Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಉಲ್ಬಣ: ಚುನಾವಣಾ ಆಯೋಗದಿಂದ...

ಕೋವಿಡ್ ಉಲ್ಬಣ: ಚುನಾವಣಾ ಆಯೋಗದಿಂದ ಜ.15ರವರೆಗೆ ಬಹಿರಂಗ ರ್‍ಯಾಲಿಗಳಿಗೆ ನಿಷೇಧ, ಪ್ರಚಾರ ಮಾರ್ಗಸೂಚಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ8 Jan 2022 10:22 PM IST
share
ಕೋವಿಡ್ ಉಲ್ಬಣ: ಚುನಾವಣಾ ಆಯೋಗದಿಂದ ಜ.15ರವರೆಗೆ ಬಹಿರಂಗ ರ್‍ಯಾಲಿಗಳಿಗೆ ನಿಷೇಧ, ಪ್ರಚಾರ ಮಾರ್ಗಸೂಚಿ ಪ್ರಕಟ

ಹೊಸದಿಲ್ಲಿ,ಜ.8: ಅಭೂತಪೂರ್ವ ಕ್ರಮವೊಂದರಲ್ಲಿ ಶನಿವಾರ ಚುನಾವಣಾ ಆಯೋಗವು ಕೋವಿಡ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಗಳು ನಡೆಯಲಿರುವ ಐದು ರಾಜ್ಯಗಳಲ್ಲಿ ಜ.15ರವರೆಗೆ ಬಹಿರಂಗ ರ್ಯಾಲಿಗಳು,ರೋಡ್ ಶೋಗಳು ಮತ್ತು ಬೀದಿಬದಿ ಸಭೆಗಳನ್ನು ನಿಷೇಧಿಸಿದೆ ಮತ್ತು ಕಟ್ಟುನಿಟ್ಟಾದ ಸುರಕ್ಷತಾ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಉ.ಪ್ರದೇಶ, ಪಂಜಾಬ್, ಉತ್ತರಾಖಂಡ,‌ ಗೋವಾ ಮತ್ತು ಮಣಿಪುರ ರಾಜ್ಯ ವಿಧಾನಸಭೆಗಳಿಗೆ ಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ಸುಶೀಲ ಚಂದ್ರ ಅವರು ಚುನಾವಣಾ ಪ್ರಚಾರವನ್ನು ಡಿಜಿಟಲ್ ವಿಧಾನದಲ್ಲಿ ನಡೆಸುವಂತೆ ರಾಜಕೀಯ ಪಕ್ಷಗಳನ್ನು ಆಗ್ರಹಿಸಿದರಲ್ಲದೆ, ದೂರದರ್ಶನದಲ್ಲಿ ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳಿಗೆ ನಿಗದಿಯಾಗಿರುವ ಸಮಯಾವಕಾಶವನ್ನು ದ್ವಿಗುಣಗೊಳಿಸುವುದಾಗಿ ಪ್ರಕಟಿಸಿದರು.

ಕಳೆದ ವರ್ಷದ ಮಾರ್ಚ್-ಎಪ್ರಿಲ್‌ನಲ್ಲಿ ಭೀಕರ ಕೋವಿಡ್ ಎರಡನೇ ಅಲೆ ಅಪ್ಪಳಿಸಿದ ಬಳಿಕ ಚುನಾವಣಾ ಆಯೋಗವು ತೀವ್ರ ಟೀಕೆಗಳಿಗೆ ಗುರಿಯಾಗಿತ್ತು. ಆ ಸಮಯದಲ್ಲಿ ಪ.ಬಂಗಾಳ,ತಮಿಳುನಾಡು,ಪುದುಚೇರಿ,ಅಸ್ಸಾಂ ಮತ್ತು ಕೇರಳಗಳಲ್ಲಿ ಚುನಾವಣೆಗಳನ್ನು ನಡೆಸಿದ್ದು ಕೋವಿಡ್ ಉಲ್ಬಣಗೊಳ್ಳಲು ಕಾರಣಗಳಲ್ಲೊಂದಾಗಿತ್ತು ಎಂದು ದೂರಲಾಗಿತ್ತು.

ಆಯೋಗವು ಚುನಾವಣಾ ಪ್ರಚಾರಕ್ಕಾಗಿ 16 ಅಂಶಗಳ ಮಾರ್ಗಸೂಚಿಯನ್ನು ಪಟ್ಟಿ ಮಾಡಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಮತ್ತು ವೃತ್ತಗಳಲ್ಲಿ ಸಭೆಗಳ ನಿಷೇಧ,ಮನೆಮನೆ ಪ್ರಚಾರಕ್ಕೆ ತೆರಳುವ ವ್ಯಕ್ತಿಗಳ ಸಂಖ್ಯೆ ಅಭ್ಯರ್ಥಿ ಸೇರಿದಂತೆ ಐದಕ್ಕೆ ಸೀಮಿತ ಮತ್ತು ಮತ ಎಣಿಕೆಯ ಬಳಿಕ ವಿಜಯೋತ್ಸವಗಳಿಗೆ ನಿಷೇಧ ಇವುಗಳಲ್ಲಿ ಸೇರಿವೆ.

