Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಈ ವರ್ಷ 200 ಸ್ಟಾರ್ಟ್...

ರಾಜ್ಯದಲ್ಲಿ ಈ ವರ್ಷ 200 ಸ್ಟಾರ್ಟ್ ಅಪ್‍ಗಳಿಗೆ ತಲಾ 50 ಲಕ್ಷ ರೂ.ವರೆಗೆ ಮೂಲನಿಧಿ: ಸಚಿವ ಡಾ.ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ16 Jan 2022 9:13 PM IST
share
ರಾಜ್ಯದಲ್ಲಿ ಈ ವರ್ಷ 200 ಸ್ಟಾರ್ಟ್ ಅಪ್‍ಗಳಿಗೆ ತಲಾ 50 ಲಕ್ಷ ರೂ.ವರೆಗೆ ಮೂಲನಿಧಿ: ಸಚಿವ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಜ. 16: `ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹೆಚ್ಚುವರಿಯಾಗಿ 75 ನವೋದ್ಯಮಗಳಿಗೆ ಸೇರಿದಂತೆ ಈ ವರ್ಷ ರಾಜ್ಯದಲ್ಲಿ ಒಟ್ಟು 200 ನವೋದ್ಯಮಗಳಿಗೆ ಗರಿಷ್ಟ ತಲಾ 50 ಲಕ್ಷ ರೂ.ಗಳ ವರೆಗೆ ಮೂಲನಿಧಿ(ಸೀಡ್ ಫಂಡ್) ನೀಡಲಾಗುವುದು' ಎಂದು ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ರವಿವಾರ ವಿಧಾನಸೌಧದಲ್ಲಿ ಏರ್ಪಡಿಸಲಾಗಿದ್ದ ಪ್ರಪ್ರಥಮ `ರಾಷ್ಟ್ರೀಯ ನವೋದ್ಯಮ ದಿನ'ದಲ್ಲಿ ಮಾತನಾಡಿದ ಅವರು, `ರಾಜ್ಯದಲ್ಲಿ ಇದುವರೆಗೆ ಸರಿಸುಮಾರು 500 ಸ್ಟಾರ್ಟ್‍ಅಪ್‍ಗಳಿಗೆ ಅನುದಾನ ಕೊಡಲಾಗಿದ್ದು, ಮೂಲನಿಧಿ ಕೊಡುವ ಉಪಕ್ರಮ ಬೇರಾವ ರಾಜ್ಯದಲ್ಲೂ ಇಲ್ಲ. ಪ್ರಸ್ತುತ ಹಣಕಾಸು ವರ್ಷದಲ್ಲಿ ಈವರೆಗೆ ರಾಜ್ಯದಲ್ಲಿ ಉದ್ದಿಮೆಗಳ ಸ್ಥಾಪನೆಗಾಗಿ 1.60 ಲಕ್ಷ ಕೋಟಿ ರೂ. ವಿದೇಶಿ ಬಂಡವಾಳ ಹರಿದುಬಂದಿದ್ದು, ಒಟ್ಟಾರೆಯಾಗಿ ದೇಶದಲ್ಲಿ ಆಗಿರುವ ಹೂಡಿಕೆಯಲ್ಲಿ ಶೇ.50ಕ್ಕಿಂತ ಹೆಚ್ಚು ಭಾಗ ಕರ್ನಾಟಕದಲ್ಲೇ ಆಗಿದೆ ಎಂದರು.

ದೇಶದಲ್ಲಿ ಒಟ್ಟು 57 ಸಾವಿರ ನವೋದ್ಯಮಗಳಿವೆ. ಈ ಪೈಕಿ 13 ಸಾವಿರಕ್ಕೂ ಹೆಚ್ಚು ಸ್ಟಾರ್ಟಅಪ್‍ಗಳು ರಾಜ್ಯದಲ್ಲೇ ನೆಲೆ ಹೊಂದಿವೆ. ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ರಾಜ್ಯದ ಈ ಮುಂಚೂಣಿ ಸ್ಥಾನವನ್ನು ಕಾಯ್ದುಕೊಳ್ಳಲು ಪೂರಕವಾಗಿರಲಿದೆ. ದೇಶವು `ವಿಶ್ವಗುರು'ವಾಗಿ ಹಾಗೂ `ಸೂಪರ್ ಪವರ್' ಆಗಿ ಹೊರಹೊಮ್ಮುವಲ್ಲಿ ನವೋದ್ಯಮಗಳ ಪಾತ್ರ ನಿರ್ಣಾಯಕ ಎಂಬುದನ್ನು ಪ್ರಧಾನಮಂತ್ರಿ ಮೋದಿ ಅವರು ಒತ್ತಿ ಹೇಳಿದ್ದಾರೆ.

