Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.7ರಂದು ಪಾಣೆಮಂಗಳೂರಿನಲ್ಲಿ ಕಾಂಗ್ರೆಸ್...

ಜ.7ರಂದು ಪಾಣೆಮಂಗಳೂರಿನಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ, ಪದಾಧಿಕಾರಿಗಳ ಪದಗ್ರಹಣ

ವಾರ್ತಾಭಾರತಿವಾರ್ತಾಭಾರತಿ6 Jan 2022 7:56 PM IST
share
ಜ.7ರಂದು ಪಾಣೆಮಂಗಳೂರಿನಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ, ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಅಲ್ಪಸಂಖ್ಯಾತ ಘಟಕದ ಬ್ಲಾಕ್ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.7ರಂದು ಅಪರಾಹ್ನ 2:30ಕ್ಕೆ ಪಾಣೆಮಂಗಳೂರು ಸಾಗರ್ ಅಡಿಟೋರಿಯಂನಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಎಸ್.ಮುಹಮ್ಮದ್ ತಿಳಿಸಿದರು. 

ಬುಧವಾರ ಬಿ.ಸಿ.ರೋಡಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ.ರಮಾನಾಥ ರೈ ಸಮಾವೇಶವನ್ನು ಉದ್ಘಾಟಿಸಲಿದ್ದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ‌.ಕೆ.ಶಾಹುಲ್ ಹಮೀದ್ ಅಧ್ಯಕ್ಷತೆ ವಹಿಸುವರು. 

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಕೇರಳ - ಕಲ್ಪೆಟ್ಟ ಶಾಸಕ ಅಡ್ವಕೇಟ್ ಟಿ.ಸಿದ್ದೀಕ್ ಮುಖ್ಯ ಭಾಷಣಗೈಯುವರು. ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಗುವುದು ಎಂದರು. 

ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಸದಸ್ಯ ಐವನ್ ಡಿಸೋಜ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್ ಭಾಗವಹಿಸುವರು. ಅತಿಥಿಗಳಾಗಿ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ‌.ಬಾವಾ, ಜಿಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್.ಮುಹಮ್ಮದ್, ಬಿ ಪದ್ಮಶೇಖರ ಜೈನ್, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್.ರೋಡ್ರಿಗಸ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್, ರಾಜ್ಯ ಅಲ್ಪಸಂಖ್ಯಾತ ಘಟಕದ ಸಂಯೋಜಕ ಮುಹಮ್ಮದ್ ನಂದರಬೆಟ್ಟು, ಆಲ್ಬರ್ಟ್ ಮಿನೇಜಸ್, ಕೆಪಿಸಿಸಿ ಕಾನೂನು, ಮಾನವ ಹಕ್ಕು ಹಾಗೂ ಆರ್.ಟಿ.ಐ. ಘಟಕದ ಕಾರ್ಯದರ್ಶಿ ರಿಯಾಝ್ ಹುಸೈನ್ ಬಂಟ್ವಾಳ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಸಹಕಾರಿ ಸಂಘ ಒಕ್ಕೂಟದ ಜಿಲ್ಲಾಧ್ಯಕ್ಷ ಸುದರ್ಶನ್ ಜೈನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡು, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಉದ್ಯಮಿಗಳಾದ ಹಾಜಿ ಪಿ.ಎಸ್.ಅಬ್ದುಲ್ ಹಮೀದ್, ಹಾಜಿ ಜಿ.ಮುಹಮ್ಮದ್ ಹನೀಫ್ ಗೋಳ್ತಮಜಲು, ಇಸ್ಮಾಯೀಲ್ ಸಿದ್ದೀಕ್ ಕಾವಳಕಟ್ಟೆ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ನವಾಝ್ ಬಡಕಬೈಲು, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಲ್ಮಾ ಮೊರಾಸ್, ಬಂಟ್ವಾಳ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ಮುಹಮ್ಮದ್ ಸಂಗಬೆಟ್ಟು ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸಮಾವೇಶ ಸರಕಾರದ ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸಿಕೊಂಡು ಸಭಾಂಗಣದ ಒಳ ಭಾಗದಲ್ಲಿ ಶಿಸ್ತು ಬದ್ದವಾಗಿ ಅತ್ಯಂತ ಯಶಸ್ವಿಯಾಗಿ ನಡೆಸಲಾಗುವುದು. ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಸಾಮಾಜಿಕ ಅಂತರ, ಮಾಸ್ಕ್ ಮೊದಲಾದ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸು ವಂತೆ ಅವರು ಇದೇ ವೇಳೆ ಕರೆ ನೀಡಿದರು. 

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನಿಯೋಜಿತ ಅಧ್ಯಕ್ಷರಾದ ಅರ್ಶದ್ ಸರವು, ಕೆ.ಮುಹಮ್ಮದ್ ಶರೀಫ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಜನಾರ್ದನ ಚೆಂಡ್ತಿಮಾರ್, ಲೋಲಾಕ್ಷ ಶೆಟ್ಟಿ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರಾ, ನವಾಝ್ ಬಡಕಬೈಲು, ಸಿದ್ದೀಕ್ ಸರವು  ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X