ಪರ್ಯಾಯಕ್ಕೆ ವಿಧಾನಸಭಾಧ್ಯಕ್ಷರಿಗೆ ಆಹ್ವಾನ

ಉಡುಪಿ, ಜ.6: ಜ.17 ಮತ್ತು 18ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುವ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವಕ್ಕೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಇಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಆಹ್ವಾನಿಸಲಾಯಿತು.
ಕೃಷ್ಣಾಪುರ ಪರ್ಯಾಯೋತ್ಸ ಸಮಿತಿಯ ಗೌರವ ಕಾರ್ಯಾಧ್ಯಕ್ಷರಾದ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರ ನೇತೃತ್ವದ ನಿಯೋಗ ಆಹ್ವಾನ ಪತ್ರಿಕೆ ನೀಡಿ ಉಡುಪಿ ಪರ್ಯಾಯೋತ್ಸವಕ್ಕೆ ಆಹ್ವಾನಿಸಿತು.
ಈ ಸಂದರ್ಭದಲ್ಲಿ ಪರ್ಯಾಯೋತ್ಸವ ಸಮಿತಿಯ ಉಪಾಧ್ಯಕ್ಷ ಶ್ರೀಪತಿ ಭಟ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿಗಳಾದ ವಿಷ್ಣು ಪ್ರಸಾದ್ ಪಾಡಿಗಾರ್, ಆರ್ಥಿಕ ಸಮಿತಿ ಸಂಚಾಲಕ ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿದ್ದರು.
Next Story





