Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಮಹಾನಗರ ಪಾಲಿಕೆ ವಿರುದ್ಧ ...

ಶಿವಮೊಗ್ಗ: ಮಹಾನಗರ ಪಾಲಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Jan 2022 11:00 PM IST
share
ಶಿವಮೊಗ್ಗ: ಮಹಾನಗರ ಪಾಲಿಕೆ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ, ಜ.06: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ದುರಾಡಳಿತ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಾಲಿಕೆಯ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನವಿರೋಧಿ ಆಡಳಿತದ ಮುಖಾಂತರ ಅಧಃಪತನದತ್ತ ಸಾಗಿದೆ. ಅಧಿಕಾರಿಗಳ ಶಾಹಿಗಳ ಕೈಗೆ ಆಡಳಿತ ಒಪ್ಪಿಸಿ ಕಮಿಷನ್ ದಂಧೆಗೆ ಶಾಮಿಲಾಗಿ ಏಜೆಂಟರಾಗಿ ಭ್ರಷ್ಟಾಚಾರ ದಿವಾಳಿಯ ಅರಾಜಕತೆ ತಾಂಡವಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಆಸ್ತಿ ತೆರಿಗೆ ಮತ್ತು ಖಾತೆ ಬದಲಾವಣೆಯ ಪ್ರಕ್ರಿಯೆಯಲ್ಲಿ ಬಿಜೆಪಿಯ ಸದಸ್ಯರು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಪ್ರಕರಣಗಳು ಹೆಚ್ಚಾಗುತ್ತಿವೆ. ನಾಗರೀಕರು ನೇರವಾಗಿ ಪಾಲಿಕೆಗೆ ಹೋದರೆ ಅಲ್ಲಿಯ ನೌಕರರು ನಿರ್ಲಕ್ಷ್ಯ ತೋರುತ್ತಿರುವುದಕ್ಕೆ ಬಿಜೆಪಿ ಆಡಳಿತವೇ ಕಾರಣವಾಗಿದೆ. ಲಂಚ ನೀಡದಿದ್ದರೆ ನಾಗರೀಕರ ಕೆಲಸಗಳು ಆಗುತ್ತಿಲ್ಲ ಎಂದು ಆರೋಪಿಸಿದರು.

ಪಾಲಿಕೆ ಆಡಳಿತವು ಶಾಸಕ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪರವರ ಕಪಿಮುಷ್ಠಿಯಲ್ಲಿರುವ ಪಾಲಿಕೆ ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರ ಮೀತಿ ಮೀರಿದೆ. ಈಗ ನಗರದಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸಗಳು ಕಳಪೆಯಿಂದ ಕೂಡಿದೆ. ಕುಡಿಯುವ ನೀರಿನ ಸರಬರಾಜು ಅವ್ಯವಸ್ಥೆಯಿಂದ ನೀರು ವ್ಯತ್ಯಯವಾಗುತ್ತಿದೆ. ಒಳಚರಂಡಿ ಮತ್ತು ಮ್ಯಾನ್ ಹೋಲ್ ಗಳು ಬಾಯಿ ಬಿಟ್ಟುಕೊಂಡು ಮಾನವನನ್ನು ನುಂಗಲು ಕಾದು ಕುಳಿತಿವೆ. ಕಾಮಗಾರಿ ಆರಂಭಿಸಲು ನಿರ್ಧಿಷ್ಟ ನೀತಿ-ನಿಯಮಗಳು ಇಲ್ಲವೇ ಇಲ್ಲ. ಎಲ್ಲಾ ವ್ಯವಹಾರಗಳು ಕಮಿಷನ್ ದಂಧೆಯಲ್ಲಿ ಸೀಮಿತವಾಗಿದೆ ಎಂದು ದೂರಿದರು.

