ಬೈಕ್ ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು
ಕೋಟ, ಜ. 6: ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತೆಕ್ಕಟ್ಟೆ ಗ್ರಾಮದ ತೆಕ್ಕಟ್ಟೆ ಹನುಮಾನ್ ರೈಸ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.5ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಕೃಷ್ಣಾನಂದ ಶ್ಯಾನುಭಾಗ್ (85) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಮಹಮದ್ ಲತೀಫ್ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ರಸ್ತೆ ದಾಟಲು ಡಿವೈಡರ್ ಬಳಿ ನಿಂತುಕೊಂಡಿರುವಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬೈಕ್ ಸವಾರ ಹಾಗೂ ಕೃಷ್ಣಾನಂದ ಶ್ಯಾನುಭಾಗ್ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣಾನಂದ ಶ್ಯಾನುಭಾಗ್ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





