ಮಾಸ್ಕ್ ಧರಿಸದವರಿಂದ 9900 ರೂ. ವಸೂಲಿ
ಉಡುಪಿ, ಜ.6: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಮಾಸ್ಕ್ ಧರಿಸದೆ ತಿರುಗಾಡುತ್ತಿರುವವರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಾ.5ರಂದು ಜಿಲ್ಲೆಯಲ್ಲಿ ಒಟ್ಟು 9900ರೂ. ದಂಡ ವಸೂಲಿ ಮಾಡಲಾಗಿದೆ.
ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ 9000ರೂ., ಅಬಕಾರಿ ಇಲಾಖೆ ಯವರು 500ರೂ., ಪೊಲೀಸ್ ಇಲಾಖೆಯವರು 400ರೂ. ದಂಡ ವಸೂಲಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 53841 ಮಂದಿಯಿಂದ 5966270ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





