Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಾದಯಾತ್ರೆ ತಡೆಯಲು ದೊಡ್ಡ ಸಂಚು: ರಾಜ್ಯ...

ಪಾದಯಾತ್ರೆ ತಡೆಯಲು ದೊಡ್ಡ ಸಂಚು: ರಾಜ್ಯ ಸರಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ10 Jan 2022 9:58 PM IST
share
ಪಾದಯಾತ್ರೆ ತಡೆಯಲು ದೊಡ್ಡ ಸಂಚು: ರಾಜ್ಯ ಸರಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು, ಜ. 10: ಮೇಕೆದಾಟು ಅಣೆಕಟ್ಟು ಯೋಜನೆ ತ್ವರಿತಗತಿಯಲ್ಲಿ ಜಾರಿಗೊಳಿಸಲು ಆಗ್ರಹಿಸಿ ಕಾಂಗ್ರೆಸ್ ಕೈಗೊಂಡಿರುವ `ನೀರಿಗಾಗಿ ನಡಿಗೆ' ಪಾದಯಾತ್ರೆ ಎರಡನೇ ದಿನವಾದ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹುಟ್ಟೂರು ದೊಡ್ಡಾಲಹಳ್ಳಿಯಿಂದ ಮಧ್ಯಾಹ್ನದ ವೇಳೆ ಏಳು ಕಿ.ಮೀ ಕ್ರಮಿಸಿ ಮಾದಪ್ಪನದೊಡ್ಡಿ ಬಳಿ ಊಟಕ್ಕೆ ಬಿಡುವು ಪಡೆದು ಅಲ್ಲಿಂದ 8 ಕಿ.ಮೀ ಸಾಗಿ ಕನಕಪುರ ತಾಲೂಕಿಗೆ ಪ್ರವೇಶಿಸಿದ್ದು, ನಾಳೆ(ಜ.11) ಮೂರನೆ ದಿನಕ್ಕೆ ಕಾಲಿಡಲಿದೆ.

ಕೋವಿಡ್ ಕರ್ಫ್ಯೂ ಆತಂಕವನ್ನು ಮರೆತು ಇಂದು ಅತ್ಯಂತ ಉತ್ಸಾಹದಿಂದಲೇ ದೊಡ್ಡ ಸಂಖ್ಯೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಕನಕಪುರ ಸುತ್ತಮುತ್ತಲ ಗ್ರಾಮಸ್ಥರು ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗೈರಾಗಿದ್ದರು. ಎರಡನೇ ದಿನ ಪಾದಯಾತ್ರೆಯಲ್ಲಿ ಪಕ್ಷದ ಹಿರಿಯ ನಾಯಕರು ಕಾಣಿಸಿಕೊಳ್ಳಲಿಲ್ಲ. 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮುಖಂಡರಾದ ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ್, ವಿನಯ್‍ಕುಲಕರ್ಣಿ, ಟಿ.ಬಿ.ಜಯಚಂದ್ರ, ಆರ್.ಧ್ರುವನಾರಾಯಣ, ಸಲೀಂ ಅಹ್ಮದ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್‍ನಾಥ್, ಮಾಜಿ ಸಚಿವೆ ಉಮಾಶ್ರೀ, ಶಾಸಕ ನರೇಂದ್ರಸ್ವಾಮಿ ಸೇರಿ ಹಲವು ಪ್ರಮುಖ ನಾಯಕರು ಹೆಜ್ಜೆ ಹಾಕಿದರು. ಬೆಳಗ್ಗೆ 9ಗಂಟೆಗೆ ಆರಂಭಗೊಂಡ ಪಾದಯಾತ್ರೆ, ಮಧ್ಯಾಹ್ನ ವೇಳೆಗೆ ಮಾದಪ್ಪನದೊಡ್ಡಿಯಲ್ಲಿ ಆಗಮಿಸಿತು. ಅಲ್ಲಿ ಊಟ-ವಿಶ್ರಾಂತಿ ಪಡೆದ ನಂತರ ಅಲ್ಲಿಂದ ರಾತ್ರಿ ವೇಳೆಗೆ ಕನಕಪುರ ಪಟ್ಟಣ ತಲುಪಿತು.

