Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಪಾಯಕಾರಿ ವಿದ್ಯುತ್ ಮಾರ್ಗಗಳ...

ಅಪಾಯಕಾರಿ ವಿದ್ಯುತ್ ಮಾರ್ಗಗಳ ಸ್ಥಳಾಂತರಕ್ಕೆ ಕಾರ್ಯಾಚರಣೆ: ಸಚಿವ ಸುನೀಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Jan 2022 6:53 PM IST
share
ಅಪಾಯಕಾರಿ ವಿದ್ಯುತ್ ಮಾರ್ಗಗಳ ಸ್ಥಳಾಂತರಕ್ಕೆ ಕಾರ್ಯಾಚರಣೆ: ಸಚಿವ ಸುನೀಲ್ ಕುಮಾರ್

ಬೆಂಗಳೂರು, ಜ.7: ರಾಜ್ಯದ ಶಾಲಾ-ಕಾಲೇಜುಗಳ ಆವರಣದಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ಮಾರ್ಗಗಳ ಸ್ಥಳಾಂತರಕ್ಕೆ ಇಂಧನ ಇಲಾಖೆ ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, 1,783 ಅಪಾಯಕಾರಿ ಮಾರ್ಗಗಳನ್ನು ತೆರವುಗೊಳಿಸಿ ಹೊಸ ಮಾರ್ಗಕ್ಕೆ ವ್ಯವಸ್ಥೆ ಕಲ್ಪಿಸಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. 

ಬಾಕಿ ಉಳಿದಿರುವ ಅಪಾಯಕಾರಿ ಮಾರ್ಗಗಳ ಬದಲಾವಣೆಯನ್ನು ಅತಿ ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ಆ.15ರಂದು ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನಡೆಸುವಾಗ ಶಾಲಾ ಆವರಣದಲ್ಲಿ ಹಾದು ಹೋಗಿದ್ದ ಅಪಾಯಕಾರಿ ವಿದ್ಯುತ್ ಮಾರ್ಗಕ್ಕೆ ಧ್ವಜ ತಗುಲಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದರು. ಹಾಸನದಲ್ಲೂ ಇದೇ ಬಗೆಯ ಘಟನೆ ನಡೆದಿತ್ತು ಎಂದು ಅವರು ಸ್ಮರಿಸಿದ್ದಾರೆ.

ಶಾಲಾ-ಕಾಲೇಜು ಆವರಣದಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ಮಾರ್ಗಗಳಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ಬಗ್ಗೆ ರಾಜ್ಯಾದ್ಯಂತ ಕಳವಳ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆಗೆ ಸಭೆ ನಡೆಸಿ ತುರ್ತು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.

ಶಾಲಾ-ಕಾಲೇಜು ಆವರಣದಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ಮಾರ್ಗ ಗುರುತಿಸಿ ಬದಲಿ ಮಾರ್ಗ ಕಲ್ಪಿಸುವ ಅಥವಾ ಎಬಿ ಕೇಬಲ್ ಅಳವಡಿಸುವಂತೆ ಆ.19 ರಂದು ಎಲ್ಲ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಸೂಚನೆ ನೀಡಲಾಗಿತ್ತು ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 6886 ಇಂಥ ಅಪಾಯಕಾರಿ ಮಾರ್ಗಗಳು ಶಾಲಾ-ಕಾಲೇಜು ಆವರಣದಲ್ಲಿ ಹಾದು ಹೋಗಿರುವುದನ್ನು ಗುರುತಿಸಲಾಗಿದ್ದು, ಆದೇಶ ನೀಡಿದ ಮೂರೇ ತಿಂಗಳಲ್ಲಿ 1783 ಮಾರ್ಗಗಳನ್ನು ಬದಲಿಸಿ ಹೊಸ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನುಳಿದ 4997 ಮಾರ್ಗಗಳ ಬದಲಾವಣೆ ಕಾರ್ಯ ಪ್ರಗತಿಯಲ್ಲಿದ್ದು, ಕೆಲವೇ ದಿನದಲ್ಲಿ ಪೂರ್ಣಗೊಳ್ಳಲಿದೆ. ಇದಕ್ಕಾಗಿ 114.50 ಕೋಟಿ ರೂ.ನ್ನು ಇಂಧನ ಇಲಾಖೆ ವೆಚ್ಚ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಬೆಸ್ಕಾಂ ವ್ಯಾಪ್ತಿಯಲ್ಲೇ ಇಂಥ ಅತಿ ಹೆಚ್ಚು ಮಾರ್ಗಗಳು ಕಂಡು ಬಂದಿದ್ದು 2,299 ಸ್ಥಳ ಗುರುತಿಸಲಾಗಿದೆ. ಈ ಪೈಕಿ 157 ಕಡೆ ಹೊಸ ಮಾರ್ಗ ಅಳವಡಿಸಲಾಗಿದ್ದು, 2,147 ಮಾರ್ಗ ಬದಲಾವಣೆ ಪ್ರಗತಿಯಲ್ಲಿದೆ. ಚೆಸ್ಕಾಂ ವ್ಯಾಪ್ತಿಯ 881ರ ಪೈಕಿ 809, ಮೆಸ್ಕಾಂನ 1,323 ರ ಪೈಕಿ 116, ಹೆಸ್ಕಾಂನ 1,721ರ ಪೈಕಿ 228 ಹಾಗೂ ಜೆಸ್ಕಾಂ ವ್ಯಾಪ್ತಿಯ 662ರ ಪೈಕಿ 473 ಅಪಾಯಕಾರಿ ಮಾರ್ಗಗಳನ್ನು ಸರಿಪಡಿಸಲಾಗಿದ್ದು, 4,997 ಮಾರ್ಗಗಳಿಗೆ ಸದ್ಯದಲ್ಲೇ ಕಾಯಕಲ್ಪ ಸಿಗಲಿದೆ. ಇಂಧನ ಇಲಾಖೆಯ ಈ ಕ್ರಮದಿಂದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ದಿನ ತುಮಕೂರಿನಲ್ಲಿ ನಡೆದ ಈ ಘಟನೆ ಎಲ್ಲರಲ್ಲೂ ಬೇಸರ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ಆವರಣದಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ಮಾರ್ಗಗಳ ಬದಲಾವಣೆಗೆ ಸೂಚನೆ ನೀಡಲಾಗಿತ್ತು. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸಲಾಗುತ್ತಿದೆ. ಬಾಕಿ ಇರುವ ಮಾರ್ಗ ಬದಲಾವಣೆ ಕಾರ್ಯ ಕೆಲವೇ ದಿನದಲ್ಲಿ ಮುಕ್ತಾಯಗೊಳ್ಳುತ್ತದೆ. ಈ ಬಗ್ಗೆ ನಾನೇ ಖುದ್ದು ಪರಿಶೀಲನೆ ನಡೆಸಿದ್ದೇನೆ.

-ವಿ.ಸುನೀಲ್ ಕುಮಾರ್, ಇಂಧನ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X