Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ...

ಹನೂರು: ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದಿಂದ ವಸತಿಗೃಹದಲ್ಲಿದ್ದ ಕುಟುಂಬದ ಏಕಾಏಕಿ ತೆರವು: ಆರೋಪ

ರಾತ್ರಿ ವೇಳೆ ಬೀದಿಗೆ ಬಿದ್ದ ಕುಟುಂಬ: ತೆರವಿಗೆ ನೀಡಿದ್ದ ಕಾಲಾವಕಾಶ ಮುಗಿದಿತ್ತು ಎಂದ ಪ್ರಾಧಿಕಾರ

ವಾರ್ತಾಭಾರತಿವಾರ್ತಾಭಾರತಿ15 Jan 2022 11:04 AM IST
share
ಹನೂರು: ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದಿಂದ ವಸತಿಗೃಹದಲ್ಲಿದ್ದ ಕುಟುಂಬದ ಏಕಾಏಕಿ ತೆರವು: ಆರೋಪ

ಹನೂರು, ಜ.15: ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಯೊಬ್ಬರು ನಿಧನರಾದ ಬಳಿಕವೂ ಪ್ರಾಧಿಕಾರದ ಖಾಯಂ ವಸತಿ ಗೃಹದಲ್ಲಿ ವಾಸವಿದ್ದ ಕಾರಣಕ್ಕೆ ಕುಟುಂಬವೊಂದನ್ನು ರಾತ್ರಿ ವೇಳೆ ತೆರವುಗೊಳಿಸಿ ಮನೆ ಸಾಮಗ್ರಿಗಳನ್ನೆಲ್ಲ ಬೀದಿಗೆ ತಂದಿಟ್ಟ ಘಟನೆ ಶುಕ್ರವಾರ ನಡೆದಿದೆ.

ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಯಾಗಿದ್ದ ಜಯಸ್ವಾಮಿ 2019ರಲ್ಲಿ ಅನಾರೋಗ್ಯಕ್ಕೀಡಾಗಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಕುಟುಂಬ ವಾಸವಿದ್ದ ಪ್ರಾಧಿಕಾರದ ಖಾಯಂ ವಸತಿ ಗೃಹದಿಂದ ಮನೆ ಖಾಲಿ ಮಾಡಲು ಪ್ರಾಧಿಕಾರ ಸೂಚಿಸಿ ಕಾಲಾವಕಾಶ ನೀಡಿತೆನ್ನಲಾಗಿದೆ. ಆದರೆ ಜಯಸ್ವಾಮಿ ನಿಧನದ ಬಳಿ ಅವರ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ನಮಗೆ ಸ್ವಂತ ಮನೆ, ಜಾಗ ಇಲ್ಲವಾಗಿದೆ. ಆದ್ದರಿಂದ ಅಪ್ಪನ ಪಿಎಫ್‍ ಸೇರಿದಂತೆ ಎಲ್ಲ ಕ್ಲೇಮ್ ಗಳನ್ನು ಸರಿಪಡಿಸಿಕೊಡಿ. ಅನುಕಂಪದ ಆಧಾರದಲ್ಲಿ ತನಗೊಂದು ಉದ್ಯೋಗಾವಕಾಶ ಕಲ್ಪಿಸಿ. ಆ ಬಳಿಕ ಬೇರೆ ಮನೆ ಮಾಡಿಕೊಂಡು ಮನೆ ಖಾಲಿ ಮಾಡುತ್ತೇವೆ ಎಂದು ಜಯಸ್ವಾಮಿಯವರ ಪುತ್ರ ಶಾಂತ ಮಲ್ಲೇಶ್‍ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಇದಕ್ಕೆ ಪ್ರಾಧಿಕಾರದ ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಅವರು ದೂರಿಕೊಂಡಿದ್ದಾರೆ.

