Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಗೆ ಭದ್ರತಾ ಲೋಪ: ಜ.10ರವರೆಗೆ...

ಪ್ರಧಾನಿಗೆ ಭದ್ರತಾ ಲೋಪ: ಜ.10ರವರೆಗೆ ತನಿಖೆಯಿಂದ ದೂರವಿರುವಂತೆ ಪಂಜಾಬ್, ಕೇಂದ್ರಕ್ಕೆ ಸುಪ್ರೀಂ ಆದೇಶ

ಪ್ರಧಾನಿ ಪಂಜಾಬ್ ಭೇಟಿಯ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲು ಹೈಕೋರ್ಟ್ ಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Jan 2022 7:43 PM IST
share
ಪ್ರಧಾನಿಗೆ ಭದ್ರತಾ ಲೋಪ: ಜ.10ರವರೆಗೆ ತನಿಖೆಯಿಂದ ದೂರವಿರುವಂತೆ ಪಂಜಾಬ್, ಕೇಂದ್ರಕ್ಕೆ ಸುಪ್ರೀಂ ಆದೇಶ

ಹೊಸದಿಲ್ಲಿ, ಜ.7: ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿಗೆ ಸಂಬಂಧಿಸಿದ  ಎಲ್ಲಾ ದಾಖಲೆಗಳ ಸಂಗ್ರಹಿಸುವಂತೆ ಹಾಗೂ ಸಂರಕ್ಷಿಸಿಡುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಪಂಜಾಬ್ ಹಾಗೂ ಹರ್ಯಾಣ ಹೈಕೋರ್ಟ್ ನ ಮಹಾನೋಂದಣಿ ಅಧಿಕಾರಿಯವರಿಗೆ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಪ್ರವಾಸಕ್ಕೆ ಸಂಬಂಧಿಸಿದ ಸಮಗ್ರ ದಾಖಲೆಗಳನ್ನು ಮೊಹರು ಮಾಡಿಡುವ ಕಾರ್ಯದಲ್ಲಿ ಪಂಜಾಬ್ ಸರಕಾರ ಹಾಗೂ ಪೊಲೀಸ್ ಇಲಾಖೆಗಳು, ವಿಶೇಷ ರಕ್ಷಣಾ ತಂಡ (ಎಸ್‌ಪಿಜಿ) ಹಾಗೂ ಇತರ ಏಜೆನ್ಸಿಗಳು ಸಹಕರಿಸಬೇಕು ಹಾಗೂ ಅಗತ್ಯವಿರುವ ಎಲ್ಲಾ ನೆರವನ್ನು ಒದಗಿಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ತಿಳಿಸಿದೆ.

ಪ್ರಧಾನಿಯವರ ಪಂಜಾಬ್ ಭೇಟಿಗೆ ಸಂಬಂಧಪಟ್ಟಂತಹ ವಯರ್‌ಲೆಸ್ ಸಂದೇಶಗಳು ಸೇರಿದಂತೆ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಲು ಹೈಕೋರ್ಟ್ ನ ಮಹಾನೋಂದಣಿ ಅಧಿಕಾರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಓರ್ವ ಅಧಿಕಾರಿ ನೆರವಾಗಬೇಕೆಂದು ನ್ಯಾಯಾಲಯ ಸ್ಪಷ್ಟವಾಗಿ ತಿಳಿಸಿದೆ. ಪ್ರಧಾನಿಯ ಪಂಜಾಬ್ ಭೇಟಿ ಸಂದರ್ಭ ಆಗಿರುವ ಭದ್ರತಾ ಲೋಪದ ಪ್ರಕರಣ ತನಿಖೆಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ನೇಮಕಗೊಂಡ ಸಮಿತಿಗಳು ಸೋಮವಾರದವರೆಗೆ ತನಿಖೆಯಿಂದ ದೂರವಿರಬೇಕೆಂದು ಸೂಚಿಸಿದೆ. ಸೋಮವಾರದಂದು ಪ್ರಕರಣದ ಆಲಿಕೆಯನ್ನು ತಾನು ಮತ್ತೆ ನಡೆಸುವುದಾಗಿ ಅದು ತಿಳಿಸಿದೆ.

ಅರ್ಜಿದಾರರಾದ ಹಿರಿಯ ನ್ಯಾಯವಾದಿ ಮಣೀಂದರ್ ಸಿಂಗ್ ಅವರು ತನ್ನ ವಾದವನ್ನು ಮಂಡಿಸುತ್ತಾ, ದೇಶದ ಪ್ರಧಾನಿಯ ಭದ್ರತೆಯು ಅತ್ಯಂತ ಮಹತ್ವವಾದುದಾಗಿದೆ ಹಾಗೂ ಅವರ ಸುರಕ್ಷತೆಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ನಿರ್ದೇಶಗಳನ್ನು ಪಂಜಾಬ್ ಸರಕಾರ ಪಾಲಿಸಿಲ್ಲವೆಂದು ದೂರಿದರು ಹಾಗೂ ಇದೊಂದು ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ ಎಂದರು.

ಕೇಂದ್ರ ಸರಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಘಟನೆಯು ಅಂತಾರಾಷ್ಟ್ರೀಯವಾಗಿ ಮುಜುಗರಕ್ಕೆ ಕಾರಣವಾಗಿದೆಯೆಂದರು.