`ಪಾದಯಾತ್ರೆ ತಡೆಗೆ ಸಂಚು' ಆರೋಪ: `ರಾಜ್ಯದ ಹಿತಕ್ಕಾಗಿ ನಡೆಯುತ್ತಿರುವ ನೀರಿಗಾಗಿ ನಡಿಗೆ, `ನಮ್ಮ ನೀರು ನಮ್ಮ ಹಕ್ಕು' ಪಾದಯಾತ್ರೆಯಲ್ಲಿ ನಮ್ಮ ಪಕ್ಷದ ಎಲ್ಲ ಸ್ನೇಹಿತರು, ಕಾರ್ಯಕರ್ತರು, ಎಲ್ಲ ವರ್ಗದ ಜನ ಭಾಗವಹಿಸಿದ್ದಾರೆ. ಆದರೆ, ರಾಜ್ಯ ಸರಕಾರ ನನ್ನ ಹಾಗೂ ನಮ್ಮ ಪಕ್ಷದ ಮೇಲೆ ದೊಡ್ಡ ಸಂಚನ್ನು ರೂಪಿಸುತ್ತಿದ್ದು ಏನಾದರೂ ಮಾಡಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದರು.

ಸೋಮವಾರ ಇಲ್ಲಿನ ಮಾದಪ್ಪನದೊಡ್ಡಿಯಲ್ಲಿ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜ್ಯ ಸರಕಾರಕ್ಕೆ ನಮ್ಮ ನಡಿಗೆ ತಡೆಯುವುದು ದೊಡ್ಡ ಕಾರ್ಯಕ್ರಮವಾಗಿದೆ. ರಾಮನಗರ ಜಿಲ್ಲಾಧಿಕಾರಿಗೆ ಕೋವಿಡ್ ದೃಢಪಟ್ಟಿದೆಯಂತೆ. ಅವರು ಮುಖ್ಯಮಂತ್ರಿ ಹಾಗೂ ಸಚಿವರ ಪಕ್ಕ ಕೂತಿದ್ದರು. ಅವರಿಗೆ ಪಾಸಿಟಿವ್ ಆಗಿಲ್ಲವೇ? ನಿನ್ನೆ ರಾತ್ರಿ ನನ್ನ ಬಳಿಗೆ ಸಹಾಯಕ ಆರೋಗ್ಯಾಧಿಕಾರಿಯನ್ನು ಕಳುಹಿಸಿ ಸ್ಯಾಂಪಲ್ ಕಲೆಹಾಕಲು ಮುಂದಾದರು. ನಮ್ಮ ಮನೆಯಲ್ಲೆ ಒಂದು ಡಜನ್ ವೈದ್ಯರಿದ್ದಾರೆ. ಅರ್ಧ ಡಜನ್ ವೈದ್ಯಕೀಯ ಕಾಲೇಜು ಮಾಲಕರಿದ್ದಾರೆ. ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ. ಹೀಗಾಗಿ ಯಾವುದೇ ಪರೀಕ್ಷೆ ಅಗತ್ಯವಿಲ್ಲ ಎಂದು ಅವರನ್ನು ನಾನು ವಾಪಸ್ ಕಳುಹಿಸಿದೆ' ಎಂದು ಸ್ಪಷ್ಟಣೆ ನೀಡಿದರು.

