Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ 30,436 ಕೋವಿಡ್...

ಉಡುಪಿ ಜಿಲ್ಲೆಯಲ್ಲಿ 30,436 ಕೋವಿಡ್ ಸಂಬಂಧಿ ಕಾರ್ಯಕರ್ತರಿಗೆ ಮುನ್ನೆಚ್ಚರಿಕಾ ಡೋಸ್

ವಾರ್ತಾಭಾರತಿವಾರ್ತಾಭಾರತಿ8 Jan 2022 7:29 PM IST
share

ಉಡುಪಿ, ಜ.8: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತ ರಾದ ಪೊಲೀಸ್, ಕಂದಾಯ, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಮತ್ತಿತರ ಸಿಬ್ಬಂದಿಗಳನ್ನು ಕೋವಿಡ್ 3ನೇ ಅಲೆ ಬಾಧಿಸದಂತೆ ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಮುನ್ನೆಚ್ಚರಿಕೆಯಾಗಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕೆ ನೀಡಲು ಸರಕಾರ ನಿರ್ಧರಿಸಿದೆ.

ಉಡುಪಿ ಜಿಲ್ಲೆಯಲ್ಲಿ ಜನವರಿ 10ರಿಂದ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 60ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿ ರುವ ಫಲಾನುಭವಿಗಳಿಗೆ ಮುಂಜಾಗ್ರತಾ ಡೋಸ್ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಸರಕಾರಿ ಕೋವಿಡ್-19 ಲಸಿಕಾಕರಣ ಕೇಂದ್ರಗಳಲ್ಲಿ ಈ ಗುಂಪಿನ ಫಲಾನುಭವಿಗಳಿಗೆ ಉಚಿತವಾಗಿ ಲಸಿಕೆ ನೀಡಲು ವ್ಯವ್ಥೆ ಮಾಡಿ ಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ 2ನೇ ಡೋಸ್ ಕೋವಿಶೀಲ್ಡ್ ಅಥವಾ 2ನೇ ಡೋಸ್ ಕೋವ್ಯಾಕ್ಸಿನ್ ಪಡೆದು 9 ತಿಂಗಳು ಪೂರೈಸಿದವರಿಗೆ (39 ವಾರಗಳು) ಸರಕಾರಿ ಲಸಿಕಾ ಕೇಂದ್ರದಲ್ಲಿ ಉಚಿತ ಮುನ್ನೆಚ್ಚರಿಕೆ (ಬೂಸ್ಟರ್) ಡೋಸ್ ಲಸಿಕೆಯನ್ನು ನೀಡಲಾಗುವುದು. 2 ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದವರು ಮುನ್ನೆಚ್ಚರಿಕೆ ಲಸಿಕಾ ಡೋಸ್ ಆಗಿ ಕೋವಿಶೀಲ್ಡ್ ಲಸಿಕೆಯನ್ನೇ ಪಡೆಯಬೇಕು. ಅದೇ ರೀತಿ 2 ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದವರು ಮುನ್ನೆಚ್ಚರಿಕೆ ಲಸಿಕಾ ಡೋಸ್ ಆಗಿ ಕೋವಾ್ಯಕ್ಸಿನ್ ಲಸಿಕೆಯನ್ನು ಪಡೆಯಬೇಕು.

ಮುನ್ನೆಚ್ಚರಿಕೆ ಡೋಸ್ ಪಡೆಯಲು ಆರೋಗ್ಯ ಕಾರ್ಯಕರ್ತರಾಗಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳ/ಕ್ಲಿನಿಕ್, ನರ್ಸಿಂಗ್ ಕಾಲೇಜು, ಪ್ಯಾರಾ ಮೆಡಿಕಲ್ ಕಾಲೇಜು, ಸರಕಾರಿ ಮತ್ತು ಖಾಸಗಿ ಆಯುಷ್ ಇಲಾಖೆಯ ಅಧಿಕಾರಿಗಳು/ನೌಕರರು/ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಅರ್ಹ ರಿರುತ್ತಾರೆ. 2ನೇ ಡೋಸ್ ಪಡೆದು 9 ತಿಂಗಳು ಪೂರೈಸಿದ್ದನ್ನು ಖಚಿತ ಪಡಿಸಿಕೊಂಡು ಲಸಿಕೆ ಪಡೆಯಬಹುದಾಗಿದೆ.

