Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಂದಿತಾ ಪ್ರಕರಣ ಸಿಬಿಐ ತನಿಖೆಗೆ ಕಿಮ್ಮನೆ...

ನಂದಿತಾ ಪ್ರಕರಣ ಸಿಬಿಐ ತನಿಖೆಗೆ ಕಿಮ್ಮನೆ ಪಟ್ಟು

ಜ.30 ರಂದು ಪ್ರತಿಭಟನೆಗೆ ಸಜ್ಜು

ವಾರ್ತಾಭಾರತಿವಾರ್ತಾಭಾರತಿ10 Jan 2022 10:11 PM IST
share
ನಂದಿತಾ ಪ್ರಕರಣ ಸಿಬಿಐ ತನಿಖೆಗೆ ಕಿಮ್ಮನೆ ಪಟ್ಟು

ಶಿವಮೊಗ್ಗ, ಜ.10: ನಂದಿತಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜ.30ರಂದು ಉಪವಾಸ ಸತ್ಯಾಗ್ರಹ ಮಾಡುವೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದಾಗ ಅರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಮುಖಂಡರುಗಳು ನಂದಿತಾ ಅಸಹಜ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಅರಗ ಜ್ಞಾನೇಂದ್ರ ಎಂಬ ಕೋಮುವಾದಿ ಗೃಹಮಂತ್ರಿ ನನ್ನನ್ನು ಸೋಲಿಸಲು ಯಾವುದೇ ರಾಜಕೀಯ ಆಯುಧ ಸಿಗದೆ ಹತಾಶರಾಗಿ ನಂದಿತ ಆತ್ಮಹತ್ಯೆ ಪ್ರಕರಣವನ್ನೇ ಮುಂದಿಟ್ಟುಕೊಂಡು ಕೊಲೆ ಅತ್ಯಾಚಾರವೆಂದು ಬಿಂಬಿಸಿ ಕೋಮುಗಲಭೆ ಸೃಷ್ಠಿಸಿ ರಾಜಕೀಯ ಲಾಭಕ್ಕಾಗಿ ಕೃಷ್ಣ ಪೂಜಾರಿ ಕುಟುಂಬವನ್ನು ರಸ್ತೆಗೆ ತಂದು ನಿಲ್ಲಿಸಿ ನನ್ನ ಮೇಲೆ ಆಪಾಧನೆ ಹೊರಿಸಿದ್ದರು. ಈ ಆರೋಪದ ಹಿಂದೆ ಅನೇಕ ಬ್ರಹ್ಮಾಂಡ ಭ್ರಷ್ಟರು ನಂಬಿಕೆ ದ್ರೋಹಿಗಳು ಕೂಡ ಸೇರಿಕೊಂಡು ನನ್ನನ್ನು ಸೋಲಿಸಲು ಕಳ್ಳದಾರಿ ಮಾಡಿಕೊಂಡರು ಎಂದು ಆರೋಪಿಸಿದರು.

ಈಗ ಅರಗ ಜ್ಞಾನೇಂದ್ರ ಅವರೇ ಗೃಹ ಮಂತ್ರಿಗಳಾಗಿದ್ದಾರೆ. ಅವರು ನಿರ್ಭಿತಿಯಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬಹುದಾಗಿದೆ. ನಾನು ಹಸ್ತಕ್ಷೇಪ ಮಾಡಿದೆ ಎಂಬ ಆರೋಪವನ್ನು ಕೂಡ ಅವರು ಹೊರಿಸುತ್ತಿದ್ದಾರೆ. 2014ರಿಂದ ನಂದಿತ ಸಾವಿನ ನಂತರ ಇದೇ ಅರಗ ಜ್ಞಾನೇಂದ್ರ ಅವರು 3ವರ್ಷಗಳ ಕಾಲ ವೈಕುಂಠ ಸಮಾರಾಧನೆ ಮಾಡಿದ್ದರು. ಗೆದ್ದ ಮೇಲೆ ವೈಕುಂಠ ಸಮಾರಾಧನೆ ಮಾಡಲಿಲ್ಲ. 2018ರ ಚುನಾವಣೆ ಸಂದರ್ಭದಲ್ಲಿ ನಂದಿತ ಮನೆಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮೀತ್ ಶಾ ಕೂಡ ಸಿಬಿಐ ತನಿಖೆಗೆ ಒಳಪಡಿಲಾಗುವುದು ಎಂದಿದ್ದರು. ಈಗ ಸಿಬಿಐ ತನಿಖೆ ನಡೆಸಲಿ ಎಂದು ಕಿಮ್ಮನೆ ರತ್ನಾಕರ್ ಸವಾಲು ಹಾಕಿದರು.