ಇದನ್ನು ಗಮನದಲ್ಲಿರಿಸಿಕೊಂಡು ರಾಜ್ಯದಲ್ಲಿ ಹಾರ್ಡ್‍ವೇರ್ ವಲಯವನ್ನೂ ದಕ್ಷವಾಗಿ ಬೆಳೆಸಲಾಗುವುದು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ  ಸ್ಥಾಪಿಸಿರುವ `ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಂಡ್ ರೋಬೋಟಿಕ್ಸ್ ಟ್ರಾನ್ಸ್ಲೇಷನ್ ಪಾರ್ಕ್' (ಆರ್ಟ್ ಪಾರ್ಕ್) ಈ ದಿಸೆಯಲ್ಲಿ ರಾಜ್ಯ ಸರಕಾರದ ಬದ್ಧತೆಗೆ ಒಂದು ಉದಾಹರಣೆಯಷ್ಟೇ ಎಂದು ಅವರು ಅಭಿಪ್ರಾಯಪಟ್ಟರು. 

ರಾಜ್ಯದಲ್ಲಿ ಎಲೆಕ್ಟ್ರಾನಿಕ್ ಉದ್ದಿಮೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಮುಂದಿನ ಐದು ವರ್ಷಗಳಲ್ಲಿ ಇಎಸ್ ಡಿಎಂ ನೀತಿಯಡಿ 5ಸಾವಿರ ಕೋಟಿ ರೂ. ಸಬ್ಸಿಡಿ ಕೊಡಲಾಗುವುದು. ಇದರಲ್ಲಿ ಮೊದಲನೇ ವರ್ಷದಲ್ಲೇ 2 ಸಾವಿರ ಕೋಟಿ ರೂ. ನೆರವು ಒದಗಿಸಲಾಗಿದೆ ಎಂದು ಡಾ.ಅಶ್ವತ್ಥ ನಾರಾಯಣ ಇದೇ ಸಂದರ್ಭದಲ್ಲಿ ತಿಳಿಸಿದರು. 

ರಾಜ್ಯ ಸ್ಟಾರ್ಟ ಅಪ್ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಮಾತನಾಡಿ, `ನಾವು ಕೇವಲ ನಮಗಾಗಿ ಮಾತ್ರ ಉತ್ಪನ್ನಗಳನ್ನು ತಯಾರಿಸಿದರೆ ಸಾಲದು. ಚೀನಾದಂತೆ ಇಡೀ ಜಗತ್ತಿನ ಅಗತ್ಯಗಳನ್ನು ಗಮನಿಸಿ, ಮಾರುಕಟ್ಟೆ ಹಿಗ್ಗಿಸಿಕೊಳ್ಳಬೇಕು. ಬೆಂಗಳೂರೇ ಈಗ ದೇಶದ ಆರ್ಥಿಕ ರಾಜಧಾನಿಯಾಗಿದೆ' ಎಂದು ಸಲಹೆ ನೀಡಿದರು. 

ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ ಮಾತನಾಡಿ, `ರಾಜ್ಯದಲ್ಲಿ 20 ವರ್ಷಗಳಲ್ಲಿ ನಮ್ಮ ಉದ್ಯಮ ವ್ಯವಸ್ಥೆ ಆಮೂಲಾಗ್ರವಾಗಿ ಬದಲಾಗಿದೆ. ಈಗ ಉದ್ಯಮಶೀಲ ವ್ಯಕ್ತಿಗಳಲ್ಲಿರುವ ಹೊಸ ಆಲೋಚನೆಗಳನ್ನು ತ್ವರಿತ ಗತಿಯಲ್ಲಿ ಗುರುತಿಸಲಾಗುತ್ತಿದ್ದು, ಅಗತ್ಯ ನೆರವು ಮತ್ತು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು. 