ಯಾರೆಲ್ಲಾ ಅರ್ಹರು:  ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಲು ಆರೋಗ್ಯ ಕಾರ್ಯಕರ್ತರ ಗುರಿ 23,125 ಆಗಿರುತ್ತದೆ. ಮುನ್ನೆಚ್ಚರಿಕೆ ಡೋಸ್ ಪಡೆಯಲು ಮುಂಚೂಣಿ ಕಾರ್ಯಕರ್ತರಾಗಿ ಕಂದಾಯ ಇಲಾಖೆ, ಆರ್‌ಡಿಪಿಆರ್ ಇಲಾಖೆ, ನಗರ ಸ್ಥಳೀಯ ಸಂಸ್ಥೆ ಮತ್ತು ಪೋಲಿಸ್ ಇಲಾಖೆಯ ಅಧಿಕಾರಿ/ನೌಕರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಅರ್ಹರಿರುತ್ತಾರೆ.

ಇವರುಗಳು 2ನೇ ಡೋಸ್ ಪಡೆದು 9 ತಿಂಗಳು ಪೂರೈಸಿದ್ದನ್ನು ಖಚಿತಪಡಿಸಿ ಕೊಂಡು ಲಸಿಕೆ ಪಡೆಯಬಹುದಾಗಿದೆ. ಮುನ್ನೆಚ್ಚರಿಕೆ ಡೋಸ್ ಪಡೆಯಲು ಮುಂಚೂಣಿ ಕಾರ್ಯಕರ್ತರ ಗುರಿ 7,311 ಆಗಿದೆ. ಎಲ್ಲಾ ಅರ್ಹ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರು ಲಸಿಕೆ ಪಡೆದು ಕೋವಿಡ್‌ನಿಂದ ಹೆಚ್ಚಿನ ಸುರಕ್ಷತೆ ಪಡೆಯಬಹುದಾಗಿದೆ.

ಕೋವಿಡ್-19 ವಿರುದ್ದದ ಹೋರಾಟದಲ್ಲಿ ಸಾರ್ವಜನಿಕರ ರಕ್ಷಣೆಗೆ ಸದಾ ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತ ರು ಕೋವಿಡ್ -19ನಿಂದ ಬಾಧಿತರಾದರೆ ಇಡೀ ಸಮಾಜದ ಆರೋಗ್ಯ ರಕ್ಷಣೆ ಮತ್ತು ಕೋವಿಡ್ ನಿಯಂತ್ರಣ ಕಾರ್ಯಗಳ ನಿರ್ವಹಣೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಈ ಸಮಯ ದಲ್ಲಿ ಇವರ ರಕ್ಷಣೆಗಾಗಿ ಮುನ್ನೆಚ್ಚರಿಕ ಡೋಸ್ ನೀಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

''ಜಿಲ್ಲೆಯ ಎಲ್ಲಾ ಅರ್ಹ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ 7 ದಿನಗಳ ಒಳಗೆ ಸಂಪೂರ್ಣವಾಗಿ ಮುನ್ನೆಚ್ಚರಿಕಾ ಡೋಸ್ ಗಳನ್ನು ನೀಡಲು ಗುರಿ ನಿಗದಿಪಡಿಸಲಾಗಿದ್ದು, ಇದಕ್ಕಾಗಿ ವಿಶೇಷ ಲಸಿಕಾ ಶಿಬಿರಗಳನ್ನೂ ಸಹ ಆಯೋಜಿಸಲಾಗಿದೆ''.

-ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X