ಸೋಂಕಿತರ ಏರಿಕೆ: ವಿಮಾನ ನಿಲ್ದಾಣದಲ್ಲಿ ಬಂದವರನ್ನೆಲ್ಲಾ ಹಿಡಿದು ಕೋವಿಡ್ ಸೋಂಕು ತಗುಲಿದೆ ಎಂದು ಹೇಳುತ್ತಿದ್ದಾರೆ. ಇದರಲ್ಲಿ ದೊಡ್ಡ ಷಡ್ಯಂತ್ರ ಅಡಗಿದ್ದು, ಪಾಸಿಟಿವ್ ಸಂಖ್ಯೆ ಹೆಚ್ಚಳ ಬಿಜೆಪಿ ತಂತ್ರವಾಗಿದೆ. ಜನರ ಮೇಲೆ ಬಿಜೆಪಿ ಕೋವಿಡ್, ಬಿಜೆಪಿ ಲಾಕ್‍ಡೌನ್, ಬಿಜೆಪಿ ಕಫ್ರ್ಯೂ ಹೇರಲಾಗಿದೆ. ಕಲೆಕ್ಷನ್ ಕಡಿಮೆ ಆಗಿರಬೇಕು. ಹೀಗಾಗಿ ಸೋಂಕು ಇಲ್ಲದಿದ್ದರೂ ಇವರು ಜನರಿಗೆ ಸೋಂಕು ಬರಿಸುತ್ತಿದ್ದಾರೆ. ಸೊಂಕು ಸಂಖ್ಯೆ ಹೆಚ್ಚಳ ವಿಚಾರವಾಗಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

ನನ್ನ ಬಳಿ ಬಂದ ಅಧಿಕಾರಕ್ಕೆ ಪಾಸಿಟಿವ್: `ನಿನ್ನೆ ನನಗೆ ಪರೀಕ್ಷೆ ನಡೆಸಲು ಕಳುಹಿಸಿದ್ದ ಅಧಿಕಾರಿಗೂ ಕೋವಿಡ್ ಪಾಸಿಟಿವ್ ಎಂದು ಹೇಳುತ್ತಿದ್ದಾರೆ. ಇದು ಎಷ್ಟು ನಿಜವೋ ಗೊತ್ತಿಲ್ಲ. ನಾನು ಪ್ರಾಥಮಿಕ ಸಂಪರ್ಕಿತ ಎನ್ನುತ್ತಿದ್ದಾರೆ. ಆತನನ್ನು ನನ್ನ ಬಳಿ ಕಳುಹಿಸಿದ್ದು ಯಾರು? ಮತ್ತು ಏಕೆ ಕಳುಹಿಸಿದರು? ಈ ವಿದ್ಯೆಯನ್ನು ಎಲ್ಲಿ ಕಲಿತಿರಿ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ವಿದ್ಯೆ ಇದೆ ಎಂದು ನಾನು ನಂಬುವುದಿಲ್ಲ' ಎಂದು ಶಿವಕುಮಾರ್ ಹೇಳಿದರು.

ಆಕ್ಸಿಜನ್ ಗಿರಾಕಿ: `ಆರೋಗ್ಯ ಸಚಿವರು ಅಥವಾ ಗೃಹ ಸಚಿವರಿಗೆ ಈ ವಿದ್ಯೆ ಗೊತ್ತಿರಬಹುದು. ಆರೋಗ್ಯ ಸಚಿವರು ಆಕ್ಸಿಜನ್‍ನಿಂದ ಸತ್ತವರನ್ನೇ ಸತ್ತಿಲ್ಲ ಎಂದ ಗಿರಾಕಿ ಅವರು. ಆ ಬಳಿಕ ಸತ್ತವರಿಗೆ ಪರಿಹಾರ ಪ್ರಕಟಿಸಿದರು. ಡಿಎಚ್‍ಓ ಅವರೆಲ್ಲ ಅವರ ವ್ಯಾಪ್ತಿಯಲ್ಲೇ ಬರುತ್ತಾರೆ. ಕೆಲ ದಿನಗಳ ಹಿಂದೆ ಗೃಹ ಸಚಿವರು ತಮ್ಮ ಊರಿನಲ್ಲಿ ಜಾತ್ರೆ ಮಾಡಿದ್ದಾರೆ. ಅವರ ವಿರುದ್ಧ ಯಾಕೆ ಪ್ರಕರಣ ದಾಖಲಾಗಿಲ್ಲ?' ಎಂದು ಖಾರವಾಗಿ ಪ್ರಶ್ನಿಸಿದರು.

