Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಆರ್ಥಿಕತೆ ಸುಗಮಕ್ಕೆ ಪ್ರಧಾನಿಯಿಂದ...

ದೇಶದ ಆರ್ಥಿಕತೆ ಸುಗಮಕ್ಕೆ ಪ್ರಧಾನಿಯಿಂದ ಪುನರಾವರ್ತಿತ ಕಾನೂನುಗಳು ರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ6 Jan 2022 10:19 PM IST
share
ದೇಶದ ಆರ್ಥಿಕತೆ ಸುಗಮಕ್ಕೆ ಪ್ರಧಾನಿಯಿಂದ ಪುನರಾವರ್ತಿತ ಕಾನೂನುಗಳು ರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜ.6: ಪ್ರಧಾನಿ ನರೇಂದ್ರ ಮೋದಿಯವರು ಬಹಳಷ್ಟು ಪುನರಾವರ್ತಿತ ಕಾನೂನು ಕಟ್ಟಲೆಗಳನ್ನು ರದ್ದುಗೊಳಿಸಿ, ದೇಶದ ವಾಣಿಜ್ಯ, ಆರ್ಥಿಕತೆ ಸುಗಮವಾಗಿ ನಡೆಯುವಂತೆ ಮಾಡಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಗುರುವಾರ ನಗರದಲ್ಲಿ ಕಂಪೆನಿ ಸೆಕ್ರಟರಿಗಳ 49ನೆ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಸ್ಥೆಯೊಂದನ್ನು ಕಾನೂನಿನ ಚೌಕಟ್ಟಿನೊಳಗೆ ತರುವಲ್ಲಿ ಕಂಪೆನಿ ಸೆಕ್ರೆಟರಿಗಳು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾರೆ. ಕಂಪೆನಿಗಳ ಆರ್ಥಿಕತೆಯಲ್ಲಿ ಸ್ಪಷ್ಟ ನಿಯಮಗಳಿದ್ದರೆ ಕಂಪೆನಿ ಸೆಕ್ರೆಟರಿಗಳ ಅವಶ್ಯಕತೆಯೇ ಇರುತ್ತಿರಲಿಲ್ಲ. ಅನಿಶ್ಚಿತತೆ, ಅಸ್ಪಷ್ಟತೆ ಇರುವಲ್ಲಿಯೇ ಇವರ ಕಾರ್ಯಕ್ಷೇತ್ರವಿರುತ್ತದೆ ಎಂದರು. 

ಚಲನಶೀಲತೆ ಇಲ್ಲದಿರುವ ಕಂಪೆನಿಗಳು ಬೆಳೆಯಲು ಸಾಧ್ಯವಿಲ್ಲ. ದೂರದೃಷ್ಟಿ ಹೊಂದಿರುವ ಕಂಪೆನಿ ಸೆಕ್ರೆಟರಿಗಳು ಸಂಸ್ಥೆಯನ್ನು ಮುನ್ನಡೆಸುತ್ತಾರೆ. ಕಂಪೆನಿಗಳ ಯಾವುದೇ ಪ್ರಮುಖ ನಿರ್ಧಾರದಲ್ಲಿ ಇವರ ಪಾತ್ರವಿರಬೇಕು ಎಂದರು.

ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರ್ಯನಿರ್ವಹಿಸಿ: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಸಂಸ್ಥೆಯು ಉತ್ತಮ ಕೆಲಸ ಮಾಡುತ್ತಿದೆ. ಕಂಪೆನಿಗಳಲ್ಲಿ ಮಾತ್ರವಲ್ಲ ದೇಶದ ಆರ್ಥಿಕತೆಯ ಬೆಳವಣಿಗೆಯಲ್ಲಿ ಕಂಪೆನಿ ಸೆಕ್ರೆಟರಿಗಳು ಮಹತ್ವದ ಪಾತ್ರ ವಹಿಸಬೇಕು. ಸಮಾಜದ ಸಮಸ್ಯೆಗಳಿಗೆ ನಿಮ್ಮ ಮುಖಾಂತರ ಪರಿಹಾರಗಳನ್ನು ಒದಗಿಸುವ ನಿಟ್ಟಿನಲ್ಲಿ ಆಲೋಚನೆ ಮಾಡಿ ಪರಿಹಾರದ ಭಾಗವಾಗಬೇಕು. ಕಂಪೆನಿ ಸೆಕ್ರೆಟರಿಗಳು ಆರ್ಥಿಕತೆಯ ಒಂದು ಭಾಗವಾಗಬೇಕು. ನಾಯಕತ್ವ ವಹಿಸುವ ಮೂಲಕ ಬದಲಾವಣೆಯನ್ನು ತನ್ನಿ ಎಂದು ಕರೆ ನೀಡಿದರು. 

