Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ...

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ರದ್ದಾಗಲಿದೆ ಎಂಬುದು ಊಹಾಪೋಹ: ಮುಖ್ತಾರ್ ಹುಸೇನ್ ಪಠಾಣ್

ಬಜೆಟ್ ನಲ್ಲಿ ನಿಗಮಕ್ಕೆ 300 ಕೋಟಿ ರೂ. ಅನುದಾನ ನೀಡುವಂತೆ ಸಿಎಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ13 Jan 2022 7:01 PM IST
share
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ರದ್ದಾಗಲಿದೆ ಎಂಬುದು ಊಹಾಪೋಹ: ಮುಖ್ತಾರ್ ಹುಸೇನ್ ಪಠಾಣ್

ಬೆಂಗಳೂರು, ಜ.13: ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಎನ್‍ಸಿಇಎಫ್  ಸ್ಥಾನಮಾನವನ್ನು  ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ(ಕೆಎಂಡಿಸಿ) ಕಳೆದುಕೊಂಡಿದೆ ಇದರಿಂದ ನಿಗಮ ರದ್ದುಗೊಳ್ಳಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಸುದ್ದಿಗಳನ್ನು ಹರಿಬಿಡಲಾಗಿದೆ. ಇದು ಊಹಾಪೋಹ ಸುದ್ದಿಯಾಗಿದ್ದು ಈ ಸಂಬಂಧ ಯಾರು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಹುಸೇನ್ ಪಠಾಣ್ ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ನಗರದ ಅಂಬೇಡ್ಕರ್ ವೀಧಿಯಲ್ಲಿರುವ ವಿಶ್ವೇಶ್ವರಯ್ಯ ಗೋಪುರದಲ್ಲಿನ ನಿಗಮದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಿಸರ್ವ್ ಬ್ಯಾಂಕ್ ಮತ್ತು ನಿಗಮಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ರಿಸರ್ವ್ ಬ್ಯಾಂಕ್ ನಿಯಮಗಳ ಪ್ರಕಾರ ಕೆಲ ಮಾರ್ಗದರ್ಶಿ ನಿಯಮಗಳನ್ನು ಕೇಳಿದ್ದಾರೆ. ಇದರಲ್ಲಿ ಜನರು ಆತಂಕ ಪಡುವ ಯಾವುದೇ ವಿಚಾರವಿಲ್ಲ ಎಂದು ಸ್ಪಷ್ಟಪಡಿಸಿದರು.

2022-23ರ ಆಯವ್ಯಯದಲ್ಲಿ 300 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು. ಕಳೆದ ಬಜೆಟ್‍ನಲ್ಲಿ 55 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು. ಶಿಕ್ಷಣ, ಅರಿವು ಸಾಲ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಇನ್ನೂ 48 ಕೋಟಿ ರೂಪಾಯಿ ಅನುದಾನದ ಅಗತ್ಯವಿದೆ ಎಂದು ಅವರು ಹೇಳಿದರು.

ಪ್ರಸಕ್ತ ವರ್ಷದಲ್ಲಿ ನಿಗಮದಿಂದ ನೂತನವಾಗಿ ಮೂರು ಯೋಜನೆಗಳನ್ನು ಜಾರಿ ತರುವ ಉದ್ದೇಶ ಹೊಂದಲಾಗಿದೆ. ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸದ ಉದ್ದೇಶಕ್ಕೆ ಶೇ.4ರಷ್ಟು ಸಾಲ ಸೌಲಭ್ಯ, ವಸತಿ ನಿರ್ಮಾಣಕ್ಕೆ ಐದು ಲಕ್ಷ ರೂಪಾಯಿ ಸಾಲ ಸೌಲಭ್ಯ. ವ್ಯಾಪಾರ, ವಾಣಿಜ್ಯ ಚಟುವಟಿಕೆ ಕೈಗೊಳ್ಳುವ ಉದ್ದೇಶಗಳಿಗೆ 10 ಲಕ್ಷ ರೂಪಾಯಿ ಒದಗಿಸುವ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಆದುದರಿಂದ, ನಿಗಮಕ್ಕೆ 300 ಕೋಟಿ ರೂಪಾಯಿ ಹಣಕಾಸು ನೆರವು ನೀಡುವುವಂತೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಝೀರ್ ಪಾಷ, ನಿರ್ದೇಶಕ ಸದ್ದಾಂ ವಝೀರ್ ಗಾಂವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X