ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಕಾರ್ಕಳ, ಜ.16: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜ.15ರಂದು ರಾತ್ರಿ ವೇಳೆ ಕುಕ್ಕುಂದೂರು ಗ್ರಾಮದ ಜೋಡುರಸ್ತೆ ದುರ್ಗಾ ಆರ್ಟ್ಸ್ ಬಳಿ ನಡೆದಿದೆ.
ಮೃತರನ್ನು ಕುಕ್ಕುಂದೂರು ಗ್ರಾಮದ ಜೋಡುರಸ್ತೆಯ ಕರಿಯ ಶೆಟ್ಟಿ(69) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆ ಯಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಕಾರು, ಜೋಡುರಸ್ತೆ ಕಡೆಯಿಂದ ಹಿರ್ಗಾನ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಕರಿಯ ಶೆಟ್ಟಿಗೆ ಹಿಂದಿನಿಂದ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಯಲ್ಲಿ ಜ.16ರಂದು ನಸುಕಿನ ವೇಳೆ 2ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story