ಕೋವಿಡ್ ಶಿಷ್ಟಾಚಾರಗಳನ್ನು ಪಾಲಿಸದಿದ್ದರೆ ರಾಜಕೀಯ ಪಕ್ಷಗಳು ಇನ್ನಷ್ಟು ರ್ಯಾಲಿಗಳನ್ನು ನಡೆಸುವುದನ್ನು ನಿಷೇಧಿಸಲು ಆಯೋಗವು ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ ಚಂದ್ರ,ಆಯೋಗವು ಜ.15ರಂದು ಕೋವಿಡ್ ಸ್ಥಿತಿಯನ್ನು ಪುನರ್ಪರಿಶೀಲಿಸಿದ ಬಳಿಕ ಬಹಿರಂಗ ರ್ಯಾಲಿಗಳಿಗೆ ಅವಕಾಶ ನೀಡುವ ಬಗ್ಗೆ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು.

ಮತದಾರರಿಗೆ ಭರವಸೆ ನೀಡುವ ಪ್ರಯತ್ನವಾಗಿ ಚಂದ್ರ,ಎಲ್ಲ ಚುನಾವಣಾ,ಭದ್ರತಾ ಮತ್ತು ಮತ ಎಣಿಕೆ ಸಿಬ್ಬಂದಿಗಳು ಲಸಿಕೆಯ ಎರಡು ಡೋಸ್‌ಗಳನ್ನು ಪಡೆದುಕೊಂಡಿರುವುದು ಅಗತ್ಯವಾಗಿದೆ ಎಂದರು.

ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ ಮತ್ತು ಪ್ರತಿ ಮತಗಟ್ಟೆಗೆ ಮತದಾರರ ಸಂಖ್ಯೆಯನ್ನು 1,500ರಿಂದ 1,250ಕ್ಕೆ ತಗ್ಗಿಸಲಾಗಿದೆ. ರಾತ್ರಿ ಎಂಟು ಗಂಟೆಯಿಂದ ಬೆಳಿಗ್ಗೆ ಎಂಟು ಗಂಟೆಯವರೆಗೆ ಪ್ರಚಾರ ಕರ್ಫ್ಯೂ ಹೇರಲಾಗಿದ್ದು,ಯಾವುದೇ ದಿನ ಈ ಅವಧಿಯಲ್ಲಿ ಚುನಾವಣಾ ಪ್ರಚಾರವನ್ನು ನಡೆಸುವಂತಿಲ್ಲ ಎಂದು ಚಂದ್ರ ತಿಳಿಸಿದರು. ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಪಕ್ಷಗಳಿಗೆ ಸ್ಟಾರ್ ಪ್ರಚಾರಕರ ಗರಿಷ್ಠ ಸಂಖ್ಯೆಯನ್ನು 40ರಿಂದ 30ಕ್ಕೆ ತಗ್ಗಿಸಿರುವ ಆಯೋಗವು,ಸಣ್ಣ,ಮಾನ್ಯತೆ ಹೊಂದಿರದ ಪಕ್ಷಗಳಿಗೆ ಈ ಸಂಖ್ಯೆಯನ್ನು 20ರಿಂದ 15ಕ್ಕೆ ಇಳಿಸಿದೆ.

ಕೋವಿಡ್ ರೋಗಿಗಳು ಮತ್ತು ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳಿಗೆ ಆರೋಗ್ಯ ಅಧಿಕಾರಿಗಳ ಉಸ್ತುವಾರಿಯಡಿ ಕಟ್ಟುನಿಟ್ಟಾದ ಕೋವಿಡ್ ಸಂಬಂಧಿತ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಯೊಂದಿಗೆ ಮತದಾನದ ದಿನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಅವರ ಮತಗಟ್ಟೆಗಳಲ್ಲಿ ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗುವುದು. ಸೆಕ್ಟರ್ ದಂಡಾಧಿಕಾರಿಗಳು ತಮಗೆ ಹಂಚಿಕೆಯಾಗರುವ ಮತಗಟ್ಟೆಗಳಲ್ಲಿ ಈ ಚಟುವಟಿಕೆಯನ್ನು ಸಂಯೋಜಿಸಲಿದ್ದಾರೆ ಎಂದು ಚಂದ್ರ ತಿಳಿಸಿದರು.

ರ್ಯಾಲಿಗಳನ್ನು ನಡೆಸಲು ಅವಕಾಶ ನೀಡಿದರೆ ಅವುಗಳಲ್ಲಿ ಭಾಗವಹಿಸುವ ಜನರಿಗೆ ಮಾಸ್ಕ್‌ಗಳು ಮತ್ತು ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಒದಗಿಸುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸಲಾಗಿದೆ. ವಿಜಯ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದ್ದು,ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಲು ಅಭ್ಯರ್ಥಿಯ ಜೊತೆಯಲ್ಲಿರಲು ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X