Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷ್ಣಾಪುರ ಮಠಾಧೀಶರಿಂದ ಪುರಪ್ರವೇಶ; ಪೌರ...

ಕೃಷ್ಣಾಪುರ ಮಠಾಧೀಶರಿಂದ ಪುರಪ್ರವೇಶ; ಪೌರ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ10 Jan 2022 9:52 PM IST
share
ಕೃಷ್ಣಾಪುರ ಮಠಾಧೀಶರಿಂದ ಪುರಪ್ರವೇಶ; ಪೌರ ಸನ್ಮಾನ

ಉಡುಪಿ, ಜ.10: ಇದೇ ಜ.18ರಂದು ನಾಲ್ಕನೇ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ದೇಶಪರ್ಯಟನೆಯನ್ನು ಮುಗಿಸಿ ಇಂದು ಉಡುಪಿ ನಗರ ಪ್ರವೇಶಿಸಿದ್ದು, ಅವರನ್ನು ಮೆರವಣಿಗೆಯಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆತಂದು ಸಂಜೆ ರಥಬೀದಿಯಲ್ಲಿ ಉಡುಪಿ ನಗರಸಭೆಯ ವತಿಯಿಂದ ಪೌರ ಸನ್ಮಾನ ನೀಡಲಾಯಿತು.

ಪೌರಸನ್ಮಾನ ಸ್ವೀಕರಿಸಿ ಮಾತನಾಡಿದ ಕೃಷ್ಣಾಪುರ ಶ್ರೀಗಳು, ಉಡುಪಿಯಲ್ಲಿ ಮಧ್ವಾಚಾರ್ಯರು ಹಾಗೂ ವಾದಿರಾಜರ ಚಿತ್ತಕ್ಕೆ ಬಂದ ಕಾರ್ಯಗಳು ಮಾತ್ರ ನೆರವೇರುತ್ತವೆ. ಹೀಗಾಗಿ ದೇವರ ತೃಪ್ತಿಗೆ ಪ್ರಥಮ ಆದ್ಯತೆ. ಇದರೊಂದಿಗೆ ಭಕ್ತರ ಅನುಕೂಲಕ್ಕೆ ಮನ ನೀಡಲಾಗುವುದು ಎಂದರು.

ರಥಬೀದಿಯ ಪೂರ್ಣಪ್ರಜ್ಞ ಮಂಟಪದಲ್ಲಿ ಪೌರ ಸನ್ಮಾನ ಸಮಾರಂಭ ನಡೆಯಿತು. ಪರ್ಯಾಯ ಸಂದರ್ಭದಲ್ಲಿ ಸಂಪ್ರದಾಯಕ್ಕೆ ಯಾವುದೇ ಚ್ಯುತಿ ಬರಬಾರದು ಎಂಬುದು ನಮ್ಮ ಪ್ರಮುಖ ಉದ್ದೇಶ. ವಾದಿರಾಜರು ಪ್ರಾರಂಭಿಸಿದ ಪರ್ಯಾಯ ವಿಧಿವಿಧಾನಗಳು ಕಳೆದ ಸುಮಾರು 500 ವರ್ಷಗಳಿಂದ ನಡೆಯುತ್ತಿದೆ. ಇದಕ್ಕೆ ವಿರುದ್ಧವಾಗಿ ನಡೆದರೆ ದೇವದ್ರೋಹಿ ಗಳಾಗುತ್ತೇವೆ. ಹೀಗಾಗಿ ಜನತೆ ಮಠದೊಂದಿಗೆ ಸಹಕರಿಸಬೇಕು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಇದರಿಂದ ಲೋಕಕ್ಕೆ ಒಳಿತಾಗಬೇಕು. ಸನ್ಮಾನದಿಂದ ನಮ್ಮ ಜವಾಬ್ದಾರಿ ಹೆಚ್ಚಾಗಿದೆ ಎಂದು ಹೇಳಿದರು.

ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂಧನ ಸಚಿವ ಸುನೀಲ್ ಕುಮಾರ್ ಮಾತನಾಡಿ, ದೇಶದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಧರ್ಮ ಜಾಗೃತಿ ಕಾರ್ಯ ನಿರಂತರ ನಡೆಯುತ್ತಿದೆ ಎಂದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಪರ್ಯಾಯದಲ್ಲಿ ಧಾರ್ಮಿಕ ಸಂಪ್ರದಾಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.

ವಿದ್ವಾನ್ ಡಾ. ಗುರುರಾಜ ಆಚಾರ್ಯ ನಿಪ್ಪಾಣಿ ಅಭಿನಂದನಾ ಭಾಷಣ ಮಾಡಿದರು. ಶಾಸಕ ರಘುಪತಿ ಭಟ್, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಗುರುರಾಜ್, ಸದಸ್ಯೆ ಮಾನಸಿ ಪೈ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪರ್ಯಾಯೋತ್ಸವ ಸಮಿತಿ ಅಧ್ಯಕ್ಷ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಇಂದಿರಾ ಪಾಲಿಟೆಕ್ನಿಕ್ ಆಡಳಿತಾಧಿಕಾರಿ ಡಾ. ಮೋಹನದಾಸ ಭಟ್ ಉಪಸ್ಥಿತರಿದ್ದರು.

ಪುರಪ್ರವೇಶ: ಇದಕ್ಕೆ ಮೊದಲು ಕೃಷ್ಣಾಪುರ ಶ್ರೀಗಳು, ದೇಶದ ವಿವಿಧ ತೀರ್ಥಕ್ಷೇತ್ರಗಳನ್ನು ಸಂದರ್ಶಿಸಿ ಇಂದು ಜೋಡುಕಟ್ಟೆಯಿಂದ ಸಾಂಪ್ರದಾಯಿಕ ಮೆರವಣಿಗೆಯೊಂದಿಗೆ ಪುರಪ್ರವೇಶ ಮಾಡಿದರು. ಕನಕನ ಕಿಂಡಿಯಲ್ಲಿ ಕೃಷ್ಣನನ್ನು ಕಂಡು ನಮಿಸಿದ ಅವರು ಚಂದ್ರವೌಳೀಶ್ವರ ಹಾಗೂ ಅನಂತೇಶ್ವರನಿಗೆ ನಮವಿ, ಮಧ್ವಾಚಾರ್ಯರಿಗೆ ಪೂಜೆ ಸಲಿಸಿ ಕೃಷ್ಣ ಮಠ ಪ್ರವೇಶಿಸಿದರು.

ಅಲ್ಲಿ ಬಾವಿ ಪರ್ಯಾಯ ಶ್ರೀಗಳನ್ನು ಹಾಲಿ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥರು ಸ್ವಾಗ ತಿಸಿ ಶ್ರೀಕೃಷ್ಣ, ಮುಖ್ಯಪ್ರಾಣರ ದರ್ಶನ ಮಾಡಿಸಿದರು. ನಂತರ ಕೃಷ್ಣಾಪುರ ಮಠದಲ್ಲಿ ನವಗ್ರಹ ದಾನ ಇತ್ಯಾದಿ ನಡೆದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X