ವೀಕೆಂಡ್ ಕರ್ಫ್ಯೂ ಉಲ್ಲಂಘನೆ: ದ.ಕ.ಜಿಲ್ಲೆಯಲ್ಲಿ 534 ಪ್ರಕರಣ ದಾಖಲು

ಮಂಗಳೂರು, ಜ.9: ಕೋವಿಡ್ 19ರ ರೂಪಾಂತರಿ ಒಮೈಕ್ರಾನ್ ಸೋಂಕನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರಕಾರ ಜಾರಿಗೊಳಿಸಿದ್ದ ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ ಘಟನೆಗೆ ಸಂಬಂಧಿಸಿದಂತೆ ದ.ಕ.ಜಿಲ್ಲೆಯಲ್ಲಿ ರವಿವಾರ 534 ಪ್ರಕರಣಗಳು ದಾಖಲಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್ ನಿಯಮ ಹಾಗೂ ಮೋಟಾರು ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 534 ಪ್ರಕರಣ ದಾಖಲಿಸಿ 1,75,400 ರೂ. ದಂಡ ವಸೂಲಿ ಮಾಡಲಾಗಿದೆ. ಮಾಸ್ಕ್ ಧರಿಸದ 240 ಪ್ರಕರಣಕ್ಕೆ ಸಂಬಂಧಿಸಿ 39,570 ರೂ. ದಂಡ ವಸೂಲಿ ಮಾಡಲಾಗಿದೆ. 47ಕ್ಕೂ ಅಧಿಕ ವಾಹನಗಳನ್ನು ಮುಟ್ಟುಗೋಲು ಹಾಕಿ ಬಳಿಕ ದಂಡ ವಿಧಿಸಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Next Story





