Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನ ಉಳಿವಿಗೆ ಜಾಗೃತಿ ಅಭಿಯಾನ...

ಸಂವಿಧಾನ ಉಳಿವಿಗೆ ಜಾಗೃತಿ ಅಭಿಯಾನ ಅಗತ್ಯ: ರಾಜರತ್ನ ಅಂಬೇಡ್ಕರ್

ವಾರ್ತಾಭಾರತಿವಾರ್ತಾಭಾರತಿ13 Jan 2022 6:53 PM IST
share
ಸಂವಿಧಾನ ಉಳಿವಿಗೆ ಜಾಗೃತಿ ಅಭಿಯಾನ ಅಗತ್ಯ: ರಾಜರತ್ನ ಅಂಬೇಡ್ಕರ್

ಬೆಂಗಳೂರು, ಜ.13: ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದ ಉಳಿವಿಗೆ ಪ್ರತಿ ಹಳ್ಳಿಯಲ್ಲೂ ಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಅಗತ್ಯವಿದೆ ಎಂದು  ಸಂವಿಧಾನ ಸುರಕ್ಷಾ ಆಂದೋಲನದ ನೇತಾರ, ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ರಾಜರತ್ನ ಅಂಬೇಡ್ಕರ್ ಹೇಳಿದ್ದಾರೆ.

ನಗರದ ಶಾಸಕರ ಭವನದಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಸಂವಿಧಾನ ಸುರಕ್ಷಾ ಆಂದೋಲನದ ಕರ್ನಾಟಕ ಘಟಕವನ್ನು ರಚಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಲವು ರೀತಿಯ ಸ್ವರೂಪದಲ್ಲಿ ಸಂವಿಧಾನಕ್ಕೆ ಕುಂದುಂಟು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಸಂವಿಧಾನದ ಪ್ರಸ್ತಾವನೆಯನ್ನೂ ಬದಲಿಸುವಂತಹ ಪ್ರಯತ್ನಗಳು ಸದ್ಯದ ಪರಿಸ್ಥಿತಿಯಲ್ಲಿ ನಡೆಯುತ್ತಿವೆ. ಗ್ರಾಮ ಗ್ರಾಮಗಳಲ್ಲೂ ಇದರ ವಿರುದ್ಧ ಹೋರಾಟ ನಡೆಸಬೇಕಿದೆ ಎಂದರು.

ಅಹಿಂದ ಅಸ್ತಿತ್ವವೇ ಸಂವಿಧಾನದ ಮೇಲೆ ನಿಂತಿದೆ. ಸಂವಿಧಾನಕ್ಕೆ ಕುಂದುಂಟಾದರೆ ಈ ಸಮುದಾಯಗಳ ಅಸ್ತಿತ್ವಕ್ಕೆ ಅಪಾಯ ಎದುರಾಗುತ್ತದೆ. ಜನಪರವಾದ ಎಲ್ಲ ಹೋರಾಟಗಳೂ ಸಂವಿಧಾನದ ಬಲದಿಂದಲೇ ಗೆಲುವು ಸಾಧಿಸಿವೆ. ಈಗ ಸಂವಿಧಾನವನ್ನು ಮೂಲ ಸ್ವರೂಪದಲ್ಲೇ ಉಳಿಸಿಕೊಳ್ಳುವುದಕ್ಕೆ ಬಲವಾದ ಹೋರಾಟ ರೂಪಿಸಬೇಕಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಡಾ.ಸಿ.ಎಸ್.ದ್ವಾರಕಾನಾಥ್ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಅದೆಲ್ಲವನ್ನೂ ಸಂಘಟಿತವಾಗಿ ವಿರೋಧಿಸುವುದು ಈ ಆಂದೋಲನದ ಗುರಿ’ ಎಂದರು.

ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಸಂವಿಧಾನದ ಬಲದಲ್ಲೇ ಭಾರತ ನಿಂತಿದೆ. ಈಗ ಶಿಕ್ಷಣ, ಉದ್ಯೋಗ ಮತ್ತು ಇತರ ಹಕ್ಕುಗಳನ್ನು ದಮನಿಸುವ ಮೂಲಕ ಬಹುಸಂಖ್ಯಾತ ಜನರನ್ನು ಅಂಚಿಗೆ ತಳ್ಳುವ ಪ್ರಯತ್ನ ನಡೆದಿದೆ. ಸಂವಿಧಾನವನ್ನು ಉಳಿಸಿಕೊಂಡರೆ ಮಾತ್ರ ಈ ಜನರ ಹಕ್ಕುಗಳನ್ನು ರಕ್ಷಿಸಲು ಸಾಧ್ಯ. ಅದಕ್ಕಾಗಿ ಪ್ರತಿರೋಧ ರೂಪಿಸಲಾಗುವುದು ಎಂದು ಹೇಳಿದರು.

ಛಲವಾದಿ ಗುರುಪೀಠದ ಬಸವನಾಗಿದೇವ ಶ್ರೀ ಮಾತನಾಡಿ, ಸಂವಿಧಾನ ಮತ್ತು ಅದರ ಆಶಯಗಳಿಗೆ ವಿರುದ್ಧವಾದ ಕಾನೂನುಗಳನ್ನು ತರಲಾಗುತ್ತಿದೆ. ಇಂಥ ಪ್ರಯತ್ನಗಳನ್ನು ಬಲವಾಗಿ ವಿರೋಧಿಸಲೇಬೇಕಾಗಿದೆ ಎಂದರು.

ಸಂಚಾಲನಾ ಸಮಿತಿ ರಚನೆ: ಕರ್ನಾಟಕದಲ್ಲಿ ಸಂವಿಧಾನ ಸುರಕ್ಷಾ ಆಂದೋಲನವನ್ನು ಮುನ್ನಡೆಸುವುದಕ್ಕಾಗಿ ಸಂಚಾಲನಾ ಸಮಿತಿಯನ್ನು ರಚಿಸಲಾಯಿತು. ಡಾ.ಸಿ.ಎಸ್.ದ್ವಾರಕಾನಾಥ್ ಸೇರಿ 21 ಸದಸ್ಯರು ಸಮಿತಿಯಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X