Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎರಡನೇ ವಾರವೂ ರಾಜ್ಯದಲ್ಲಿ ಕರ್ಫ್ಯೂ...

ಎರಡನೇ ವಾರವೂ ರಾಜ್ಯದಲ್ಲಿ ಕರ್ಫ್ಯೂ ಮುಂದುವರಿಕೆ; ಜನಸಂಚಾರ ವಿರಳ

ವಾರ್ತಾಭಾರತಿವಾರ್ತಾಭಾರತಿ15 Jan 2022 6:06 PM IST
share
ಎರಡನೇ ವಾರವೂ ರಾಜ್ಯದಲ್ಲಿ ಕರ್ಫ್ಯೂ ಮುಂದುವರಿಕೆ; ಜನಸಂಚಾರ ವಿರಳ

ಬೆಂಗಳೂರು, ಜ.15: ಕೋವಿಡ್ ಮೂರನೇ ಅಲೆ ಹಿನ್ನೆಲೆ ರಾಜ್ಯಾದ್ಯಂತ ಎರಡು ದಿನಗಳ ಕಾಲ ಕೋವಿಡ್ ಮಾರ್ಗಸೂಚಿ ಅನ್ವಯ ವಾರಾಂತ್ಯ ಕರ್ಫ್ಯೂ ಚಾಲ್ತಿಯಲ್ಲಿದ್ದು, ವಾಹನ ಹಾಗೂ ಜನಸಂಚಾರ ವಿರಳವಾಗುತ್ತು.  

ಸೋಂಕಿನ ಪ್ರಮಾಣ ತಗ್ಗಿಸುವ ಸಲುವಾಗಿ ರಾಜ್ಯದ ವ್ಯಾಪ್ತಿಯಲ್ಲಿ ಸತತ ಎರಡನೆ ವಾರದಲ್ಲಿಯೂ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದು, ರಾಜಧಾನಿ ಬೆಂಗಳೂರು ಒಳಗೊಂಡಂತೆ ಜಿಲ್ಲಾ ಕೇಂದ್ರಗಳು ಜನಜಂಗುಳಿ ಇಲ್ಲದೆ ನಿಶಬ್ದವಾಗಿ ಕಂಡವು.

ಶುಕ್ರವಾರ ರಾತ್ರಿಯಿಂದ ರಾಜ್ಯದ ಎಲ್ಲೆಡೆ ವಾರಾಂತ್ಯ ಕರ್ಫ್ಯೂಆರಂಭಗೊಂಡಿತ್ತು. ಶನಿವಾರ ಬೆಳಗ್ಗೆ ಆಸ್ಪತ್ರೆ, ಔಷಧಿ ಮಳಿಗೆ, ಕಿರಾಣಿ ಅಂಗಡಿ, ತರಕಾರಿ, ಹಣ್ಣು-ಹಂಪಲು, ಎಳನೀರು ಮತ್ತು ಹೂವಿನ ಅಂಗಡಿಗಳು ಎಂದಿನಂತೆ ತೆರೆದಿದ್ದವು.

ಮತ್ತೊಂದೆಡೆ ಹೊಟೇಲ್‍ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ, ಪ್ರತಿನಿತ್ಯದಂತೆ ಕೆಲ ಬಸ್‍ಗಳ ಸಂಚಾರ ಮತ್ತು ಎಪಿಎಂಸಿ ಕಚೇರಿಯಲ್ಲಿ ವ್ಯಾಪಾರ-ವಹಿವಾಟು ನಡೆಯಿತು. ಆದರೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.

ವಿವಿಧ ರಸ್ತೆಗಳಲ್ಲಿ ಪೊಲೀಸರು ಸಂಚಾರ ನಡೆಸಿ, ಧ್ವನಿವರ್ಧಕದ ಮೂಲಕ ವಾರಾಂತ್ಯ ಕರ್ಫ್ಯೂನಿಯಮ ಪಾಲಿಸಬೇಕು ಮನವಿ ಮಾಡಿದರು. ಮಾಸ್ಕ್ ಧರಿಸದೆ ವ್ಯಾಪಾರ ಮಾಡುತ್ತಿದ್ದ ಮಹಿಳೆಯರು ಮತ್ತು ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಎಂದು ಕೋವಿಡ್ ಕುರಿತು ಜಾಗೃತಿ ಮೂಡಿಸಿದರು.

ರಾಜಧಾನಿಯಲ್ಲಿ ತಗ್ಗಿದ ಜನರ ಓಡಾಟ

ನಿತ್ಯ ಜನಜಂಗುಳಿಯಿಂದ ಕೂಡಿದ್ದ ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಿವಾಜಿನಗರ, ಶಾಂತಿನಗರ, ಸ್ಯಾಟ್‍ಲೈಟ್ ಸೇರಿದಂತೆ ಇನ್ನಿತರೆ ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುವ ದೃಶ್ಯ ಕಂಡಿತು.

