ಜ.31ರವರೆಗೆ ಉಡುಪಿ ಜಿಲ್ಲೆಯಲ್ಲಿ ಕೊರೋನ ಮಾರ್ಗಸೂಚಿ ವಿಸ್ತರಣೆ : ಡಿಸಿ ಕೂರ್ಮಾರಾವ್

ಉಡುಪಿ, ಜ.13: ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಕೋವಿಡ್-19 ವೈರಾಣು ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಪರೀಕ್ಷೆ- ಪತ್ತೆ- ಚಿಕಿತ್ಸೆ- ಲಸಿಕೀಕರಣ ಮತ್ತು ಕೋವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಅಗತ್ಯವಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೊರಡಿಸಿರುವ ಆದೇಶ ಹಾಗೂ ಕೋವಿಡ್ ಮಾರ್ಗಸೂಚಿ ಗಳನ್ನು ಮುಂದಿನ ಜ.31ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ಕಣ್ಗಾವಲು ನಿಯಂತ್ರಣ ಮತ್ತು ಜಾಗೃತಿ ಮಾರ್ಗಸೂಚಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ ಜನವರಿ 31ರ ಬೆಳಗ್ಗೆ 5 ಗಂಟೆಯವರೆಗೆ ವಿಸ್ತರಿಸಿರುವುದಾಗಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
Next Story