ಆಶ್ರಯ ಯೋಜನೆಯ ಮನೆಗಳ ನಿರ್ಮಾಣ ನೆನೆಗುದ್ದಿಗೆ ಬಿದ್ದಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮೇಯರ್ ಸಭೆಗಳನ್ನು ನಡೆಸಿ ಮನೆಗಳನ್ನು ನಾಳೆ ಕೊಡುತ್ತೇವೆ, ನಾಡಿದ್ದು ಕೊಡುತ್ತೇವೆ ಎಂದು ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಕರೋನಾದಿಂದಾಗಿ ಜನರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿಯಿಂದ ಕೊಳಚೆ ಪ್ರದೇಶದಲ್ಲಿ ವಾಸವಾಗಿದ್ದ ಬಡವರಿಂದ ತಲಾ 75 ಸಾವಿರ ರೂ. ಹಣ ಕಟ್ಟಿಸಿಕೊಂಡು 3 ವರ್ಷವಾದರೂ ಹಣವೂ ಇಲ್ಲ, ಮನೆಯೂ ಇಲ್ಲದೆ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದ್ದು, ನಗರದೆಲ್ಲೆಡೆ ರಸ್ತೆಗಳು ಧೂಳುನಿಂದ ವಿಲೇವಾರಿಯಾಗದೆ ಧೂಳಿನಿಂದ ಜನರು ನಿತ್ಯ ಅಲರ್ಜಿಯಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪಾಲಿಕೆ ಆಸ್ತಿಗಳ ಕಬಳಿಕೆ ಮತ್ತು ಒತ್ತುವರಿಯಾಗುತ್ತಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. 24x7 ನೀರು ಸರಬರಾಜು ಮಾಡಲು ಯೋಜನೆಯಲ್ಲಿ ಬಳಸಿರುವ ಪೈಪ್ ಹಾಗೂ ಉಪಕರಣಗಳು ಕಳಪೆಗುಣಮಟ್ಟದಾಗಿದ್ದು, ಈ ಯೋಜನೆ ಆರಂಭವಾಗಿ 3ವರ್ಷವಾದರೂ ಪೂರ್ಣವಾಗದಿದ್ದರೂ ಹೆಚ್ಚು ಮೊತ್ತದ ಬಿಲ್ ಪಾವತಿಸುವಂತೆ ಒತ್ತಡ ಹೇರಲಾಗುತ್ತಿದೆ ಹಾಗೂ ನಗರದ ವಿವಿಧೆಡೆಯಲ್ಲಿರುವ ಶುದ್ದ ನೀರಿನ ಘಟಕಗಳು ದುರಸ್ತಿ ಕಾಣದೆ ಪಾಳುಬಿದ್ದಿವೆ. ಹಸೀರಿಕರಣ ಯೋಜನೆಯಡಿ ಜನರ ತೆರಿಗೆ ಹಣ ಪರಿಸರದ ಹೆಸರಿನಲ್ಲಿ ಲೂಟಿಯಾಗಿದೆ. ಪಾಲಿಕೆಯ ಕಚೇರಿಯಲ್ಲಿ ದಾಖಲೆಗಳನ್ನು ಪಡೆಯಲು ಲಂಚವಿಲ್ಲದೆ ಸಾಧ್ಯವಾಗುತ್ತಿಲ್ಲ. ರಾಜಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದ್ದರೂ ವಿಲೇವಾರಿ ಮಾಡುತ್ತಿಲ್ಲ. ಇವೆಲ್ಲವನ್ನು ನೋಡಿದರೆ ಬಿಜೆಪಿ ಆಡಳಿತ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಹೆಚ್.ಸಿ.ಯೋಗೀಶ್, ಬಿ.ಎ.ರಮೇಶ್ ಹೆಗ್ಡೆ, ರೇಖಾ ರಂಗನಾಥ್, ಮಹೇಖ್ ಷರೀಫ್, ಮಂಜುಳಾ ಶಿವಣ್ಣ, ಕಾಂಗ್ರೆಸ್ ಮುಖಂಡರಾದ ಎಲ್.ರಾಮೇಗೌಡ, ಸಿ.ಎಸ್.ಚಂದ್ರಭೂಪಾಲ, ಇಕ್ಕೇರಿ ರಮೇಶ್, ಎಸ್.ಪಿ.ಶೇಷಾದ್ರಿ, ಯು.ಶಿವಾನಂದ್, ದೀಪಕ್ ಸಿಂಗ್, ಚಂದನ್, ಸೌಗಂಧಿಕ, ಸುವರ್ಣ ನಾಗರಾಜ್, ಕೆ.ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ನಾಜೀಮಾ, ಪ್ರೇಮಾ, ಎನ್.ಡಿ. ಪ್ರವೀಣ್ ಭಾಗವಹಿಸಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X