ಆದರೆ ಕಳೆದ ರಾತ್ರಿ ವೇಳೆ ಪ್ರಾಧಿಕಾರದ ಅಧಿಕಾರಿಗಳು ಜಯಸ್ವಾಮಿ ಕುಟುಂಬ ವಾಸವಿದ್ದ ಪ್ರಾಧಿಕಾರದ ಖಾಯಂ ವಸತಿ ಗೃಹವನ್ನು ಖಾಲಿ ಮಾಡಿಸಿದ್ದಾರೆ. ಮನೆಮಂದಿಯ ವಿರೋಧವನ್ನು ಲೆಕ್ಕಿಸದೆ ರಾತ್ರಿಯೇ ಮನೆ ಸಾಮಗ್ರಿಗಳನ್ನೆಲ್ಲ ಬೀದಿಯಲ್ಲಿಟ್ಟು ಮನೆಗೆ ಬೀಗಮುದ್ರೆ ಹಾಕಿದ್ದಾರೆ. ಈ ವೇಳೆ ಮನೆಮಂದಿ ಬೀದಿಯಲ್ಲಿ ಕಣ್ಣೀರಿಡುತ್ತಿದ್ದ ದೃಶ್ಯ ಮನ ಕಲಕುವಂತಿತ್ತು.

ತೆರವಿಗೆ ಕಾಲಾವಕಾಶ ನೀಡಲಾಗಿತ್ತು: ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ

ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ನೌಕರರಾಗಿದ್ದ ಜಯಸ್ವಾಮಿ ಎಂಬುವವರು 2019ರಲ್ಲಿ ನಿಧನ ಹೊಂದಿದ್ದಾರೆ. ಬಳಿಕ ಅವರ ವಾರಸುದಾರರು ಪ್ರಾಧಿಕಾರದ ಖಾಯಂ ವಸತಿ ಗೃಹದಲ್ಲಿ ಅವಧಿಗೂ ಮೀರಿ ವಾಸವಿದ್ದ ಪ್ರಯುಕ್ತ 2019ರಲ್ಲೇ Public premises eviction act ಅಡಿಯಲ್ಲಿ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿತ್ತು. ನಿಯಮಾನುಸಾರ 45 ದಿನಗಳ ಕಾಲಾವಕಾಶ ನೀಡಿ ಮನೆ ತೆರವಿಗೆ ಆದೇಶ ಹೊರಡಿಸಿ ವಾರಸುದಾರರಿಗೆ ಆಗಸ್ಟ್ 2021ರಲ್ಲಿ ಜಾರಿ ಮಾಡಲಾಗಿತ್ತು ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

45 ದಿನಗಳೊಳಗೆ ವಾರಸುದಾರರು ಅನಧಿಕೃತವಾಗಿ ವಾಸವಿದ್ದ ಪ್ರಾಧಿಕಾರದ ಖಾಯಂ ವಸತಿ ಗೃಹವನ್ನು ತೆರವುಗೊಳಿಸಿಲ್ಲ. ತೆರವಿಗೆ ನೀಡಿದ್ದ ಕಾಲಾವಕಾಶ ಮುಗಿದಿರುವ ಹಿನ್ನೆಲೆಯಲ್ಲಿ ಜ.14ರ ಸಂಜೆ 5:30ರಿಂದ ಮನೆ ತೆರವು ಪ್ರಕ್ರಿಯೆ ಪ್ರಾರಂಭಿಸಲಾಗಿತ್ತು. ಆದರೆ ಮನೆಮಂದಿ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ತೆರವು ಕಾರ್ಯಾಚರಣೆಗೆ ಹೆಚ್ಚಿನ ಸಮಯ ಹಿಡಿಯಿತು ಎಂದು ಸ್ಪಷ್ಟಪಡಿಸಿದ್ದಾರೆ.

ಆದೇಶ ಹೊರಡಿಸಿ  ಸಾಕಷ್ಟು ಕಾಲಾವಕಾಶ ನೀಡಿದರೂ ಸ್ವಯಂ ತೆರವುಗೊಳಿಸದ ಪ್ರಯುಕ್ತ ಪ್ರಾಧಿಕಾರದ ವತಿಯಿಂದ ತೆರವುಗೊಳಿಸಿ ಮನೆಗೆ ಬೀಗಮುದ್ರೆ ಹಾಕಲಾಗಿದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X