ಅಸಂಘಟಿತ ಕಾರ್ಮಿಕರು ವಿವರಗಳನ್ನು ಇ-ಶ್ರಮ್‌ನಲ್ಲಿ ನೊಂದಾಯಿಸಿ : ಡಿಸಿ ಕೂರ್ಮರಾವ್

ಉಡುಪಿ, ಜ.7: ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ನಿವಾರೋಣಾಪಾಯ ಸೇರಿದಂತೆ ಸಾಮಾಜಿಕ ಭದ್ರತೆಗಳನ್ನು ರೂಪಿಸಲು ಇ-ಶ್ರಮ್ ಯೋಜನೆ ನೊಂದಣಿ ನಡೆಯುತ್ತಿದ್ದು, ವಲಸೆ ಕಾರ್ಮಿಕರು ಸೇರಿದಂತೆ ಎಲ್ಲಾ ಅಸಂಘಟಿತ ಕಾರ್ಮಿಕರು ತಮ್ಮ ವಿವರಗಳನ್ನು ಇದರಲ್ಲಿ ತಪ್ಪದೇ ನೊಂದಣಿ ಮಾಡಿಸಿ ಕೊಳ್ಳಬೇಕು ಎಂದು ಜಿಲಾ್ಲಧಿಕಾರಿ ಕೂರ್ಮರಾವ್ ಎಂ. ತಿಳಿಸಿದ್ದಾರೆ.
ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಇ-ಶ್ರಮ್ ಯೋಜನೆಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟ ಸಮಿತಿ ಸಭೆ ಆಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಸರಕಾರ ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ನಿರ್ವಹಣೆ, ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆಗಳನ್ನು ರೂಪಿಸಲು ಅಸಂಘಟಿತ ಕಾರ್ಮಿಕರ ದತ್ತಾಂಶವನ್ನು ಕ್ರೂಢೀಕರಿಸಿದ್ದಲ್ಲಿ ಉತ್ತವ ಯೋಜನೆಗಳನ್ನು ರೂಪಿಸಲು ಇ-ಶ್ರಮ್ ನೊಂದಣಿ ಸಹಾಯವಾಗಲಿದೆ ಎಂದರು.
ನೊಂದಣಿ ದತ್ತಾಂಶದಿಂದ ಸರಕಾರವು ಅಸಂಘಟಿತ ಕಾರ್ಮಿಕರ ವಿವಿಧ ವರ್ಗದವರಿಗೆ ವಿಶೇಷ ನೀತಿ ನಿಯಮ ಯೋಜನೆ ರೂಪಿಸಲು ಸಾಧ್ಯ. ಅಸಂಘಟಿತ ಕಾರ್ಮಿಕರು ನೊಂದಣಿ ಮಾಡಿಕೊಳ್ಳುವುದರಿಂದ ಶೀಘ್ರದಲ್ಲಿಯೇ ಸರಕಾರದ ಹಲವು ಯೋಜನೆಗಳನ್ನು ಪಡೆಯಬಹುದು. ಅಲ್ಲದೇ ನೊಂದಾಯಿಸಿ ಕೊಂಡವರಿಗೆ ಒಂದು ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಪಘಾತದಿಂದ ಮರಣ ಹೊಂದಿದರೆ ಅಥವಾ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ 2 ಲಕ್ಷ ರೂ ಪರಿಹಾರ, ಭಾಗಶ: ಅಂಗವೈಕಲ್ಯತೆಗೆ 1 ಲಕ್ಷ ರೂ ಪರಿಹಾರ ಪಡೆಯಬಹುದಾಗಿದೆ ಎಂದರು.
