Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಸಂಸ್ಕೃತ ವಿವಿಗೆ ವಿರೋಧ:...

ರಾಜ್ಯದಲ್ಲಿ ಸಂಸ್ಕೃತ ವಿವಿಗೆ ವಿರೋಧ: ಕರವೇಯಿಂದ ರವಿವಾರ ಟ್ವಿಟರ್‌ ಅಭಿಯಾನಕ್ಕೆ ಕರೆ

ವಾರ್ತಾಭಾರತಿವಾರ್ತಾಭಾರತಿ15 Jan 2022 8:27 PM IST
share
ರಾಜ್ಯದಲ್ಲಿ ಸಂಸ್ಕೃತ ವಿವಿಗೆ ವಿರೋಧ: ಕರವೇಯಿಂದ ರವಿವಾರ ಟ್ವಿಟರ್‌ ಅಭಿಯಾನಕ್ಕೆ ಕರೆ

ಬೆಂಗಳೂರು: ''ರಾಜ್ಯದಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಿರಲಿಲ್ಲ. ಕನ್ನಡಿಗರ ಮೇಲೆ ಪರನುಡಿಯನ್ನು ಹೇರುವ ಇಂಥ ಯತ್ನವನ್ನು ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ. ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ, ಈ ಬಗ್ಗೆ  ರವಿವಾರ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವ ಮೂಲಕ ಬಹುದೊಡ್ಡ ಹೋರಾಟವನ್ನು ಆರಂಭಿಸಲಿದೆ'' ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.  .

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಟಿ.ಎ ನಾರಾಯಣಗೌಡ, ''ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಯ ಮೂಲಕ ಕನ್ನಡ ನುಡಿಯನ್ನು ಹಿಂದಕ್ಕೆ ತಳ್ಳುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ನಾಳೆ (16-1-2022) ಬೆಳಿಗ್ಗೆ 11 ಗಂಟೆಯಿಂದ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವ ಮೂಲಕ ಬಹುದೊಡ್ಡ ಹೋರಾಟವನ್ನು ಆರಂಭಿಸಲಿದೆ''  ಎಂದು ತಿಳಿಸಿದರು.

''ಮೊದಲ ಹಂತದಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಹಿನ್ನೆಲೆಯ ಹುನ್ನಾರಗಳನ್ನು ಬಯಲಿಗೆಳೆದು ಜನಜಾಗೃತಿ ನಡೆಸಲಾಗುವುದು. ಮುಂದೆ ಹಂತಹಂತವಾಗಿ ರಾಜ್ಯದೆಲ್ಲೆಡೆ ಬೀದಿಹೋರಾಟಗಳನ್ನು ಸಂಘಟಿಸಲಾಗುವುದು. ಸಂಸ್ಕೃತ ವಿವಿ ರದ್ದುಗೊಳಿಸದಿದ್ದರೆ ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ'' ಎಂದರು.  

''ಮೊದಲ ಹಂತದಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಹಿನ್ನೆಲೆಯ ಹುನ್ನಾರಗಳನ್ನು ಬಯಲಿಗೆಳೆದು ಜನಜಾಗೃತಿ ನಡೆಸಲಾಗುವುದು. ಮುಂದೆ ಹಂತಹಂತವಾಗಿ ರಾಜ್ಯದೆಲ್ಲೆಡೆ ಬೀದಿಹೋರಾಟಗಳನ್ನು ಸಂಘಟಿಸಲಾಗುವುದು. ಸಂಸ್ಕೃತ ವಿವಿ ರದ್ದುಗೊಳಿಸದಿದ್ದರೆ ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ'' ಎಂದಿದ್ದಾರೆ.

''ಮಾಗಡಿ ಬಳಿ ನೂರು ಎಕರೆ ಜಾಗವನ್ನು ವಿವಿಗಾಗಿ ನೀಡಲಾಗಿದೆ. 359 ಕೋಟಿ ರುಪಾಯಿ ಕೊಡಲಾಗಿದೆ. ಇನ್ನೂ ಸಾವಿರಾರು ಕೋಟಿ ರುಪಾಯಿ ನಮ್ಮ ಹಣವನ್ನು ಕೊಡುವ ಸಾಧ್ಯತೆ ಇದೆ. ಈ ಎಲ್ಲ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ'' ಎಂದು ಎಚ್ಚರಿಸಿದ್ದಾರೆ.