‘‘ಪ್ರಧಾನಿಯವರ ವಾಹನ ವ್ಯೂಹವು ರಸ್ತೆಯಲ್ಲಿ ಪ್ರಯಾಣಿಸುವಾಗ ಪೊಲೀಸ್ ಮಹಾನಿರ್ದೇಶಕರು, ಆ ರಸ್ತೆಯ ಪರಿಶೀಲನೆಯನ್ನು ನಡೆಸುತ್ತಾರೆ. ಈ ಪ್ರಕರಣದಲ್ಲಿ ಪ್ರಧಾನಿಯವರ ರಸ್ತೆ ಪ್ರಯಾಣಕ್ಕೆ ಪೊಲೀಸ್ ಮಹಾನಿರ್ದೇಶಕರು ಹಸಿರು ನಿಶಾನೆ ತೋರಿಸಿದ್ದರು. ಅತಿಗಣ್ಯ ವ್ಯಕ್ತಿಗಳ ಸಂಚಾರಕ್ಕೆ ಮುನ್ನ ಪ್ರಯಾಣಿಸುವಂತಹ ಪೈಲಟ್ ಕಾರಿಗೆ ಈ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಕರು ಮಾಹಿತಿ ನೀಡಿಲ್ಲವೆಂದು ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದರು. ಇಂತಹ ಭದ್ರತಾ ಲೋಪವು ನಿಶ್ಚಿತವಾಗಿಯೂ ಗಡಿಯಾಚೆಗಿನ ಭಯೋತ್ಪಾದನೆಯ ಸಂಚಾಗಿರುವ ಸಾಧ್ಯತೆಯಿದೆಯೆಂದವರು ಹೇಳಿದರು.

ಪಂಜಾಬ್ ಸರಕಾರದ ಅಟಾರ್ನಿಜನರಲ್ ಡಿ.ಎಸ್. ಪಟ್ವಾಲಾ ಅವರು ಈ ಪ್ರಕರಣವನ್ನು ರಾಜ್ಯ ಸರಕಾರ ಲಘುವಾಗಿ ಪರಿಗಣಿಸಿಲ್ಲವೆಂದು ನ್ಯಾಯಪೀಠಕ್ಕೆ ಸ್ಪಷ್ಟಪಡಿಸಿದರು ಮತ್ತು ಘಟನೆ ನಡೆದ ದಿನದಂದೇ ಸರಕಾರವು ನಿವೃತ್ತ ನ್ಯಾಯಮೂರ್ತಿಯವರನ್ನು ಒಳಗೊಂಡ ತನಿಖಾ ಸಮಿತಿಯೊಂದನ್ನು ರಚಿಸಿದೆ ಹಾಗೂ ಎಫ್ಐಆರ್ ದಾಖಲಿಸಿದೆೆ ಎಂದವರು ಹೇಳಿದರು.

ಪ್ರಧಾನಿಯವರ ಪಂಜಾಬ್ ಭೇಟಿಗೆ ಸಂಬಂಧಿಸಿ ಪೊಲೀಸ್ ಹಾಗೂ ಭದ್ರತಾಪಡೆಗಳು ಏರ್ಪಡಿಸಿದ್ದ ಬಂದೋಬಸ್ತ್‌ಗೆ ಸಂಬಂಧಿಸಿದ ಎಲ್ಲಾ ಪುರಾವೆಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆಯೂ ಸರ್ವೋಚ್ಚ ನ್ಯಾಯಾಲಯವು ಭಟಿಂಡಾ ಜಿಲ್ಲಾ ನ್ಯಾಯಾಧೀಶರಿಗೆ ತಿಳಿಸಿತು.

ಬುಧವಾರ ಪಂಜಾಬ್ ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಾವಲು ವಾಹನಗಳೊಂದಿಗೆ  ಹುಸೈನಿವಾಲಾದ ಹುತಾತ್ಮ ಸ್ಮಾರಕವನ್ನು ಸಂದರ್ಶಿಸಲು ಪ್ರಯಾಣಿಸುತ್ತಿದ್ದಾಗ ರೈತ ಪ್ರತಿಭಟನಕಾರರು ಭಟಿಂಡಾ ಸಮೀಪದ ಫ್ಲೈಓವರ್ ಒಂದರಲ್ಲಿ ರಸ್ತೆ ತಡೆ ನಡೆಸಿದ್ದರು. ಇದರಿಂದಾಗಿ ಪ್ರಧಾನಿಯವರು 20 ನಿಮಿಷಗಳ ಫ್ಲೈಓವರ್ ನಲ್ಲಿ ಸಿಲುಕಿದ್ದರು. ಆನಂತರ ಅವರಿದ್ದ ವಾಹನ ವ್ಯೂಹವು ಮುಂದಕ್ಕೆ ಚಲಿಸಲಾಗದೆ ವಾಪಾಸಾಗಿತ್ತು. ಇದರಿಂದಾಗಿ ಫಿರೋಜ್‌ಪುರದಲ್ಲಿ ಅವರು ಪಾಲ್ಗೊಳ್ಳಲಿದ್ದ ಬಿಜೆಪಿ ರ್ಯಾಲಿಯೂ ರದ್ದಾಗಿತ್ತು .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X