ಬಿಎಂಟಿಸಿ ಬಸ್‍ಗಳ ಸಂಖ್ಯೆಯೂ ತೀರ ಕಡಿಮೆ ಇದ್ದ ಕಾರಣ ಪ್ರಯಾಣಿಕರ ಸಂಖ್ಯೆಯೂ ಇಳಿಮುಖವಾಗಿತ್ತು. ಕೇವಲ ತುರ್ತು ಸೇವೆಗಷ್ಟೇ ಅವಕಾಶ ಕಲ್ಪಿಸಲಾಗಿದ್ದು, ಭಾಗಶಃ ಬಸ್‍ಗಳು ಘಟಕಗಳಲ್ಲಿ ನಿಂತಿದ್ದವು.

ಆದರೆ, ಮೆಟ್ರೋ ಸಂಚಾರಕ್ಕೆ ಯಾವುದೇ ಅಡ್ಡಿ ಇರಲಿಲ್ಲ. ಜನರ ತುರ್ತು ಸೇವೆಗಾಗಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಶನಿವಾರ ಬೆಳಗ್ಗೆ 8 ಗಂಟೆಯಿಂದ ಮೆಟ್ರೋ ಓಡಾಟ ಪ್ರಾರಂಭವಾಗಿದ್ದು, ರಾತ್ರಿ 9 ಗಂಟೆಯವರೆಗೆ ಇತ್ತು.

ಕರ್ಫ್ಯೂ ಅವಧಿ

ಜ.14ರ ರಾತ್ರಿ 10 ಗಂಟೆಯಿಂದ ಜ. 17ರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂಜಾರಿಯಲ್ಲಿರಲಿದೆ.

ಹಲವು ವಾಹನಗಳು ಜಪ್ತಿ

ವಾರಾಂತ್ಯ ಕರ್ಫ್ಯೂನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿ, ಕಾರಣವಿಲ್ಲದೆ, ಹೊರಗೆ ಬಂದ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಶನಿವಾರ ಸುಮಾರು 200 ವಾಹನಗಳನ್ನು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖವಾಗಿ ಪಶ್ಚಿಮ ವಿಭಾಗದಲ್ಲಿ 103 ದ್ವಿಚಕ್ರ ವಾಹನಗಳು, 10 ಆಟೊಗಳು, 8 ಕಾರುಗಳು ಸೇರಿ 131 ವಾಹನ ಜಪ್ತಿ ಮಾಡಿದರೆ, ಉತ್ತರ ವಿಭಾಗದಲ್ಲಿ 17 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಚಿಕ್ಕಮಗಳೂರು: ಪೊಲೀಸರು ಅಗತ್ಯವಸ್ತುಗಳ ಅಂಗಡಿ ಮುಂಗಟ್ಟುಗಳನ್ನು ಹೊರತುಪಡಿಸಿದ ಉಳಿದಂತೆ ಅಂಗಡಿ ಮುಂಗಟ್ಟುಗಳನ್ನು ರಾತ್ರಿಯೇ ಬಂದ್ ಮಾಡಿಸಿದರು. ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ತಡೆದು ಮನೆಗೆ ಕಳಿಸಿದರು.

ಶನಿವಾರ ಬೆಳಗ್ಗೆಯೇ ರಸ್ತೆಗಿಳಿದ ಪೊಲೀಸರು ಅನಗತ್ಯ ಸಂಚಾರ ನಡೆಸುತ್ತಿದ್ದ ವಾಹನ ಸವಾರರನ್ನು ತಡೆದರು. ತುರ್ತು ಕೆಲಸಗಳಿಗೆ ತೆರಳುವ ವಾಹನ ಸವಾರರನ್ನು ಸೂಕ್ತ ದಾಖಲೆಗಳನ್ನು ಪ್ರದರ್ಶಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅಗತ್ಯವಸ್ತುಗಳ ಅಂಗಡಿ ಮುಂಗಟ್ಟುಗಳನ್ನು ಹೊರತುಪಡಿಸಿದಂತೆ ಇತರ ಅಂಗಡಿ ಮುಂಗಟ್ಟುಗಳು ಶನಿವಾರ ಬಾಗಿಲು ಹಾಕಿದ್ದವು. ಚಿಕ್ಕಮಗಳೂರು ನಗರದ ಎಂಜಿ ರಸ್ತೆ, ಐಜಿ ರಸ್ತೆ, ಮಾರ್ಕೆಟ್ ರಸ್ತೆ ಸೇರಿದಂತೆ ಇತರ ಪ್ರಮುಖ ರಸ್ತೆಗಳಲ್ಲಿನ ಬಟ್ಟೆ ಅಂಗಡಿ, ಗೃಹಪಯೋಗಿ ವಸ್ತುಗಳ ಅಂಗಡಿ, ಮೊಬೈಲ್ ಶಾಪ್‍ಗಳು ಸೇರಿದಂತೆ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X