16ರಿಂದ 59 ವಯೋಮಾನದ ಭವಿಷ್ಯ ನಿಧಿ ಅಥವಾ ಇಎಸ್‌ಐ ಫಲಾನುಭವಿಗಳಲ್ಲದವರು ಉಚಿತವಾಗಿ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಆಧಾರ್ ಕಾರ್ಡ್, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ಹೋಗಿ ನೊಂದಾಯಿಸಿಕೊಂಡು ಸ್ಥಳದಲ್ಲೇ ಗುರುತಿನ ಚೀಟಿಯನ್ನು ಪಡೆಯಬಹುದು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‌ಗಳು, ಬೀದಿ ಬದಿಯ ವ್ಯಾಪಾರಿಗಳು ಸೇರಿದಂತೆ ಒಟ್ಟು 379 ವರ್ಗಗಳ ಕಾರ್ಮಿಕರು ಇ -ಶ್ರಮ್‌ನಲ್ಲಿ ನೊಂದಾಯಿಸಿಕೊಳ್ಳ ಬಹುದಾಗಿದೆ ಎಂದವರು ವಿವರಿಸಿದರು.
ನೊಂದಣಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕರ ಸಹಾಯವಾಣಿ 155214 ಅಥವಾ ಇ- ಶ್ರಮ್ ಸಹಾಯವಾಣಿ 14434 ಗೆ, ದೂರುಗಳಿದ್ದಲ್ಲಿ -www.gms.eshram.gov.in -ನ್ನು ಸಂಪರ್ಕಿಸಬಹುದಾಗಿದೆ ಎಂದು ಕೂರ್ಮಾ ರಾವ್ ತಿಳಿಸಿದರು.
ಅಸಂಘಟಿತ ವಲಯ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಎಂಬ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಮಾಸಿಕ 15,000 ಒಳಗಿನ ಆದಾಯ ಹೊಂದಿ, 18-40 ವರ್ದೊಳಗಿನವರು ಈ ಯೋಜನೆ ಯಡಿ ನೊಂದಾಯಿಸಿಕೊಳ್ಳಬಹುದಾಗಿದೆ. ಕಾರ್ಮಿಕರು ಪ್ರತಿ ತಿಂಗಳು 55 ರೂ ವಂತಿಗೆ ಪಾವತಿ ಮಾಡುವುದರ ಮೂಲಕ, 60 ವರ್ಷದ ನಂತರ ವಾರ್ಷಿಕ 36,000 ರೂ ಪಿಂಚಣಿ ಪಡೆಯಬಹುದಾಗಿದೆ ಎಂದರು.
ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ 60 ವರ್ಷ ಪೂರ್ಣಗೊಂಡ ನಂತರ ಮಾಸಿಕ 3000 ಪಿಂಚಣಿ ಸೌಲಭ್ಯ ಒದಗಿಸುವ ಮೂಲಕ ಅವರುಗಳಿಗೆ ಆರ್ಥಿಕ ಭದ್ರತೆಯನ್ನು ನೀಡಲು ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ವಂತಿಗೆ ಆಧಾರಿತ ಯೋಜನೆ ಜಾರಿಗೆ ತಂದಿದ್ದು 18-40 ವರ್ಷದೊಳಗಿನ ವಾರ್ಷಿಕ ವಹಿವಾಟು 1.5 ಕೋಟಿ ಒಳಗಿರುವ ಆದಾ ತೆರಿಗೆ ಪಾವತಿಸದವರು ಈ ಯೋಜನೆಯ ಲಾಭ ಪಡೆಯಬಹುದಾಗಿದೆ.
ಜಿಲ್ಲೆಯಲ್ಲಿ ಕಳೆದ 2 ತಿಂಗಳಿಂದ ನಡೆದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸಮೀಕ್ಷೆಯಲ್ಲಿ ಕಂಡು ಬಂದ ಬಾಲ ಕಾರ್ಮಿಕರಿಗೆ ಹಾಗೂ ಕಿಶೋರ ಕಾರ್ಮಿಕರಿಗೆ ಪುರ್ನವಸತಿ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಅವರುಗಳನ್ನು ಶಾಲೆಗೆ ಹೋಗುವಂತೆ ನಿಗಾವಹಿಸಬೇಕು. ಅವರ ಮಾಲಕರ ವಿರುದ್ಧ ಕಾನೂನಿ ನಡಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾದಿಕಾರದ ಸದಸ್ಯ ಕಾರ್ದರ್ಶಿ ಶರ್ಮಿಳಾ, ಕಾರ್ಮಿಕ ಅಧಿಕಾರಿ ಕುಮಾರ್, ನಗರಾಭಿವೃಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ ಹಾಗೂ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.







