ಬೆಂಗಳೂರಿನ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜ.13: ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ರಾತ್ರಿ ವೇಳೆ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಇದೇ ತಿಂಗಳ 16ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸ್ ಲಿಮಿಟೆಡ್ (ನೈಸ್) ತಿಳಿಸಿದೆ.

Next Story





