Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೊಂದ ಮಹಿಳೆಯರು ಉಚಿತ ಸಹಾಯವಾಣಿ...

ನೊಂದ ಮಹಿಳೆಯರು ಉಚಿತ ಸಹಾಯವಾಣಿ ಸಂಖ್ಯೆ181ನ್ನು ಸಂಪರ್ಕಿಸಿ: ಉಡುಪಿ ಡಿಸಿ

ವಾರ್ತಾಭಾರತಿವಾರ್ತಾಭಾರತಿ7 Jan 2022 9:21 PM IST
share
ನೊಂದ ಮಹಿಳೆಯರು ಉಚಿತ ಸಹಾಯವಾಣಿ ಸಂಖ್ಯೆ181ನ್ನು ಸಂಪರ್ಕಿಸಿ: ಉಡುಪಿ ಡಿಸಿ

ಉಡುಪಿ, ಜ.7: ವಿವಿಧ ಕಾರಣಗಳಿಂದ ನೊಂದಿರುವ ಮಹಿಳೆಯರು ತಮ್ಮ ಸಮಸ್ಯೆಗಳ ಬಗ್ಗೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಉಚಿತ ದೂರವಾಣಿ ಸಂಖ್ಯೆ 181ನ್ನು ಸಂಪರ್ಕಿಸಿ ತಮ್ಮ ದೂರುಗಳು ಸಲ್ಲಿಸಿ, ಅಗತ್ಯ ನೆರವು ಪಡೆಯು ವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನೊಂದ ಮಹಿಳೆಯರ ಪ್ರಕರಣಗಳನ್ನು ಇತ್ಯರ್ಥಪಡಿಸಲು ‘ಸಖಿ ಒನ್ ಸ್ಟಾಪ್ ಸೆಂಟರ್’ ಮತ್ತು ‘ಸಾಂತ್ವನ ಕೇಂದ್ರ’ ಗಳು ಕಾರ್ಯನಿರ್ವ ಹಿಸುತ್ತಿದ್ದು, ಮಹಿಳೆಯರು ತುರ್ತು ಸಂದರ್ಭಗಳಲ್ಲಿ ಉಚಿತ ಸಹಾಯವಾಣಿ 181ನ್ನು ಸಂಪರ್ಕಿಸಬಹುದು ಎಂದರು.

ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿ ರಚಿಸು ವುದು ಕಡ್ಡಾಯವಾಗಿದ್ದು, ಇದುವರೆಗೆ ಸಮಿತಿ ರಚಿಸದ ಇಲಾಖೆಗಳು ಮತ್ತು ಸಂಸ್ಥೆಗಳ ವರದಿ ಪಡೆದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೇ ಸಮಿತಿ ರಚಿಸಿರುವ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ನಿಗದಿತವಾಗಿ ಸಮಸ್ಯೆಗಳನ್ನು ಆಲಿಸಿರುವ ಕುರಿತು ವರದಿ ಪಡೆಯುವಂತೆಯೂ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಪುನಃ ಶಾಲೆಗೆ ಸೇರಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಶಾಲೆ ಬಿಟ್ಟ ಮಕ್ಕಳು ಬಾಲ ಕಾರ್ಮಿಕರು ಮತ್ತು ಬಾಲ್ಯ ವಿವಾಹಗಳಿಗೆ ಒಳಪಡುವ ಸಾಧ್ಯತೆಗಳಿದ್ದು, ಇಂತಹ ಮಕ್ಕಳ ಕುರಿತು ಸ್ಥಳೀಯವಾಗಿ ಅಂಗನವಾಡಿ ಮೇಲ್ವಿಚಾರಕರು ಮತ್ತು ಶಿಕ್ಷಣ ಇಲಾಖೆಯ ಸಿಆರ್‌ಪಿಗಳು ತಮ್ಮ ವ್ಯಾಪ್ತಿಯಲ್ಲಿ ನಿರಂತರ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಸಂಖ್ಯೆಯ ಜಾಗೃತಿ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಆಯೋಜಿಸಿ ಎಂದವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಾಣೆಯಾದ ಮಹಿಳೆ ಮತ್ತು ಮಕ್ಕಳ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯುವಂತೆ ಹಾಗೂ ಮಹಿಳೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ ಇರುವ ಕಾನೂನುಗಳು ಮತ್ತು ಅವರ ಹಕ್ಕುಗಳ ಕುರಿತಂತೆ ಜಿಲ್ಲೆಯಾದ್ಯಂತ ವಲಸೆ ಕಾರ್ಮಿಕರು ವಾಸಿಸುವ ಪ್ರದೇಶಗಳು, ಪ್ರವಾಸಿ ತಾಣಗಳು ಮತ್ತಿತರ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರದಲ್ಲಿ ದಾಖಲಿಸಿ, ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥ ಪಡಿಸುವಂತೆ ಪೊಲೀಸ್ ಇಲಾಖೆಗೆ ಕೂರ್ಮಾರಾವ್ ಸೂಚಿಸಿದರು.

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತಂತೆ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಹಯೋಗ ದಲ್ಲಿ ವ್ಯಾಪಕ ಅರಿವು ಕಾರ್ಯಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯ ಯುವಜನತೆ ಈ ಪಿಡುಗಿಗೆ ಒಳಗಾಗದಂತೆ ಎಚ್ಚರ ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ, ಶಿಶು ಅಭಿವೃದ್ಧಿ ಯೋಜನಾಧಿ ಕಾರಿ ವೀೀಣಾ, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X