ಐಟಿ ಮತ್ತು ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮಾತನಾಡಿ, ರಾಜ್ಯದಲ್ಲಿ ನವೋದ್ಯಮಗಳಿಗೆ ಪ್ರಶಸ್ತವಾದ ಹಲವು ನೀತಿಗಳಿದ್ದು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಮುಂದಿನ ಐದು ವರ್ಷಗಳ ಬೆಳವಣಿಗೆಗೆ ವೇದಿಕೆ ಸಿದ್ಧಪಡಿಸಲಾಗಿದೆ ಎಂದರು. 

ರಾಜ್ಯದ 14 ನವೋದ್ಯಮಗಳಿಗೆ ಪ್ರಶಸ್ತಿ: ಅಖಿಲ ಭಾರತ ಮಟ್ಟದಲ್ಲಿ ಮೊದಲ ಬಾರಿಗೆ ನಡೆದ `ಸ್ಟಾರ್ಟ್‍ಅಪ್ ಇಂಡಿಯಾ ನಾವೀನ್ಯತಾ ಸಪ್ತಾಹ'ದಲ್ಲಿ ವಿವಿಧ ವಲಯಗಳಲ್ಲಿ ರಾಜ್ಯದ 14 ನವೋದ್ಯಮಗಳು ಪ್ರಶಸ್ತಿ ಪುರಸ್ಕಾರಕ್ಕೆ ಪಾತ್ರವಾಗಿವೆ. ರಾಷ್ಟ್ರ ಮಟ್ಟದಲ್ಲಿ 46 ನವೋದ್ಯಮಗಳಿಗೆ ಪ್ರಶಸ್ತಿ ನೀಡಿದ್ದು, ಅವುಗಳಲ್ಲಿ ಸಿಂಹ ಪಾಲು (14) ಕರ್ನಾಟಕದ ಸಂಸ್ಥೆಗಳಿಗೇ ಸಿಕ್ಕಿದೆ ಎಂದು ಹೇಳಿದರು. 

ನಫಾ ಇನ್ನೋವೇಷನ್ಸ್, ಉಂಬೋ ಇಡ್-ಟೆಕ್  (ಫಿನ್ಟೆಕ್), ಥಿಂಕರ್ ಬೆಲ್ ಲ್ಯಾಬ್ಸ್ (ಎಡುಟೆಕ್), ಸಿಂಪ್ಲೋಟೆಲ್ ಟೆಕ್ನಾಲಜೀಸ್ (ಪ್ರವಾಸ ಮತ್ತು ಆತಿಥ್ಯೋದ್ಯಮ), ಬ್ಲಿಂಕಿನ್ ಟೆಕ್ನಾಲಜೀಸ್ (ಆಗ್ಮೆಂಟೆಡ್ ರಿಯಾಲಿಟಿ), ಟ್ಯಾಗ್ ಬಾಕ್ಸ್ ಸೊಲ್ಯೂಷನ್ಸ್ (ಐಒಟಿ), ಶಾಪೆಪೋಸ್ ಸರ್ವೀಸಸ್, ಆತ್ರೇಯ ಗ್ಲೋಬಲ್ ಸೊಲ್ಯೂಷನ್ಸ್, ಝೆನ್ ಟ್ರಾನ್ ಲ್ಯಾಬ್ಸ್ ಪ್ರೈ.ಲಿ. (ಕೃಷಿ), ಲೀಡ್ ಸ್ಕ್ವೇರ್ಡ್ (ಗ್ರಾಹಕ ಸಂಬಂಧ), ಲಿಯೂಸಿನ್ ರಿಚ್ ಬಯೋ ಪ್ರೈ.ಲಿ. (ಜೀವವಿಜ್ಞಾನ), ಸ್ಟೆಲ್ ಆಪ್ಸ್ (ಪಶು ಸಂಗೋಪನೆ), 1ಬ್ರಿಡ್ಜ್ (ಲಾಜಿಸ್ಟಿಕ್ಸ್) ಮತ್ತು ಸ್ಟೆರಡಿಯನ್ ಸೆಮಿ (ಸಾರಿಗೆ ನಿರ್ವಹಣೆ)- ಇವು ಪುರಸ್ಕೃತ ಕಂಪೆನಿಗಳಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X