Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೋಷಣೆ, ಮಹಿಳಾ ಅಸಮಾನತೆ, ಜಾತಿ...

ಶೋಷಣೆ, ಮಹಿಳಾ ಅಸಮಾನತೆ, ಜಾತಿ ಪ್ರತಿಪಾದನೆಗೆ ಕೇಂದ್ರ ಸರಕಾರದಿಂದ ಪರೋಕ್ಷ ಉತ್ತೇಜನ: ಬಿ.ಕೆ.ಹರಿಪ್ರಸಾದ್‌

"ಕೇಂದ್ರ ಸರಕಾರದಿಂದ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ"

ವಾರ್ತಾಭಾರತಿವಾರ್ತಾಭಾರತಿ16 Jan 2022 2:50 PM IST
share
ಶೋಷಣೆ, ಮಹಿಳಾ ಅಸಮಾನತೆ, ಜಾತಿ ಪ್ರತಿಪಾದನೆಗೆ ಕೇಂದ್ರ ಸರಕಾರದಿಂದ ಪರೋಕ್ಷ ಉತ್ತೇಜನ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು, ಜ.16: ಕೇರಳ ರಾಜ್ಯ ಕಳುಹಿಸಿದ್ದ ತನ್ನ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಕ್ರಾಂತಿಕಾರಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಈ ಮೂಲಕ ಭಾರತದ ಚಾರಿತ್ರಿಕ, ಮಹತ್ವದ ಕ್ರಾಂತಿಕಾರಿ ಸಮಾಜ ಸುಧಾರಕನಿಗೆ ಅಪಮಾನಿಸಿದೆ. ಜೊತೆಗೆ ಶೋಷಣೆ, ಮಹಿಳಾ ಅಸಮಾನತೆ, ಜಾತಿ ಪ್ರತಿಪಾದನೆಯನ್ನು ಪರೋಕ್ಷವಾಗಿ ಕೇಂದ್ರ ಸರಕಾರ ಉತ್ತೇಜಿಸಿದಂತಾಗಿದೆ ಎಂದು ಕಾಂಗ್ರೆಸ್‌ ಹಿರಿಯ ಮುಖಂಡರು ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾ ಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರಕಾರ ಅಪಮಾನಿಸಿರುವುದು ಖಂಡನೀಯ ಎಂದರು.

ದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ದೇಶದ ಸಾಂಸ್ಕೃತಿಕ, ಧಾರ್ಮಿಕ ಐತಿಹಾಸಿಕ, ಅಭಿವೃದ್ಧಿ ಮತ್ತು ಮಿಲಿಟರಿ ಸಾಮರ್ಥ್ಯವನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳ ಪ್ರದರ್ಶನವನ್ನು ಏರ್ಪಡಿಸಲಾಗುತ್ತದೆ. ಹಾಗೆಯೇ, ರಾಜ್ಯಗಳು ತಮ್ಮ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳನ್ನು ಕಳುಹಿಸುವ ಪರಿಪಾಠವಿದೆ. ಅದರಂತೆ, ಕೇರಳ ಸರಕಾರ ಕಳುಹಿಸಿದ್ದ ಕ್ರಾಂತಿಕಾರಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸುವ ಮೂಲ ಅಪಮಾನಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾರಾಯಣ ಗುರುಗಳು ಮೂಲತಃ ಕೇರಳ ರಾಜ್ಯದವರು ಎಂಬುದಕ್ಕೆ ಪರಿಪೂರ್ಣವಾದ ದಾಖಲೆ ಲಭ್ಯವಿದೆ. ಅಲ್ಲದೆ, ಶತಮಾನಗಳ ಹಿಂದಿನ ಅವರ ಸಮಾಜ ಸುಧಾರಣೆಯ ಬಗ್ಗೆ ನೂರಾರು ದಾಖಲೆಗಳು ಲಭ್ಯವಿವೆ. ಶೋಷಣೆ, ಜಾತೀಯತೆ, ಅಸಮಾನತೆ ನಿಮ್ನ ವರ್ಗದವರ ಅಪಮಾನಿಸುವುದರ ವಿರುದ್ಧ ಸಿಡಿದು ನಿಂತು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಸಾರಿದ್ದಲ್ಲದೆ, ಸಮಾಜದಲ್ಲಿ ಸಮಾನತೆಗಾಗಿ ಬದುಕಿನುದ್ದಕ್ಕೂ ಶ್ರೀ ನಾರಾಯಣ ಗುರುಗಳು ಶ್ರಮಿಸಿದ್ದಾರೆ. ಅವರ ಕ್ರಾಂತಿಕಾರಿ ಸುಧಾರಣೆಯ ಮಾಹಿತಿ ತಿಳಿದಂತಹ ಮಹಾತ್ಮಾ ಗಾಂಧಿ ಅವರು ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿ ನಾರಾಯಣಗುರುಗಳ ವೈಕಂ ಹೋರಾಟವನ್ನು ಬೆಂಬಲಿಸಿ ಗೌರವಿಸಿದ್ದರು. ಭಾರತಕ್ಕೆ ರಾಷ್ಟ್ರಗೀತೆಯನ್ನು ನೀಡಿದ ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್.ಅಂಬೇಡ್ಕರ್ ಅವರಿಂದ ಶ್ರೀ ನಾರಾಯಣ ಗುರುಗಳು ಗೌರವಿಸಲ್ಪಟ್ಟಿದ್ದಾರೆ. ಆದರೆ, ಇಂದಿನ ಸಂಘ ಪರಿವಾರದ ನಿಯಂತ್ರಣದಲ್ಲಿರುವ ಕೇಂದ್ರ ಸರಕಾರ ಅವರ ಸ್ತಬ್ಧಚಿತ್ರವನ್ನು ತಿರಸ್ಕರಿಸುವ ಮೂಲಕ ಅವರನ್ನು ಅಪಮಾನಿಸಿರುವುದು ತೀವ್ರ ಖಂಡನೀಯ ಎಂದರು.

ಇಂತಹ ಸಮ ಸಮಾಜದ ಹೋರಾಟಗಾರನಿಗೆ ಕೇಂದ್ರ ಬಿಜೆಪಿ ಸರಕಾರ ರಚಿಸಿರುವ ಆಯ್ಕೆ ಸಮಿತಿ ಅಪಮಾನ ಮಾಡಿದೆ. ಈ ತಿರಸ್ಕಾರ ನಾರಾಯಣ ಗುರುಗಳಿಗೆ ಮಾತ್ರವಲ್ಲ, ದೇಶದ ಕೋಟ್ಯಂತರ ಶೋಷಿತ ಸಮಾಜಕ್ಕೆ ಮಾಡಿರುವ ಅವಮಾನ ಆಗಿದೆ.   ಕೇಂದ್ರ ಸರ್ಕಾರ ತಕ್ಷಣ ತನ್ನ ಪ್ರಮಾದ ಮತ್ತು ತಪ್ಪಿಗೆ ದೇಶದ ಜನತೆಯ ಕ್ಷಮೆ ಕೋರುವುದರ ಜೊತೆಗೆ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಈ ಬಾರಿಯ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಸೇರ್ಪಡೆ ಗೊಳಿಸಬೇಕೆಂದು ಬಿ.ಕೆ.ಹರಿಪ್ರಸಾದ್‌ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X