Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮರ್ಥ ಭಾರತ ನಿರ್ಮಾಣವೇ ಎನ್‍ಇಪಿ ಗುರಿ:...

ಸಮರ್ಥ ಭಾರತ ನಿರ್ಮಾಣವೇ ಎನ್‍ಇಪಿ ಗುರಿ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ12 Jan 2022 11:50 PM IST
share
ಸಮರ್ಥ ಭಾರತ ನಿರ್ಮಾಣವೇ ಎನ್‍ಇಪಿ ಗುರಿ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು, ಜ.12: ವಿವೇಕಾನಂದರು ಆಸೆಪಟ್ಟಿದ್ದಂತಹ ಸಶಕ್ತ ಭಾರತವನ್ನು ಕಟ್ಟುವ ಮಹಾ ಉದ್ದೇಶದಿಂದಲೆ 34 ವರ್ಷಗಳ ನಂತರ ದೇಶದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಇದರ ಅನುಷ್ಠಾನದಲ್ಲಿ ರಾಜ್ಯವು ಇಡೀ ದೇಶಕ್ಕೇ ಮೊದಲ ಸ್ಥಾನದಲ್ಲಿದ್ದು, ಯುವಜನರ ಸಬಲೀಕರಣವನ್ನು ಸಮರೋಪಾದಿಯಲ್ಲಿ ಮಾಡುತ್ತಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

`ಸಮರ್ಥ ಭಾರತ’ ಸಂಘಟನೆಯು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 159ನೇ ಜಯಂತಿಯಲ್ಲಿ ಮಾತನಾಡಿದ ಅವರು, `ವಿವೇಕಾನಂದರು ಇಡೀ ಪ್ರಪಂಚಕ್ಕೆ ಭಾರತ ಮತ್ತು ಭಾರತೀಯತೆಯನ್ನು ಪರಿಚಯಿಸಿದರು. ಅವರಿಂದ ಪ್ರಭಾವಿತರಾಗಿರುವ ಪ್ರಧಾನಿ ಮೋದಿ ಈಗ ಎನ್‍ಇಪಿ ಮೂಲಕ ಆತ್ಮನಿರ್ಭರ ಭಾರತವನ್ನು ಕಟ್ಟಲು ದಾಪುಗಾಲಿಡುತ್ತಿದ್ದಾರೆ’ ಎಂದರು.

ಈ ಆಶಯಗಳಿಗೆ ತಕ್ಕಂತೆ ರಾಜ್ಯದಲ್ಲಿ ಇಡೀ ಶಿಕ್ಷಣ ವ್ಯವಸ್ಥೆಯನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಈಗಾಗಲೇ ಉನ್ನತ ಶಿಕ್ಷಣದಲ್ಲಿ ಬಹುತೇಕ ಈ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಒಂದು ವರ್ಷದಲ್ಲಿ ಶೇ.100ರಷ್ಟು ಡಿಜಿಟಲೀಕರಣ ಆಗಲಿದೆ. ಈ ಮೂಲಕ ಸಮಾಜದ ಸಬಲೀಕರಣ ಮತ್ತು ಸಮಾನತೆ ಎರಡನ್ನೂ ಸಾಧಿಸಲಿದ್ದೇವೆ ಎಂದು ಅವರು ಪ್ರತಿಪಾದಿಸಿದರು.

ವಿವೇಕಾನಂದರು ವಿಶ್ವ ಭ್ರಾತೃತ್ವವನ್ನು ಸಾರಿದ ಸಂತರಾಗಿದ್ದರು. ಈಗ ಎನ್‍ಇಪಿ ಮೂಲಕ ಯುವಜನರನ್ನು ಸಮಾಜಮುಖಿಗಳನ್ನಾಗಿ ಮಾಡಲಾಗುತ್ತಿದೆ. ಇದಕ್ಕೆ ತಕ್ಕಂತೆ ಯುವಜನರಿಗೆ ಅಗತ್ಯ ಕೌಶಲ್ಯಗಳನ್ನು ಕಲಿಸಲು ಸರಕಾರಿ ಐಟಿಐಗಳ ಸಮಗ್ರ ಸುಧಾರಣೆ, ಪದವಿ ಶಿಕ್ಷಣದಲ್ಲಿ ಗುಣಮಟ್ಟದ ಬೋಧನೆ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಉದ್ಯಮರಂಗದ ಸಹಭಾಗಿತ್ವ ಮುಂತಾದ ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ನುಡಿದರು.

ಜಾಗತೀಕರಣ ಮತ್ತು ಖಾಸಗೀಕರಣಗಳ ಈ ಯುಗದಲ್ಲಿ ಯುವಜನರು ಪ್ರಸ್ತುತವಾಗಿ ಉಳಿಯಬೇಕೆಂದರೆ ಶೈಕ್ಷಣಿಕ ಸಾಧನೆ ಅನಿವಾರ್ಯವಾಗಿದೆ. ಇದು ಸಾಧ್ಯವಾಗಬೇಕೆಂದರೆ ವಿವೇಕಾನಂದರಂತೆ ಸ್ವದೇಶಿ, ಸದೃಢ ಮತ್ತು ಸ್ವಾವಲಂಬಿ ಭಾರತದ ಕನಸನ್ನು ಕಾಣಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಶ್ರೀಧರ್, ಚಿಂತಕ ಡಾ.ಜಯಪ್ರಕಾಶ್, ಪ್ರೊ.ನರಸಿಂಹಮೂರ್ತಿ, ರಾಜೇಶ್ ಪದ್ಮಾರ್ ಮುಂತಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X