Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಕಡಿಮೆ ಅಪರಾಧ ಪ್ರಕರಣಗಳು...

ಬೆಂಗಳೂರಿನಲ್ಲಿ ಕಡಿಮೆ ಅಪರಾಧ ಪ್ರಕರಣಗಳು ದಾಖಲು: ಕಮಲ್ ಪಂತ್

ವಾರ್ತಾಭಾರತಿವಾರ್ತಾಭಾರತಿ7 Jan 2022 10:06 PM IST
share
ಬೆಂಗಳೂರಿನಲ್ಲಿ ಕಡಿಮೆ ಅಪರಾಧ ಪ್ರಕರಣಗಳು ದಾಖಲು: ಕಮಲ್ ಪಂತ್

ಬೆಂಗಳೂರು, ಜ.7: ಕಳೆದ ಎರಡು ವರ್ಷಗಳಿಗೆ ಹೋಲಿಸಿಕೊಂಡರೆ 2021ರಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಕೃತ್ಯಗಳು ಕಡಿಮೆಯಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. 

ಅಪರಾಧ ಪ್ರಕರಣಗಳು ಹಾಗೂ ಪತ್ತೆಯಾಗಿರುವ ಕಳವು ಪ್ರಕರಣಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಪರಾಧ ಪ್ರಕರಣಗಳ ನಿಯಂತ್ರಣದ ಬಗ್ಗೆ ವಿವರಣೆ ನೀಡಿದರು.

ಸರಗಳ್ಳತನ, ಡಕಾಯಿತಿ, ಕೊಲೆ, ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲಾಗಿದೆ. ಈ ಹಿಂದೆ ರೌಡಿಗಳು ಆಯಾ ಪ್ರದೇಶದ ಚೌಕಟ್ಟನ್ನು ವಿಧಿಸಿಕೊಂಡು ಪಾರುಪತ್ಯ ಸಾಧಿಸುತ್ತಿದ್ದರು. ಮಚ್ಚು, ಲಾಂಗ್ ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದ ಪ್ರಸಂಗಗಳು ವರದಿಯಾಗಿದ್ದವು. ಸರಗಳ್ಳತನ, ದರೋಡೆ ಪ್ರಕರಣಗಳು ಹೆಚ್ಚಿದ್ದವು. ಆದರೆ, ಪೊಲೀಸರು ಬಿಗಿ ಕ್ರಮ ಕೈಗೊಳ್ಳುವ ಮೂಲಕ ಎಲ್ಲದಕ್ಕೂ ಕಡಿವಾಣ ಹಾಕಲಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿಕೊಂಡರೆ ಅಪರಾಧದ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ, ನಗರದ ಜನರಲ್ಲಿ ಸುರಕ್ಷತೆಯ ಭಾವನೆಯಿದೆ ಎಂದು ಆಯುಕ್ತರು ಹೇಳಿದರು.

ರೌಡಿ ಚಟುವಟಿಕೆಗಳನ್ನು ನಡೆಸುತ್ತಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಕೆಲವರು ಕಾರಾಗೃಹದಲ್ಲಿದ್ದುಕೊಂಡೇ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಅಂಥವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಕಾರಾಗೃಹದಲ್ಲಿದ್ದವರಿಗೆ ಸಹಾಯ ಮಾಡುತ್ತಿದ್ದ ಸಹಚರರ ಮೇಲೂ ನಿಗಾ ಇಟ್ಟು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ, ಕಾನೂನುಬಾಹಿರ ಚಟುವಟಿಕೆಗಳು ತಗ್ಗಿವೆ ಎಂದರು. 

2020ರ ಜುಲೈ ನಂತರ ಮಾದಕ ವಸ್ತುಗಳ ವಿರುದ್ಧ ಸಮರವನ್ನೇ ಸಾರಲಾಗಿತ್ತು. ಹಲವಾರು ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ. ಮಾದಕವಸ್ತು ಜಾಲದಲ್ಲಿದ್ದ ಸೆಲೆಬ್ರಿಟಿಗಳನ್ನು ಕೂಡ ಬಂಧಿಸಿದ್ದೇವೆ ಎಂದರು. ಅಲ್ಲದೆ, ತಲೆಗೂದಲ ಪರೀಕ್ಷೆಗೊಳಪಡಿಸುವ ಮೂಲಕ ಮಾದಕವಸ್ತು ಸೇವನೆಯನ್ನು ಖಚಿತಪಡಿಸಿಕೊಳ್ಳುವ ಪದ್ಧತಿಯನ್ನು ಮೊದಲ ಬಾರಿಗೆ ನಾವು ಪ್ರಯೋಗ ಮಾಡಿ ಯಶಸ್ವಿಯಾಗಿದ್ದೇವೆ. ಮಾದಕವಸ್ತು ಸಾಗಾಣಿಕೆಯ ಜಾಲಗಳಿಗೆ ಕಡಿವಾಣ ಹಾಕಲಾಗಿದೆ. ದೊಡ್ಡ ಪ್ರಮಾಣದ ಸಾಗಾಣಿಕೆ ಈಗ ನಿಯಂತ್ರಣದಲ್ಲಿದೆ. ಸಣ್ಣ ಪ್ರಮಾಣದ ವಹಿವಾಟು ನಡೆಯುತ್ತಿದ್ದು, ಅದರ ಮೇಲೂ ನಿಗಾವಹಿಸಿದ್ದೇವೆ ಎಂದರು.

2021ರಲ್ಲಿ 3,700 ಕೆಜಿಗೂ ಹೆಚ್ಚಿನ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದೇವೆ. ಅದರಲ್ಲಿ ಹಲವಾರು ರೀತಿಯ ಸಿಂಥೆಟಿಕ್ ಡ್ರಗ್‍ಗಳು ಸೇರಿವೆ. ಗಾಂಜಾ ಹಾವಳಿಯಿಂದ ಬಡಜನರ ಬದುಕು ಹಾಳಾಗುತ್ತಿತ್ತು. ಸಿಂಥೆಟಿಕ್ ಡ್ರಗ್‍ನಿಂದ ವಿದ್ಯಾರ್ಥಿಗಳು, ಶ್ರೀಮಂತ ಮನೆತನದವರು ಬದುಕು ಕಳೆದುಕೊಳ್ಳುತ್ತಿದ್ದರು ಎಂದು ಹೇಳಿದರು.

2019ರಲ್ಲಿ 150 ಎಲ್‍ಎಸ್‍ಡಿ ಸಿಂಥೆಟಿಕ್ ಡ್ರಗ್‍ನ್ನು ವಶಪಡಿಸಿಕೊಳ್ಳಲಾಗಿತ್ತು. ಕಳೆದ ವರ್ಷ 12 ಸಾವಿರ ಎಲ್‍ಎಸ್‍ಡಿಗಳನ್ನು ಜಪ್ತಿ ಮಾಡಲಾಗಿದೆ. 19 ಕೆಜಿ ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X