Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ...

ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ?: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ8 Jan 2022 11:35 AM IST
share
ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ?: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ''ಕಾಂಗ್ರೆಸ್ಸಿಗರೇ, ಅಂತರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂಬ ಪಾಠವನ್ನು ಇತಿಹಾಸದಿಂದಲೂ ಕಲಿತಿಲ್ಲವೇ? ಈ‌ ಹಿಂದೆ ಕಾವೇರಿ ಪಾದಯಾತ್ರೆ ನಡೆಸಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಘಟನೆ ನೆನಪಿರಬೇಕಲ್ಲವೇ? ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ?'' ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. 

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ,  ''ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ?'' ಎಂದು ಪ್ರಶ್ನಿಸಿದೆ

''ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಾಕಿ ಇದೆ. ಈ ಹಂತದಲ್ಲಿ ಯೋಜನೆ ಜಾರಿಗೆ ಮುಂದಾಗುವುದು, ಜಾರಿಗಾಗಿ ಒತ್ತಡ ಹೇರುವುದು ನ್ಯಾಯಾಂಗ ನಿಂದನೆಯಲ್ಲವೇ? ಈ ಕನಿಷ್ಠ ಪ್ರಜ್ಞೆಯೂ ಕಾಂಗ್ರೆಸ್ ನಾಯಕರಿಗಿಲ್ಲವೇ? ಸೆಕ್ಷನ್ ಸಿದ್ದರಾಮಯ್ಯ ಈ ವಿಚಾರದಲ್ಲೂ ಬುರುಡೆ ಬಿಡುತ್ತಾರಾ?''  ಎಂದು ಹೇಳಿದೆ. 

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. ಸಂಘರ್ಷದಿಂದ ವ್ಯಾಜ್ಯ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ಸಿಗರು #ಸುಳ್ಳಿನಜಾತ್ರೆ ಮಾಡುವ ಬದಲು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ತಮ್ಮ ಮಿತ್ರಪಕ್ಷ ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಬಿಜೆಪಿ ಒತ್ತಾಯಿಸಿದೆ. 

''ಮೇಕೆದಾಟು ವಿಚಾರದಲ್ಲಿ ಕರ್ನಾಟಕಕ್ಕೆ ಐತಿಹಾಸಿಕ ಅನ್ಯಾಯವಾಗಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ. 2014 ರಲ್ಲಿ ಡಿಪಿಆರ್ ರಚನೆಗೆ ಜಾಗತಿಕ ಪ್ರಸ್ತಾವನೆ ಕರೆದು 2018 ರ ವರೆಗೂ ಕಣ್ಣುಮುಚ್ಚಿ ಕುಳಿತುಕೊಂಡಿದ್ದೇ ಕಾಂಗ್ರೆಸ್ ಸಾಧನೆ. ಕಾಂಗ್ರೆಸ್ಸಿಗರು ಅಂದು ಕಾಲಹರಣ ಮಾಡಿ ಇಂದು #ಸುಳ್ಳಿನಜಾತ್ರೆ ಮಾಡುತ್ತಿದ್ದಾರೆ'' ಎಂದು ಟೀಕಿಸಿದೆ.

''2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೇ?'' ಎಂದು ಬಿಜೆಪಿ  ಪ್ರಶ್ನಿಸಿದೆ.

ಕಾಂಗ್ರೆಸ್ಸಿಗರೇ,

ಅಂತರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂಬ ಪಾಠವನ್ನು ಇತಿಹಾಸದಿಂದಲೂ ಕಲಿತಿಲ್ಲವೇ?

ಈ‌ ಹಿಂದೆ ಕಾವೇರಿ ಪಾದಯಾತ್ರೆ ನಡೆಸಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಘಟನೆ ನೆನಪಿರಬೇಕಲ್ಲವೇ?

ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ?#ಸುಳ್ಳಿನಜಾತ್ರೆ

— BJP Karnataka (@BJP4Karnataka) January 8, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X