ಸಿಬಿಐ ತನಿಖೆಯಲ್ಲಿ ಒಂದು ವೇಳೆ ತಾವು ತಪ್ಪಿತಸ್ತರು ಎಂದು ಕಂಡು ಬಂದರೆ ಸಾಕ್ಷಿ ಸಮೇತ ಸಾಬೀತು ಆದರೆ ನಾನು ರಾಜಕೀಯ ಕ್ಷೇತ್ರದಿಂದ ನಿವೃತ್ತಿ ಘೋಷಿಸುತ್ತೇನೆ. 6 ತಿಂಗಳೊಳಗೆ ಸಿಬಿಐ ತನಿಖಾ ವರದಿ ಕೊಡಿ ಇಲ್ಲವೇ ಶಾಸಕ ಸ್ಥಾನಕ್ಕೆ ನೀವು ರಾಜೀನಾಮೆ ನೀಡಿ ಇಂತಹ ಸುಳ್ಳು ಆರೋಪಗಳಿಂದ ಜನರ ಭಾವನೆಗಳನ್ನು ದಿಕ್ಕು ತಪ್ಪಿಸಿದ್ದಿರಿ. ಮಾನ್ಯ ಮುಖ್ಯಮಂತ್ರಿಗಳು ಈ ಎಲ್ಲಾ ಘಟನೆಗಳ ಹಿನ್ನಲೆಯಲ್ಲಿ ಅಗರ ಜ್ಞಾನೇಂದ್ರ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಹಾಗೆಯೇ ತೀರ್ಥಹಳ್ಳಿಯ ಅರಣ್ಯಾಧಿಕಾರಿಗಳು ಗೃಹ ಸಚಿವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ದೌರ್ಜನ್ಯ ವೆಸಗುತ್ತಿದ್ದಾರೆ. ಇದನ್ನು ಖಂಡಿಸಿ ಫೆ.3ರಂದು ಗುಡ್ಡೆಕೊಪ್ಪದಿಂದ ತೀರ್ಥಹಳ್ಳಿ ಅರಣ್ಯ ಸಂರಕ್ಷಾಧಿಕಾರಿಗಳ ಕಚೇರಿಯವೆರಗೆ ಪ್ರತಿಭಟನಾ ಪಾದಯಾತ್ರೆಯನ್ನು ಹಮ್ಮಿಕೊಳ್ಳುವೆ ಎಂದರು.

ಮತಾಂತರದ ಬಗೆಗೆ ತಮ್ಮ ನಿಲುವು ಗಾಂಧೀಜಿಯ ನಿಲುವನೇ ಹೊಂದಿದೆ. ಗಾಂಧೀಜಿಯವರು ಮತಾಂತರಕ್ಕೆ ಸಂಬಂಧಿಸಿದಂತೆ ಸಮನ್ವಯ ದೃಷ್ಠಿಯನ್ನು ಸಾರಿದ್ದರು. ಅದೇ ತತ್ವದ ಅಡಿಯಲ್ಲಿ ನಾವಿದ್ದೇವೆ ಎಂದ ಅವರು, ಅರಗ ಜ್ಞಾನೇಂದ್ರ ಅವರು ಎಲ್ಲಾ ಕೋವಿಡ್ ನಿಯಮಗಳನ್ನು ಮೀರಿದ್ದಾರೆ. ತೀರ್ಥಹಳ್ಳಿಯಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಜಾತ್ರೆ ಮಾಡಿ ಸಮರ್ಥಿಸಿಕೊಂಡಿದ್ದಾರೆ. ಶಂಕುಸ್ಥಾಪನೆ, ಉದ್ಘಾಟನೆ, ಪೂಜೆಗಳು ಇವುಗಳನ್ನೆಲ್ಲ ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ. ಕೋವಿಡ್ ನಿಯಮ ಗೃಹ ಸಚಿವರಿಗೊಂದು ಸಾರ್ವಜನಿಕರಿಗೊಂದು ಇರುತ್ತದೆಯೇ ಎಂದು ಪ್ರಶ್ನೆ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆರ್.ಪ್ರಸನ್ನಕುಮಾರ್, ಕೆ.ಬಿ.ಪ್ರಸನ್ನಕುಮಾರ್, ಎನ್.ರಮೇಶ್, ಯಮುನಾ ರಂಗೇಗೌಡ, ವಿಜಯಕುಮಾರ್, ದೇವಿಕುಮಾರ್, ರಾಘವೇಂದ್ರ, ಗಾಜನೂರು ಗಣೇಶ್ ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X