ಕೋಟತಟ್ಟು ಪ್ರಕರಣ: ಕೊರಗರಿಗೆ ನ್ಯಾಯ ಕೋರಿ ಜ.12ರಂದು ಕಾಂಗ್ರೆಸ್‌ನಿಂದ ಪ್ರತಿಭಟನಾ ಮೆರವಣಿಗೆ
ಉಡುಪಿ, ಜ.10: ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುನಲ್ಲಿ ಡಿ.27ರಂದು ರಾತ್ರಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ಮದುಮಗನೂ ಸೇರಿದಂತೆ ಹಲವರ ಮೇಲೆ ಲಾಠಿ ಪ್ರಹಾರ ನಡೆಸಿ, ರಾಜೇಶ್ ಕೊರಗ ಹಾಗೂ ಇತರರ ಮೇಲೆ ದಾಖಲಿಸಿದ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂಬ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ನಾಳೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಜ.12ರ ಬೆಳಿಗ್ಗೆ 11 ಗಂಟೆಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿಗಳ ಕಛೇರಿಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





