ಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಚಮ್ಕೌರ್ ಸಾಹಿಬ್‌ನಿಂದ ಸ್ಪರ್ಧೆ
86 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಅಮೃತಸರದಿಂದ ನವಜೋತ್ ಸಿಧು ಕಣಕ್ಕಿಳಿಸಿದ ಕಾಂಗ್ರೆಸ್

ಚಂಡೀಗಢ: ಮುಂದಿನ ತಿಂಗಳು ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 86 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಚರಣ್ ಜಿತ್ ಚನ್ನಿ ಚಮ್ಕೌರ್ ಸಾಹೇಬ್ ಸ್ಥಾನದಿಂದ ಸ್ಪರ್ಧಿಸಲಿದ್ದರೆ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ (ಪೂರ್ವ) ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು NDTV ವರದಿ ಮಾಡಿದೆ.
ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದ ನಟ-ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಅವರಿಗೆ ಮೊಗಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಕಳೆದ ತಿಂಗಳು ಪಕ್ಷಕ್ಕೆ ಸೇರ್ಪಡೆಗೊಂಡ ವಿವಾದಾತ್ಮಕ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ತವರು ಪಟ್ಟಣ ಮಾನ್ ಸಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಪಂಜಾಬ್‌ನ 117 ಸ್ಥಾನಗಳಿಗೆ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 1 ರಂದು ಫಲಿತಾಂಶ ಪ್ರಕಟವಾಗಲಿದೆ.
Next Story





