Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರ್ಥಿಕ ದುರ್ಬಲರ ಸಬಲೀಕರಣದಲ್ಲಿ ಸಹಕಾರ...

ಆರ್ಥಿಕ ದುರ್ಬಲರ ಸಬಲೀಕರಣದಲ್ಲಿ ಸಹಕಾರ ಕ್ಷೇತ್ರದ ಪಾತ್ರ ಮಹತ್ವದ್ದು: ಸಚಿವ ಡಾ.ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ8 Jan 2022 12:04 AM IST
share
ಆರ್ಥಿಕ ದುರ್ಬಲರ ಸಬಲೀಕರಣದಲ್ಲಿ ಸಹಕಾರ ಕ್ಷೇತ್ರದ ಪಾತ್ರ ಮಹತ್ವದ್ದು: ಸಚಿವ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಜ.7: ಸಹಕಾರ ಕ್ಷೇತ್ರವನ್ನು ಕೇಂದ್ರ ಸರಕಾರವು ಪ್ರಮುಖವೆಂದು ಪರಿಗಣಿಸಿದ್ದು, ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವವರ ಸಬಲೀಕರಣಕ್ಕೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತವು ಮಲ್ಲೇಶ್ವರದಲ್ಲಿ ನಿರ್ಮಿಸಿರುವ 'ಸೌರ್ಹಾದ ಸಹಕಾರಿ ಸೌಧ'ಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಬ್ಯಾಂಕುಗಳೇ ಸಮಾಜದಲ್ಲಿ ಎಲ್ಲರಿಗೂ ಆರ್ಥಿಕ ನೆರವನ್ನು ನೀಡುವುದು ಸಾಧ್ಯವಿಲ್ಲ. ಅಂತಹ ಕಡೆಗಳಲ್ಲಿ ಸಹಕಾರ ಸಂಘಗಳು ಸಾಲದ ಅಗತ್ಯವಿರುವವರ ನೆರವಿಗೆ ಧಾವಿಸುತ್ತಿದ್ದು, ಅಂಥವರನ್ನು ಮೇಲಕ್ಕೆತ್ತುವ ಕೆಲಸ ಮಾಡುತ್ತಿವೆ ಎಂದರು.

ಸಮಾಜದಲ್ಲಿ ಆರ್ಥಿಕ ಶಕ್ತಿ ಇರುವವರಿಂದ ಠೇವಣಿ ರೂಪದಲ್ಲಿ ಬಂಡವಾಳ ಸಂಗ್ರಹಿಸಿ, ಅದನ್ನು ದುರ್ಬಲರಿಗೆ ಸಾಲದ ರೂಪದಲ್ಲಿ ಕೊಡುವುದು ಸಹಕಾರ ಕ್ಷೇತ್ರದ ಪರಂಪರೆಯಾಗಿದೆ. ಇನ್ನೂ ಅಭಿವೃದ್ಧಿಶೀಲ ದೇಶವಾಗಿರುವ ಭಾರತದಲ್ಲಿ ಈ ವಲಯವು ವಹಿಸಬೇಕಾದ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

ಸಹಕಾರ ಕ್ಷೇತ್ರವು ಪರಿಣಾಮಕಾರಿಯಾಗಿ ಮತ್ತು ಉತ್ತರದಾಯಿತ್ವದೊಂದಿಗೆ ಕೆಲಸ ಮಾಡಬೇಕೆನ್ನುವುದು ಕೇಂದ್ರ ಸರಕಾರದ ಕಳಕಳಿಯಾಗಿದೆ. ಹೀಗಾಗಿಯೇ ಪ್ರತ್ಯೇಕವಾಗಿ ಸಹಕಾರ ಸಚಿವಾಲಯವನ್ನೇ ಪ್ರಧಾನಿ ಮೋದಿ ಸ್ಥಾಪಿಸಿದ್ದಾರೆ. ಇದರಿಂದಾಗಿ ಸಹಕಾರ ಕ್ಷೇತ್ರದ ಲಾಭ ಕಟ್ಟಕಡೆಯ ವ್ಯಕ್ತಿಗೂ ಸಿಗಲಿದೆ ಎಂದು ಅವರು ಪ್ರತಿಪಾದಿಸಿದರು.

ಸಹಕಾರ ಕ್ಷೇತ್ರದಲ್ಲಿ ಮತ್ತಷ್ಟು ಸುಧಾರಣೆಗಳು ಅಗತ್ಯವಿವೆ. ಅಂತಿಮವಾಗಿ ಇಲ್ಲಿಗೆ ಬರುವವನಿಗೆ ಪ್ರಯೋಜನವಾಗಬೇಕೇ ವಿನಾ ಮೋಸವಾಗಬಾರದು. ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರು ದುರ್ಬಲರ ನೆರವಿಗೆ ಮತ್ತಷ್ಟು ರಚನಾತ್ಮಕವಾಗಿ ಚಿಂತಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಕೃμÁ್ಣರೆಡ್ಡಿ, ನಿಕಟಪೂರ್ವ ಅಧ್ಯಕ್ಷ ಗುರುರಾಜ್, ಸ್ಥಳೀಯ ಮುಖಂಡ ಗುಂಡೂರಾವ್ ಮುಂತಾದವರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X