ವಾರಾಂತ್ಯ ಕರ್ಫ್ಯೂ: ಉಡುಪಿ ಜಿಲ್ಲೆಯ 25 ಕಡೆಗಳಲ್ಲಿ ಚೆಕ್‌ಪೋಸ್ಟ್
ಉಡುಪಿ, ಜ.7: ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾ ದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ.
ಈ ಸಂಬಂಧ ಜಿಲ್ಲೆಯಲ್ಲಿ ಒಟ್ಟು 25 ಚೆಕ್‌ಪೋಸ್ಟ್‌ಗಳು ಮತ್ತು 46 ತಪಾ ಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಚೆಕ್‌ಪೋಸ್ಟ್‌ಗಳು ಬೆಳಗ್ಗೆ ಮತ್ತು ರಾತ್ರಿ ಪಾಳೆಯದಲ್ಲಿ ಕಾರ್ಯನಿರ್ವಹಿಸಲಿವೆ. ಅದೇ ರೀತಿ ಐದು ಸಶಸ್ತ್ರ ಮೀಸಲು ಪಡೆಯ ತುಕಡಿ, 36 ಎಸ್ಸೈಗಳು, 11 ಇನ್ಸ್‌ಸ್ಪೆಕ್ಟರ್‌ಗಳು, ನಾಲ್ಕು ಡಿವೈಎಸ್ಪಿಗಳು ಕರ್ತವ್ಯ ನಿರ್ವಹಿಸಲಿರುವರು ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವವರ ವಿರುದ್ಧ ಪ್ರಕರಣ ದಾಖಲಿಸ ಲಾಗುವುದು ಹಾಗೂ ವಾಹನಗಳನ್ನು ಮುಟ್ಟುಗೋಲು ಹಾಕಲಾಗುವುದು. ಕಾರ್ಯಪಡೆಗಳ ಪ್ರಮುಖರು ದೂರು ನೀಡಿದಂತೆ ಕರ್ಫ್ಯೂ ಹಾಗೂ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ದ ಕಾನೂನು ಕ್ರಮ ಜರಗಿಸಲಾಗು ವುದು ಎಂದು ಅವರು ತಿಳಿಸಿದ್ದಾರೆ.
Next Story





