ಜ.10: ಕೋವಿಡ್ ಜಾಗೃತಿ ಕಾರ್ಯಕ್ರಮ
ಮಂಗಳೂರು, ಜ.9: ದ.ಕ. ಜಿಲ್ಲಾಡಳಿತ, ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಭಾಗಿತ್ವದಲ್ಲಿ ಕೋವಿಡ್ ಜಾಗೃತಿ ಕಾರ್ಯಕ್ರಮವು ಜ.10ರಂದು ಬೆಳಗ್ಗೆ 10ಕ್ಕೆ ದ.ಕ. ಜಿಲ್ಲಾಧಿಕಾರಿ ಕಚೇರಿಯ ದ್ವಾರದ ಮುಂಭಾಗದಿಂದ ಆರಂಭವಾಗಲಿದೆ.
ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