ನಮ್ಮ ಮೇಲೆ ಮಾತ್ರ ಏಕೆ ಕೇಸು: `ಬಿಜೆಪಿ ನಾಯಕ ಗುತ್ತೆದಾರ್ ಅವರು ಸಾವಿರಾರು ಜನರನ್ನು ಸೇರಿಸಿಕೊಂಡು ಕಾರ್ಯಕ್ರಮ ಮಾಡಿದ್ದಾರೆ. ಆದರೂ ಪ್ರಕರಣ ಏಕೆ ದಾಖಲಾಗಿಲ್ಲ? ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ಎಂ.ಪಿ.ರೇಣುಕಾಚಾರ್ಯ ಮಾರ್ಗಸೂಚಿ ಉಲ್ಲಂಘಿಸಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ನಿನ್ನೆ ರಾಜ್ಯದ 127 ತಾಲೂಕುಗಳಿಂದ ನಮಗೆ ಕಫ್ರ್ಯೂ ನಿಯಮ ಉಲ್ಲಂಘನೆ ಪೋಟೋ, ವಿಡಿಯೋಗಳು ಬಂದಿವೆ. ಎಲ್ಲಿಯೂ ನಿಯಮ ಪಾಲನೆ ಆಗಿಲ್ಲ. ಎಲ್ಲೆಡೆ ಓಡಾಟ ಮಾಡಲಾಗಿದೆ. ಅವರ ಮೇಲೆ ಎಲ್ಲಿಯೂ ಕೇಸ್ ಹಾಕಿಲ್ಲ. ಆದರೆ, ನಮ್ಮ ಮೇಲೆ ಮಾತ್ರ ಏಕೆ?' ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದರು.

ನಿಮ್ಮ ವಿರುದ್ಧವೂ ಹೋರಾಟ: ಸಾತನೂರು ಪೊಲೀಸ್ ಠಾಣೆಯಲ್ಲಿ ನಾನು ಮತ್ತು ನಮ್ಮ ನಾಯಕರು ಸೇರಿ 30 ಜನರ ಮೇಲೆ ಕೇಸ್ ಹಾಕಿದ್ದಾರಂತೆ. ವೇದಿಕೆ ಮೇಲೆ ಕೇವಲ 30 ಜನ ಮಾತ್ರವೇ ಇದ್ದದ್ದಾ, ಇನ್ನಷ್ಟು ಜನರ ವಿವರಗಳನ್ನು ನಾನು ನೀಡುತ್ತೇನೆ. ಸಾವಿರಾರು ಜನ ಇದ್ದರಲ್ಲ ಅವರ ಮೇಲೆ ಏಕೆ ಕೇಸ್ ದಾಖಲಿಸಿಲ್ಲ? ಎಲ್ಲ ಕಡೆ ಬಿಜೆಪಿ ನಾಯಕರು ಸಭೆ ಕಾರ್ಯಕ್ರಮ ಮಾಡಿದ್ದಾರೆ. ಅವರ ಮೇಲೆ ಯಾಕೆ ಕೇಸ್ ಹಾಕಿಲ್ಲ? ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದ ವಿಚಾರವಾಗಿಯೂ ಪ್ರಕರಣ ದಾಖಲಿಸಿಲ್ಲ ಯಾಕೆ?

