ರವಿವಾರದಿಂದ ಮೇಕೆದಾಟು ಪಾದಯಾತ್ರೆ: ಕನಕಪುರದ ಡಿಕೆಶಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ

ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸಲಿರುವ 'ಮೇಕೆದಾಟು ಪಾದಯಾತ್ರೆಗೆ ಸಿದ್ಧತೆ ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಕನಕಪುರದ ನಿವಾಸದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷದ ನಾಯಕರ ಸಭೆ ನಡೆಯಿತು.
ರವಿವಾರ (ಜ.9) ದಿಂದ ಜ.19ರ ವರೆಗೆ ನಡೆಯಲಿರುವ ಪಾದಯಾತ್ರೆ ಕನಕಪುರದ ಸಂಗಮದಿಂದ ಕನಕಪುರ, ರಾಮನಗರ, ಬಿಡದಿ ಹಾಗೂ ಕೆಂಗೇರಿ ಮಾರ್ಗವಾಗಿ ಬೆಂಗಳೂರು ತಲುಪಲಿದೆ.
ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು, ಹಿರಿಯ ಮುಖಂಡರ ಸಭೆ ನಡೆಯಿತು. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಈಶ್ವರ ಖಂಡ್ರೆ, ರಾಮಲಿಂಗ ರೆಡ್ಡಿ, ಸಲೀಂ ಅಹಮದ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಸಿ.ಎಂ. ಇಬ್ರಾಹಿಂ ಮತ್ತಿತರರು ಪಾಲ್ಗೊಂಡಿದ್ದರು.






.jpeg)

.jpeg)

