜಿಲ್ಲೆಯ ಸುಪ್ರೀತಾ ತಂಡಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಇದಕ್ಕೂ ಮುನ್ನ ಆದಿಚುಂಚನಗಿರಿ ವಿಜ್ಞಾನ ಕೇಂದ್ರಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಇದೇವೇಳೆ ಜಾನಪದ ಗೀತೆಯಲ್ಲಿ ಪ್ರಥಮ ಬಹುಮಾನ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಮು ಮತ್ತು ತಂಡ ದ್ವಿತೀಯ ಬಹುಮಾನ ಪಡೆದ ಚಾಮರಾಜನಗರ ಜಿಲ್ಲೆಯ ಸಿದ್ದು ಮತ್ತು ತಂಡ ಹಾಗು ತೃತೀಯ ಸ್ಥಾನ ಪಡೆದ ಚಿಕ್ಕಮಂಗಳೂರು ಜಿಲ್ಲೆಯ ಸುಪ್ರೀತಾ ತಂಡಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. 

ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸಾನಿಧ್ಯವಹಿಸಿದ್ದರು. ಗೃಹ ಸಚಿವ ಆರಗ ಜ್ಞಾನೇಂದ್ರ, ಕಂದಾಯ ಸಚಿವ ಆರ್.ಅಶೋಕ್, ಯುವಸಬಲೀಕರಣ ಮತ್ತು ಕ್ರೀಡಾ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಸಂಸದೆ ಸುಮಲತಾ ಅಂಬರೀಷ್, ಶಾಸಕರಾದ ಕೆ.ಸುರೇಶ್‌ಗೌಡ, ಎಂ.ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು, ಇತರರು ಉಪಸ್ಥಿತರಿದ್ದರು.

“ಇಂದಿನ ಆಧುನಿಕ ಕಾಲಘಟ್ಟದಲ್ಲಿ ಆಧ್ಯಾತ್ಮಿಕತೆ ಮತ್ತು ಆಧುನಿಕ ವಿಜ್ಞಾನ ಎರಡೂ ಮೇಳೈಸಬೇಕು. ಆ ಕೆಲಸವನ್ನು ಆದಿಚುಂಚನಗಿರಿ ವಿಜ್ಞಾನ ಕೇಂದ್ರದ ಮೂಲಕ ಮಾಡಲಾಗುತ್ತಿದೆ. ಕ್ರೀಡೆ ಭಾಷೆ, ಭಾವನೆಗಳ ಹೆಸರಿನಲ್ಲಿ ವಿಭಾಗವಾಗಿರುವ ದೇಶವನ್ನು ಬೆಸೆಯುವ ಕೆಲಸ ಮಾಡುತ್ತದೆ.”

- ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠಾಧ್ಯಕ್ಷರು.

“ಈ ದೇಶದಲ್ಲಿ ಇಂದು ಬಹಳ ಸಂಘರ್ಷ ಇದೆ. ಆದರೆ, ಈಗ ಬೇಕಿರುವುದು ಸಮನ್ವಯವೇ ಹೊರತು ಸಂಘರ್ಷವಲ್ಲ. ಶಿಕ್ಷಣ ಎಂದರೆ ಕೇವಲ ಅಕ್ಷರಮಾಲೆಯಲ್ಲ, ಅದು ಜ್ಞಾನವಾಗಬೇಕು.”
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X