ಹಿರಿಯ ನಟ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಕನ್ನಡದ ಹಿರಿಯ ನಟ, ಕೇಂದ್ರದ ಮಾಜಿ ಸಚಿವ ಡಾ.ಎಂ.ಎಚ್.ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿವಂಗತ ಅಂಬರೀಶ್ ಅವರ ಸ್ಮಾರಕ ಇಲ್ಲಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ 12 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.
ಈ ಹಿಂದೆ ಅಂಬರೀಶ್ ಸ್ಮಾರಕ ನಿರ್ಮಾಣ ಮಾಡಬೇಕೆಂದು ಅವರ ಅಭಿಮಾನಿಗಳಿಂದ ವ್ಯಾಪಕ ಕೋರಿಕೆ ವ್ಯಕ್ತವಾಗಿತ್ತು. ಇದೀಗ ಸರಕಾರ ಸ್ಮಾರಕ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದೆ.
Next Story