ನಾವು ಸುಮ್ಮನೆ ಕೂರುತ್ತೇವೆ ಎಂದು ಭಾವಿಸಿದ್ದೀರಾ? ಈ ವಿಚಾರವಾಗಿ ಕಾನೂನು ಹೋರಾಟ ನಡೆಸುವಂತೆ ನಮ್ಮ ಪಕ್ಷದ ಕಾನೂನು ಘಟಕಕ್ಕೆ ಸೂಚನೆ ನೀಡುತ್ತೇನೆ. ಇದು ರಾಜಕೀಯ ಹೋರಾಟ, ಅನ್ಯಾಯದ ವಿರುದ್ಧ ನಮ್ಮ ಹಕ್ಕಿಗಾಗಿ ಮಾಡುವ ಹೋರಾಟ. ಈ ರಾಜ್ಯದಲ್ಲಿ ಎಲ್ಲರಿಗೂ ನ್ಯಾಯ ಒಂದೇ. ನಾನು ಏನೇ ಮಾತನಾಡಿದರೂ ಬೇರೆ ರೀತಿ ಬಿಂಬಿತವಾಗುತ್ತಿದೆ ಎಂದು ಶಿವಕುಮಾರ್ ಟೀಕಿಸಿದರು.

ಮೂರು ದಿನ ಮೌನಕ್ಕೆ ಶರಣು: `ನಾನು ಹೇಳುವುದೊಂದು ತೋರಿಸುವುದು ಒಂದು. ಆದರೆ, ಅದನ್ನು ಬೇರೆ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಹೀಗಾಗಿ ಮುಂದಿನ ಮೂರ್ನಾಲ್ಕು ದಿನ ನಾನು ಮೌನ ವಹಿಸುತ್ತೇನೆ. ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡುವುದಿಲ್ಲ. ಪಾದಯಾತ್ರೆ ವಿಚಾರವಾಗಿ ನಮ್ಮ ಪಕ್ಷದ ಶಾಸಕರು, ವಿಪಕ್ಷ ನಾಯಕರು ಹಾಗೂ ಮುಖಂಡರು ಮಾಧ್ಯಮಗಳಿಗೆ ಬೇಕಾದ ಎಲ್ಲ ಮಾಹಿತಿ ನೀಡುತ್ತಾರೆ. ಅವರೇ ಪಕ್ಷದ ನಿಲುವು ನಿಮಗೆ ಹೇಳಲಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.

ಆರೋಗ್ಯಾಧಿಕಾರಿ ನಿಮ್ಮ ಬಳಿ ಏನು ಹೇಳಿದ್ದಾರೋ ಗೊತ್ತಿಲ್ಲ, ನನ್ನ ಬಳಿ ಏನು ಹೇಳಿದ್ದಾರೆ ಎಂದು ನನಗೆ ಗೊತ್ತಿದೆ. ಅವರು ಹೇಳುವುದನ್ನು ಕೇಳಿಕೊಳ್ಳಿ, ನಾನು ಹೇಳುವುದನ್ನು ಕೇಳಿಕೊಳ್ಳಿ. ಅವರು ಸರಕಾರಿ ಅಧಿಕಾರಿ, ಅವರು ಏನು ತಾನೆ ಮಾಡಲು ಸಾಧ್ಯ?'. ಸರಕಾರದ ಆಡಳಿತದಲ್ಲಿ ಏನೇನಾಗುತ್ತಿದೆ ಏನೆಲ್ಲ ನಡೆಯುತ್ತಿದೆ ಎಂದು ಮಾಹಿತಿ ನಮಗೆ ಗೊತ್ತಿದೆ. ಅಲ್ಲಿರುವ ಮಂತ್ರಿಗಳು, ಅಧಿಕಾರಿಗಳು ನಮಗೆ ಮಾಹಿತಿ ನೀಡುತ್ತಿದ್ದಾರೆ. ನಿಮಗೆ ಮಾಹಿತಿ ಹೇಗೆ ಸಿಗುತ್ತದೋ, ಅದೇ ರೀತಿ ನಮಗೂ ಸಿಗುತ್ತದೆ' ಎಂದು ಶಿವಕುಮಾರ್ ಪ್ರತಿಕ್ರಿಯಿಸಿದರು.