ಅಭಿವೃದ್ಧಿಯ ಭಾಗವಾಗಬೇಕು: ಹಣಕಾಸು ಕೇವಲ ಲಾಭ, ನಷ್ಟದ ವಿಚಾರವಲ್ಲ. ಮತ್ತು ತತ್ವಶಾಸ್ತ್ರ ಕೇವಲ ಪಾಪ ಪುಣ್ಯಕ್ಕೆ ಸಂಬಂಧಿಸಿದ್ದಲ್ಲ. ಆರ್ಥಿಕತೆಯಲ್ಲಿ ಪಾಪಪುಣ್ಯವನ್ನು ಹಾಗೂ ತತ್ವಶಾಸ್ತ್ರದಲ್ಲಿ ಲಾಭ ನಷ್ಟವನ್ನು ನೋಡಬೇಕು. ವ್ಯವಸ್ಥೆಯೊಂದರ ಭಾಗವಾಗಿರುವ ನಾವು ಅದರ ಎಲ್ಲ ಚಟುವಟಿಕೆಗಳಲ್ಲಿ ತೊಡಗಿಕೊಂಡು ಅಭಿವೃದ್ಧಿಯ ಭಾಗವಾಗಬೇಕು. ಸಾಕಷ್ಟು ಕಂಪೆನಿಗಳು ಲಾಭ ಮಾಡುವುದರ ಭರದಲ್ಲಿ ಕಾನೂನನ್ನು ಉಲ್ಲಂಘಿಸುತ್ತಾರೆ.

ಇದನ್ನು ಸರಿಪಡಿಸಲು ಕಂಪೆನಿ ಸೆಕ್ರೆಟರಿಗಳು ಅತ್ಯಗತ್ಯ. ಫಲಿತಾಂಶಗಳನ್ನು ಕಾಣಲು ನಿಮ್ಮದೇ ದಾರಿಯನ್ನು ಹುಡುಕಿಕೊಳ್ಳಬೇಕು. ನಿಮ್ಮಲ್ಲಿ ಬದಲಾವಣೆಯಾದರೆ, ಕಂಪೆನಿಗಳಲ್ಲಿ ಬದಲಾವಣೆಯಾಗುತ್ತದೆ. ಕಂಪೆನಿಗಳಲ್ಲಿ ಬದಲಾವಣೆಯಾದರೆ ಆರ್ಥಿಕತೆಯಲ್ಲಿ ಹಾಗೂ ಆರ್ಥಿಕತೆಯಲ್ಲಿ ಬದಲಾವಣೆಯಾದರೆ ಸಾಮಾನ್ಯ ವ್ಯಕ್ತಿಯ ಬದುಕಿನಲ್ಲಿಯೂ ಬದಲಾವಣೆ ತರಬಹುದು ಎಂದರು. ನೀವು ಸಾಮಾನ್ಯ ವ್ಯಕ್ತಿಯೊಂದಿಗೆ ನೇರವಾಗಿ ಸಂಬಂಧವನ್ನು ಹೊಂದಿದ್ದೀರಿ ಎಂದರು.

ಕಂಪೆನಿ ಸೆಕ್ರೆಟರಿಗಳ ಮೂಲಭೂತ ವಿಚಾರಗಳು ಸ್ಪಷ್ಟವಾಗಿದ್ದರೆ, ಕಂಪೆನಿಗಳಿಗೆ ಲಾಭ. ಕಂಪೆನಿಗಳಲ್ಲಿ ದಕ್ಷತೆ ಹಾಗೂ ಸಮಾನತೆ ಅಗತ್ಯ. ಸಮಾಜ ಎಲ್ಲರನ್ನೂ ಒಳಗೊಳ್ಳುವ ಅಗತ್ಯವಿದೆ ಎಂದರು. 

ಐಸಿಎಸ್‍ಐ ಅಧ್ಯಕ್ಷ ನಾಗೇಂದ್ರ. ಡಿ.ರಾವ್, ಉಪಾಧ್ಯಕ್ಷ ದೇವೇಂದ್ರ ವಿ.ದೇಶಪಾಂಡೆ, ಕಾರ್ಯದರ್ಶಿ ಆಶಿಶ್ ಮೋಹನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X