ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ
ಉಡುಪಿ, ಜ.10: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್‌ನವರು ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಿದೆ.
ಆಸಕ್ತರು ಜನವರಿ 14ರ ಒಳಗೆ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ದೂ. ಸಂಖ್ಯೆ: 0821-2515944 ಗೆ ಕರೆಮಾಡಿ, ಹೆಸರನ್ನು ನೊಂದಾಯಿಸಿ ಕೊಳ್ಳುವಂತೆ ಕ.ರಾ.ಮು. ಕುಲಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
Next Story