''ಹಂಪಿಯಲ್ಲಿನ ಕನ್ನಡ ವಿವಿಯ ಸಿಬ್ಬಂದಿಗೆ ಹಣಕೊಡಲೂ ಸಹ ಇದೇ ಸರ್ಕಾರ ಹಣವಿಲ್ಲವೆಂಬ ಸಬೂಬು ನೀಡುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ, ಹೋರಾಟ ನಡೆಸಿ ಅನುದಾನ ಕೊಡಿಸಬೇಕಾಯಿತು. ಕನ್ನಡ ವಿವಿಗೆ ಇಲ್ಲದ ಹಣ ಸಂಸ್ಕೃತ ವಿವಿಗೆ ಎಲ್ಲಿಂದ ಬಂತು? ಸರ್ಕಾರ ಇದಕ್ಕೆ ಉತ್ತರ ನೀಡಬೇಕು'' ಎಂದು ಹೇಳಿದ್ದಾರೆ. 

''ಸಂಸ್ಕೃತ ಅಧ್ಯಾಪಕರು, ಸಂಸ್ಕೃತಕ್ಕೆ ಸಂಬಂಧಪಟ್ಟ ಸಂಸ್ಥೆಗಳು ನ್ಯಾಯಲಯಕ್ಕೆ ಹೋಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆಗೆ ಅಡ್ಡಿಯಾಗಿವೆ. ಇವರೆಲ್ಲ ಯಾರು, ಈ ಸಂಚುಕೂಟದ ಹುನ್ನಾರಗಳೇನು, ಇವರ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿದೆ''.

''ಕನ್ನಡದ ಶತ್ರುಗಳೆಲ್ಲ ನಮ್ಮ ಶತ್ರುಗಳು. ಕನ್ನಡವನ್ನು ಕತ್ತುಹಿಸುಕುವ ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಇಂಥವರಿಗೆ ಕಳೆದ ಇಪ್ಪತ್ತಮೂರು ವರ್ಷಗಳಲ್ಲಿ ಹಲವು ರೀತಿಯಲ್ಲಿ ಪಾಠ ಕಲಿಸಿದ್ದೇವೆ. ಕನ್ನಡ ನಾಡಿನಲ್ಲಿದ್ದುಕೊಂಡು ಕನ್ನಡಕ್ಕೆ ದ್ರೋಹ ಎಸಗುವವರು ಮೈಮೇಲೆ ಪ್ರಜ್ಞೆ ಇಟ್ಟುಕೊಂಡಿರಲಿ'' ಎಂದು ಹೇಳಿದ್ದಾರೆ.

''ನಾಳೆ ನಡೆಯುವ ಟ್ವಿಟರ್ ಅಭಿಯಾನದಲ್ಲಿ ಎಲ್ಲ ಕನ್ನಡದ ಮನಸುಗಳೂ ಪಾಲ್ಗೊಳ್ಳಬೇಕೆಂದು ವಿನಂತಿಸುತ್ತೇನೆ. ಇದು ದೊಡ್ಡ ಚಳವಳಿಯ ಸಣ್ಣ ಆರಂಭವಷ್ಟೆ. ನಾವು ಸಾಗಬೇಕಾದ ಹಾದಿ ದೂರವಿದೆ. ಕನ್ನಡದ ಜನತೆ ಸಂಸ್ಕೃತಪ್ರಿಯರ ಹುನ್ನಾರಗಳನ್ನು ಅರಿತು ಹೋರಾಡಲೇಬೇಕಾದ ಅನಿವಾರ್ಯತೆ ಈಗ ಉಂಟಾಗಿದೆ'' ಎಂದು ಟ್ವಟರ್ ನಲ್ಲಿ ನಾರಾಯಣ ಗೌಡ ಹೇಳಿಕೊಂಡಿದ್ದಾರೆ 

ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಯ ಮೂಲಕ ಕನ್ನಡ ನುಡಿಯನ್ನು ಹಿಂದಕ್ಕೆ ತಳ್ಳುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ನಾಳೆ (16-1-2022) ಬೆಳಿಗ್ಗೆ 11 ಗಂಟೆಯಿಂದ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವ ಮೂಲಕ ಬಹುದೊಡ್ಡ ಹೋರಾಟವನ್ನು ಆರಂಭಿಸಲಿದೆ.(2/8)
#ಸಂಸ್ಕೃತವಿವಿಬೇಡ #SayNoToSanskrit

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) January 15, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X