`ನಾವು ಪಾದಯಾತ್ರೆಯಲ್ಲಿ ಸರಕಾರದ ಮಾರ್ಗಸೂಚಿ ಪಾಲನೆ ಜೊತೆಗೆ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಸರ್, ಮಾಸ್ಕ್ ಬಳಸುತ್ತಿದ್ದೇವೆ. ರಾಮನಗರ ಜಿಲ್ಲೆಯಲ್ಲಿ ಎಷ್ಟು ಜನ ಐಸಿಯು, ವೆಂಟಿಲೇಟರ್‍ನಲ್ಲಿದ್ದಾರೆ. ರಿಯಾಲಿಟಿ ಚೆಕ್ ಮಾಡಿ. ಕನಕಪುರದ ಆಕ್ಸಿಜನ್ ಕೇಂದ್ರಕ್ಕೆ ಇನ್ನು ಚಾಲನೆ ನೀಡಿಲ್ಲ. ಸರಕಾರದವರು ರಾಜಕೀಯಕ್ಕಾಗಿ ಜನರನ್ನು ಸಾಯಿಸಲು ಹೊರಟಿದ್ದಾರೆ. ಅನೇಕ ವ್ಯಾಪಾರ ಬಂದ್ ಆಗಿದೆ. ಆ ಮೂಲಕ ಅವರ ಜೀವನವನ್ನೇ ಮುಗಿಸುತ್ತಿದ್ದಾರೆ. ಜೀವನ ಮುಗಿದ ಮೇಲೆ ಜೀವ ಇದ್ದು ಏನು ಸುಖ? ಅವರನ್ನು ಬದುಕಿರುವಾಗಲೇ ಸಾಯಿಸುತ್ತಿದ್ದಾರೆ' ಎಂದು ಸರಕಾರದ ನಿರ್ಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

30 ಮಂದಿಯ ವಿರುದ್ಧ ಕೇಸ್ ದಾಖಲು:  ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಸಂಬಂಧ ರಾಮನಗರ ಜಿಲ್ಲೆ ಕನಕಪುರ ತಹಶಿಲ್ದಾರ್ ವಿಶ್ವನಾಥ್ ಅವರು ನೀಡಿದ ದೂರನ್ನು ಆಧರಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (ಎ-1), ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (ಎ-2) ಹಾಗೂ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖಗೆ (ಎ-3), ನಟರಾದ ದುನಿಯಾ ವಿಜಿ, ಸಾಧು ಕೋಕಿಲ, ಜಯಮಾಲಾ, ಸಾ.ರಾ.ಗೋವಿಂದು ಸೇರಿದಂತೆ ಒಟ್ಟು 30 ಮಂದಿ ಕಾಂಗ್ರೆಸ್ ಮುಖಂಡರ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ.

`ನಿನ್ನೆ ನನ್ನನ್ನು ಪರೀಕ್ಷೆ ಮಾಡಲು ಸರಕಾರದವರು ಕಳುಹಿಸಿದ್ದ ಅಧಿಕಾರಿಗೇ ಕೋವಿಡ್ ಪಾಸಿಟಿವ್ ಆಗಿದೆಯಂತೆ. ಇವರು ನನ್ನನ್ನು ಏನು ಮಾಡಬೇಕು ಎಂದುಕೊಂಡಿದ್ದಾರೆ. ನನ್ನ ಸಂಕಲ್ಪ ಏನು ಎಂದು ಅವರಿಗೆ ಗೊತ್ತಿದೆ. ಆದರೂ ಇಂತಹ ನೀಚ ರಾಜಕಾರಣ ಯಾಕೆ ಮಾಡುತ್ತಿದ್ದಾರೆ? ನನಗೆ ಪಾಸಿಟಿವ್ ಬಂದು ಬಿದ್ದಿದ್ದೇನಾ? ಉಸಿರಾಟ ನಿಂತಿದೆಯಾ?'

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X